ಮಡಿಕೇರಿ, ಅ. ೩೦: ಭಾರತ ಸರ್ಕಾರ, ಜಿಲ್ಲಾ ಆಡಳಿತ, ನೆಹರು ಯುವ ಕೇಂದ್ರ, ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ತಾಲೂಕು ಯುವ ಒಕ್ಕೂಟ, ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಹಾಗೂ ಮಡಿಕೇರಿ ಕಾವೇರಿ ಕಲಾ ವೃಂದ ಸಂಯುಕ್ತ ಅಶ್ರಯದಲ್ಲಿ ನ. ೫ ರಂದು ಹಮ್ಮಿಕೊಂಡಿದ್ದ ಕೊಡಗು ಜಿಲ್ಲಾ ಮಟ್ಟದ ಯುವ ಉತ್ಸವವನ್ನು ಮುಂದೂಡಲಾಗಿದೆ. ಕಾರ್ಯಕ್ರಮದ ದಿನಾಂಕವನ್ನು ಈಗಾಗಲೇ ನೋಂದಾವಣೆಗೊAಡವರಿಗೆ ತಿಳಿಸಲಾಗುವುದು. ಸ್ಪರ್ಧಾಳುಗಳು ಸಹಕರಿಸುವಂತೆ ಕೊಡಗು ಜಿಲ್ಲಾ ಯುವ ಒಕ್ಕೂಟ ಅಧ್ಯಕ್ಷ ಸುಕುಮಾರ್ ಮನವಿ ಮಾಡಿದ್ದಾರೆ.