ಕೂಡಿಗೆ, ಅ. ೩೦: ಕೂಡಿಗೆ ಗ್ರಾಮ ಪಂಚಾಯಿತಿಯ ಮಾಸಿಕ ಸಭೆಯು ಮಂಗಳಾ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ಜರುಗಿತ್ತು. ಮೊದಲಿಗೆ ೧೫ನೇ ಹಣಕಾಸು ಯೋಜನೆಯಲ್ಲಿ ಕ್ರಿಯಾ ಯೋಜನೆಗೊಂಡ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಹಾಜರಿದ್ದ ಸರ್ವ ಸದಸ್ಯರು ಸಭೆಯ ಮೂಲಕ ಒತ್ತಾಯ ಮಾಡಿದರು. ಕಾಮಗಾರಿಗಳಿಗೆ ಕ್ರಿಯಾ ಯೋಜನೆಯ ಮೂಲಕ ಹಣವನ್ನು ಬಿಡುಗಡೆಗೊಳಿಸಿದರೂ ಸಹ ಅನೇಕ ಗ್ರಾಮಗಳಲ್ಲಿ ಕಾಮಗಾರಿಯು ಪೂರ್ಣಗೊಂಡಿರುವುದಿಲ್ಲ. ಅದರಿಂದ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸುವಂತೆ ತೀರ್ಮಾಸಿದರು.

ನಂತರ ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ಜಲಜೀವನ್ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಂಬAಧಿಸಿದ ಅಧಿಕಾರಿಗಳಿಗೆ ಪತ್ರ ವ್ಯವಹಾರವನ್ನು ನಡೆಸುವಂತೆ ಸಭೆಯಲ್ಲಿ ಚರ್ಚೆಗಳು ನಡೆದಿವೆ. ನಂತರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಚಿತ್ವದ ಬಗ್ಗೆ ಹೆಚ್ಚಿನ ಗಮನವನ್ನು ಹರಿಸಿ ಸ್ವಚ್ಛತೆಯನ್ನು ಕಾಪಾಡಲು ಹೆಚ್ಚಿನ ಅನುದಾನವನ್ನು ಕಾಯ್ದಿರಿಸಿ, ಅಭಿವೃದ್ಧಿಗೆ ಪೂರಕವಾದ ಅಂಶಗಳನ್ನು ಕೈಗೊಳ್ಳುವ ವಿಷಯದ ಬಗ್ಗೆ ಚರ್ಚಿಸಿದರು.

ಅಭಿವೃದ್ಧಿ ಅಧಿಕಾರಿ ಎಂ.ಕೆ. ಅಯಿಷಾ ಸಭೆಗೆ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಸಮರ್ಪಕವಾದ ಮಾಹಿತಿಯನ್ನು ಒದಗಿಸಿದರು.ಅಲ್ಲದೆ ಮುಂದಿನ ದಿನಗಳಲ್ಲಿ ಶುಚಿತ್ವಕ್ಕೆ ಹೆಚ್ಚಿನ ಅಧ್ಯತೆಯನ್ನು ನೀಡಲಾಗುವುದು ಸಾರ್ವಜನಿಕ ಮತ್ತು ಅಂಗಡಿ ಮಾಲೀಕರು ಪ್ಲಾಸ್ಟಿಕ್ ಬಳಕೆ ಮಾಡಿದರೆ ಕಾನೂನಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದಕ್ಕೆ ಸಂಬAಧಿಸಿದAತೆ ಸಾರ್ವಜನಿಕವಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗ್ರಾಮದ ಪ್ರಗತಿಗೆ ಸಾರ್ವಜನಿಕರ ಕಂದಾಯವನ್ನು ಸಂದಾಯ ಮಾಡುವ ಮೂಲಕ ಸಹಕಾರ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ, ಸದಸ್ಯರಾದ ಟಿ.ಪಿ. ಹಮೀದ್, ಅನಂತ್, ಅರುಣ್ ರಾವ್, ಗಿರೀಶ್, ಶಿವಕುಮಾರ್, ಹೆಚ್ ಎಸ್. ರವಿ, ಚಂದ್ರು, ಜಯಶ್ರೀ, ಜಯಶೀಲಾ, ವಾಣಿ, ರತ್ನಮ್ಮ ಪಲ್ಲವಿ, ಲಕ್ಷಿ, ಕಾರ್ಯದರ್ಶಿ ಪುನಿತ್, ಕಂದಾಯ ವಸೂಲಿಗಾರ ಅನಿಲ್ ಹಾಜರಿದ್ದರು.