ವೀರಾಜಪೇಟೆ: ೬೭ನೇ ಕರ್ನಾಟಕ ರಾಜ್ಯೋತ್ಸವವನ್ನು ಹೆಚ್ಚಿನ ಸಂಭ್ರಮ ಹಾಗೂ ಉತ್ಸಾಹಗಳಿಂದ ನಾಡಿನಾದ್ಯಂತ ಆಚರಿಸುವ ಹಿನ್ನೆಲೆಯಲ್ಲಿ ಸರ್ಕಾರ ಕೋಟಿ ಕಂಠ ಗಾಯನವನ್ನು ಆಯೋಜಿಸಲಾಗಿದ್ದು, ಆಯ್ದ ಆರು ಕನ್ನಡ ಗೀತೆಗಳು ಏಕಕಾಲದಲ್ಲಿ ಎಲ್ಲರೂ ಹಾಡನ್ನು ಹಾಡಿ ಐತಿಹಾಸಿಕ ದಾಖಲೆ ಬರೆಯುವ ಮೂಲಕ ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಸಂಭ್ರಮಿಸೋಣ ಎಂದು ವೀರಾಜಪೇಟೆ ವಿದ್ಯುತ್ ಇಲಾಖೆಯ ಕಾರ್ಯಪಾಲಕ ಸಹಾಯಕ ಅಭಿಯಂತರ ಎ.ಇ. ಸುರೇಶ್ ಹೇಳಿದರು.

ನಗರದ ವಿದ್ಯುತ್ ಇಲಾಖೆ ಆವರಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.

ಇದೇ ಸಂದರ್ಭ ಕನ್ನಡ ನಾಡು ನುಡಿಯ ಶ್ರೇಷ್ಠತೆ ಸಾರುವ ಕುವೆಂಪು ವಿರಚಿತ ನಾಡಗೀತೆ ಜಯ ಭಾರತ ಜನನಿಯ ತನುಜಾತೆ ಮತ್ತು ಬಾರಿಸು ಕನ್ನಡ ಡಿಂಡಿಮವ, ಹುಯಿಲಗೋಳ ನಾರಾಯಣರಾಯ ವಿರಚಿತ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಡಾ. ಡಿ.ಎಸ್. ಕರ್ಕಿ ವಿರಚಿತ ಹಚ್ಚೇವು ಕನ್ನಡದ ದೀಪ, ಚನ್ನವೀರ ಕಣವಿ ಅವರ ವಿಶ್ವ ವಿನೂತನ ವಿದ್ಯಾಚೇತನ ಹಾಗೂ ಹಂಸಲೇಖ ವಿರಚಿತ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಕನ್ನಡ ಗೀತೆಗಳು ಕೋಟಿ ಕಂಠ ಗಾಯನದಲ್ಲಿ ಮೊಳಗಿದವು.

ಈ ಸಂದರ್ಭ ವಿದ್ಯುತ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಹಾಜರಿದ್ದರು.ಮುಳ್ಳೂರು: ಕನ್ನಡ ರಾಜ್ಯೋತ್ಸವ ಹಿನ್ನೆಲೆ ಕನ್ನಡ ಕಂಪು ಹರಡುವ ಉದ್ದೇಶದಿಂದ ಸಮೀಪದ ನಿಡ್ತ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಶಾಲಾ ಮುಂಭಾಗದ ಆವರಣದಲ್ಲಿ ವಿದ್ಯಾರ್ಥಿಗಳು ಕನ್ನಡ ತಾಯಿ ಭುವನೇಶ್ವರಿಯ ಕನ್ನಡ ಧ್ವಜ ಹಿಡಿದು ಕನ್ನಡ ನಾಡು ನುಡಿಯ ಬಗ್ಗೆ ಅಭಿಮಾನ ಮೂಡಿಸುವ ಕನ್ನಡ ಪರಂಪರೆ, ಸಂಸ್ಕೃತಿಯ ಬಗ್ಗೆ ಹೆಮ್ಮೆ ಮೂಡಿಸುವ ವಿವಿಧ ಪ್ರಕಾರಗಳ ೬ ಕನ್ನಡ ಗೀತೆಗಳನ್ನು ಸಾಮೂಹಿಕವಾಗಿ ಹಾಡಿದರು. ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಎಂ.ವಿ. ರೂಪ, ಶಿಕ್ಷಕರಾದ ಪ್ರಿಯಾಂಕ ಚಿಪಳೂಣಕರ್, ಜಿ.ಬಿ. ಪ್ರವೀಣ್, ಡಿ.ಎಂ. ಮಹಾದೇವಿ, ಗೀತಾ, ಅಭಿಷೇಕ್ ಹಾಜರಿದ್ದರು.ಕೂಡಿಗೆ: ಕೂಡ್ಲೂರು ಗ್ರಾಮದ ಕೈಗಾರಿಕಾ ಬಡಾವಣೆಯಲ್ಲಿರುವ ಎಸ್.ಎಲ್.ಎನ್. ಕಾಫಿ ಸಂಸ್ಥೆಯಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಕಾರ್ಮಿಕ ಇಲಾಖೆಯ ಹಿರಿಯ ನಿರೀಕ್ಷಕಿ ಲೀನಾ, ಸಂಸ್ಥೆಯ ವ್ಯವಸ್ಥಾಪಕ ಎಂ.ಕೆ. ಸೋಮಯ್ಯ ಸೇರಿದಂತೆ ಸಂಸ್ಥೆಯ ಅಧಿಕಾರಿ ವರ್ಗದವರು ಮತ್ತು ಸಿಬ್ಬಂದಿಗಳು ಸೇರಿದಂತೆ ನೂರಾರು ಕಾರ್ಮಿಕರು ಹಾಜರಿದ್ದರು.ಪೊನ್ನಂಪೇಟೆ: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆ ಪ್ರೌಢಶಾಲಾ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು. ಉಪ ಪ್ರಾಂಶುಪಾಲ ಎಂ.ಯು. ಚಂಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಶನಿವಾರಸAತೆ: ಶನಿವಾರಸಂತೆಯ ಬ್ರೆöÊಟ್ ಅಕಾಡೆಮಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಭಾಗಿತ್ವದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳ ಜೊತೆ ಸಂಸ್ಥೆ ಕಾರ್ಯದರ್ಶಿ ಹೇಮಾ ಪರಮೇಶ್, ಮುಖ್ಯ ಶಿಕ್ಷಕಿ ಚೈತ್ರಾ, ಶಿಕ್ಷಕಿಯರು ನಾಡಗೀತೆ, ಕನ್ನಡ ಗೀತೆಗಳನ್ನು ಹಾಡಿದರು.ಕೂಡಿಗೆ: ಎಸ್.ಎನ್.ಡಿ.ಪಿ. ಕುಶಾಲನಗರ ಶಾಖೆಯ ವತಿಯಿಂದ ೬೭ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೋಟಿ ಕಂಠ ಗೀತ ಗಾಯನ ನಡೆಯಿತು.

ಕಾರ್ಯಕ್ರಮದಲ್ಲಿ ಶಾಖೆಯ ಅಧ್ಯಕ್ಷ ಕೆ.ಟಿ. ಗಣೇಶ್, ಕಾರ್ಯದರ್ಶಿ ಕೆ.ಆರ್. ರಾಜೇಶ್, ಯೋಗಂ ಪ್ರತಿನಿಧಿ ಟಿ.ವಿ. ಕಿಶೋರ್, ನಿರ್ದೇಶಕರಾದ ಕೆ.ಎಂ. ಅನೀಶ್ ಕುಮಾರ್, ಕೆ.ಕೆ. ವಿನು, ಗಾಯಕರುಗಳಾದ ರವಿ ಝೇಂಕಾರ್, ಸಂತೋಷ್(ಮಣಿ), ಆಡಳಿತ ಮಂಡಳಿಯ ಸದಸ್ಯರುಗಳು ಹಾಗೂ ಮಹಿಳಾ ಸದಸ್ಯರುಗಳು ಹಾಜರಿದ್ದರು.ಸುಂಟಿಕೊಪ್ಪ: ಸುಂಟಿಕೊಪ್ಪ ವಿವಿಧ ಶಾಲೆಗಳಲ್ಲಿ ಸರಕಾರದ ಆದೇಶದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶನದಂತೆ ಕೋಟಿ ಕಂಠ ಗಾಯನ ಕಾರ್ಯಕ್ರಮವು ಏಕಕಾಲದಲ್ಲಿ ಮೊಳಗಿತು.

ಇಲ್ಲಿನ ಸರಕಾರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ, ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆ ಹಾಗೂ ಸಂತ ಅಂತೋಣಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದವರು ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕೋಟಿ ಗಾಯನವನ್ನು ಹಾಡಿ ಆನಂದಿಸಿದರು.

ಜಯಭಾರತ ಜನನಿಯ ತನುಜತೆ, ಉದಯವಾಗಲಿ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿವiವ, ಅಚ್ಚೆವು ಕನ್ನಡದ ದೀಪ, ವಿಶ್ವವಿನೂತನ ವಿದ್ಯಾಚೇತನ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಹಾಡುಗಳನ್ನು ಹಾಡುವ ಮೂಲಕ ಆನಂದಿಸಿದರು.

ಈ ಸಂದರ್ಭ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಗೀತಾ, ಪ್ರೌಢಶಾಲೆಯ ಬಾಲಕೃಷ್ಣ, ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವ್ಯವಸ್ಥಾಪಕರರಾದ ವಂ. ಫಾ.ಅರುಳ್ ಸೇಲ್ವಕುಮಾರ್, ಮುಖ್ಯ ಶಿಕ್ಷಕರಾದ ಸೇಲ್ವರಾಜ್, ಸಂತ ಅಂತೋಣಿ ಶಾಲೆಯ ಮುಖ್ಯೋಪಾಧ್ಯಾಯಿನಿ ವೀರಾ ಡಿಸೋಜ, ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪಿ.ಎಸ್. ಜಾನ್, ಸಹಶಿಕ್ಷಕ, ಶಿಕ್ಷಕಿಯರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.