ಕಣಿವೆ, ಅ. ೨೯: ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಗ್ರಾಮ ಸಭೆ ಪಂಚಾಯಿತಿ ಅಧ್ಯಕ್ಷೆ ಕೆ.ಜೆ. ಗೀತಾ ಅವರ ಅಧ್ಯಕ್ಷತೆಯಲ್ಲಿ ಶಿರಂಗಾಲದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು.
ಗ್ರಾಮಸಭೆಯನ್ನು ಹಿರಿಯ ನಾಗರಿಕ ಮಣಜೂರಿನ ಸೋಮಶೇಖರ್ ಉದ್ಘಾಟಿಸಿದರು. ಸಭೆ ಆರಂಭವಾಗುತ್ತಿದ್ದAತೆಯೇ ಗ್ರಾಮ ನಿವಾಸಿಗಳು ತಮ್ಮ ತಮ್ಮ ಗ್ರಾಮಗಳ ಸಮಸ್ಯೆಗಳನ್ನು ಸಭೆಯಲ್ಲಿ ತೆರೆದಿಟ್ಟರು.
ಈ ಬಾರಿ ಹೆಚ್ಚು ಮಳೆ ಸುರಿದ ಕಾರಣ ಗ್ರಾಮೀಣ ಸಂಪರ್ಕ ರಸ್ತೆಗಳು ಹಾಳಾಗಿದ್ದು, ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಕೂಡಲೇ ರಸ್ತೆಯ ಗುಂಡಿಗಳನ್ನು ಮುಚ್ಚಬೇಕು ಎಂದು ಗ್ರಾಮದ ಧನೇಂದ್ರಕುಮಾರ್, ಸಿ.ಎನ್. ಲೋಕೇಶ್, ಚಂದ್ರಶೇಖರ್ ಮೊದಲಾದವರು ಒತ್ತಾಯಿಸಿದರು.
ಮಣಜೂರು ಗ್ರಾಮದಲ್ಲಿ ನೀರಾವರಿ ನಿಗಮದ ವತಿಯಿಂದ ಹೆದ್ದಾರಿ ಬದಿಯಲ್ಲಿ ನಿರ್ಮಾಣಗೊಂಡಿರುವ ಹೊಂಡಗಳನ್ನು ಮುಚ್ಚಬೇಕೆಂದು ಗ್ರಾಮದ ನಿವಾಸಿ ಸೋಮಶೇಖರ್ ಆಗ್ರಹಿಸಿದರು. ಗ್ರಾಮ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಯೋಜನೆಯಡಿ ಕಸ ವಿಲೇವಾರಿ ಘಟಕವನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು. ಜಲಜೀವನ್ ಯೋಜನೆಯಡಿ ಪ್ರತಿ ಮನೆಗಳಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸಬೇಕು. ನಿವೇಶನ ರಹಿತ ಕಡು ಬಡವರನ್ನು ಗುರುತಿಸಿ ಸೂಕ್ತ ರೀತಿಯಲ್ಲಿ ಸರ್ಕಾರದ ಸೌಲಭ್ಯ ಗಳನ್ನು ಒದಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.
ಬಳಿಕ ಗ್ರಾಮಸ್ಥರ ಸಮಸ್ಯೆಗಳಿಗೆ ಉತ್ತರಿಸಿದ ಸಭಾಧ್ಯಕ್ಷೆ ಗೀತಾ, ಪಂಚಾಯಿತಿ ಉಪಾಧ್ಯಕ್ಷ ಎನ್.ಎನ್. ಧರ್ಮಪ್ಪ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಗತ್ಯವಿರುವ ಸ್ಮಶಾನಗಳಿಗೆ ಜಾಗ ಗುರುತಿಸಿ ಮೀಸಲಿಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಪಂಚಾಯಿತಿ ವತಿಯಿಂದ ಪತ್ರ ಬರೆದು ಒತ್ತಾಯಿಸಲಾಗಿದೆ. ಬಾಕಿ ಇರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಜಲ ಜೀವನ್ ಯೋಜನಾ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು. ಹಾಗೆಯೇ ಸ್ವಚ್ಛ ಭಾರತ್ ಯೋಜನೆಯಡಿ ಕಸ ವಿಲೇವಾರಿ ಘಟಕವನ್ನು ಸದ್ಯದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು. ಗ್ರಾಮ ಸಭೆಯ ನೋಡಲ್ ಅಧಿಕಾರಿಯಾಗಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಆರ್.ಡಿ. ಲೋಕೇಶ್ ಕಾರ್ಯ ನಿರ್ವಹಿಸಿದರು. ಸಭೆಯಲ್ಲಿ ಸದಸ್ಯರಾದ ಎಸ್.ಎ. ಪ್ರದೀಪ್, ಶ್ರೀಕಾಂತ್, ಬಸವರಾಜು, ಲತಾ ಬಾಯಿ, ಲಕ್ಷö್ಮಮ್ಮ, ಸರಿತಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೇಮಲತಾ, ಕಾರ್ಯದರ್ಶಿ ಕೆ.ಸಿ. ರವಿ ಇದ್ದರು.