ಮಡಿಕೇರಿ, ಅ. ೩೦: ಮಡಿಕೇರಿ ಹಿಂದೂ ಮಲಯಾಳಿ ಸಂಘದ ಓಣಾಘೋಷಂ ಓಣಂ ಸಧ್ಯ ನವೆಂಬರ್ ೧ ರಂದು (ನಾಳೆ) ನಗರದ ಕಾವೇರಿ ಹಾಲ್‌ನಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ ೭ ರಿಂದ ೯ ಗಂಟೆಯವರೆಗೆ ಪೂಕಳಂ, ೯ ಗಂಟೆಗೆ ರಾಷ್ಟç ಧ್ವಜಾರೋಹಣವನ್ನು ಮದೆನಾಡಿನ ಕಾಫಿ ಬೆಳೆಗಾರ ಪ್ರಕಾಶ್ ಹಾಗೂ ಕನ್ನಡ ಧ್ವಜಾರೋಹಣವನ್ನು ಓಣಂ ಸಧ್ಯ ಆಚರಣಾ ಸಮಿತಿ ಅಧ್ಯಕ್ಷ ಟಿ.ಆರ್. ವಾಸುದೇವ ನೆರವೇರಿಸುವರು.
ಓಣಾಘೋಷಂ ಮೆರವಣಿಗೆ ಬೆಳಿಗ್ಗೆ ೯.೩೦ಕ್ಕೆ ಗಾಂಧಿ ಮೈದಾನದಿಂದ ಕಾವೇರಿ ಹಾಲ್‌ವರೆಗೆ ನಡೆಯಲಿದ್ದು, ಸಭಾ ಕಾರ್ಯಕ್ರಮ ಬೆಳಿಗ್ಗೆ ೧೧ ಗಂಟೆಗೆ ನೆರವೇರಲಿದ್ದು, ಉದ್ಘಾಟನೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ಎಸ್. ರಮೇಶ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಹಿಂದೂ ಮಲಯಾಳಿ ಸಮಾಜದ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ವಿ.ಎಂ. ವಿಜಯ, ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷ ಟಿ.ಕೆ. ಸುಧೀರ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.