ಮಡಿಕೇರಿ, ಅ. ೩೦: ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಕಾಂ ವಿದ್ಯಾರ್ಥಿಗಳ ಪೋಷಕ, ಶಿಕ್ಷಕರ ಸಭೆಯನ್ನು ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಬಾಚೆಟ್ಟಿರ ಜಿ. ಮಾದಪ್ಪ ಅವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮುರ್ನಾಡು ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಪುದಿಯೋಕ್ಕಡ ಸುಬ್ರಮಣಿ ಹಾಗೂ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಪೆಮ್ಮುಡಿಯಂಡ ವೇಣು ಅಪ್ಪಣ್ಣ ಹಾಜರಿದ್ದರು.

ಅಧ್ಯಕ್ಷತೆಯನ್ನು ವಹಿಸಿದ್ದ ಬಾಚೆಟ್ಟಿರ ಜಿ. ಮಾದಪ್ಪ ಅವರು ಮಾತನಾಡಿ ವಿದ್ಯಾ ಸಂಸ್ಥೆಯು ವಿದ್ಯಾರ್ಥಿಗಳ ಸರ್ವತೋಮುಖವಾದ ಅಭಿವೃದ್ಧಿಗೆ ಶ್ರಮಿಸುತ್ತದೆ ಎಂದು ಹೇಳಿದರು. ಕಾಲೇಜಿನ ಉಪನ್ಯಾಸಕರಾದ ಕಲ್ಪನಾ ಹಾಗೂ ಸೋಮಯ್ಯ ಅವರು ಪ್ರಾಸ್ತಾವಿಕ ನುಡಿ ಹಾಗೂ ರಾಷ್ಟಿçÃಯ ನೂತನ ಶಿಕ್ಷಣ ನೀತಿಯ ಬಗ್ಗೆ ಸಭೆಗೆ ತಿಳಿಸಿಕೊಟ್ಟರು. ವಿದ್ಯಾಸಂಸ್ಥೆಯ ಖಜಾಂಚಿಗಳಾದ ಬಡುವಂಡ ಸುಬ್ರಮಣಿ, ಉಪನ್ಯಾಸಕ ವರ್ಗ, ಹಾಗೂ ಪ್ರಥಮ ಬಿಕಾಂನ ಎಲ್ಲಾ ಪೋಷಕ ವರ್ಗದವರು ಹಾಜರಿದ್ದರು.