ಮುಳ್ಳೂರು, ಅ. ೩೧: ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ನಿರ್ಗಮಿತ ಅಧ್ಯಕ್ಷ ಲಕ್ಷಿö್ಮನಾರಾಯಣ ಕಜೆಗದ್ದೆ ಅವರಿಗೆ ಸಮೀಪದ ಆಲೂರುಸಿದ್ದಾಪುರ ಅರೆಭಾಷೆ ಗೌಡ ಸಮಾಜದ ವತಿಯಿಂದ ಸನ್ಮಾನ ನಡೆಯಿತು. ಸಂಗಯ್ಯನಪುರದ ಅರೆಭಾಷೆ ಗೌಡ ಸಮಾಜ ಸಭಾಂಗಣದಲ್ಲಿ ಸಮಾಜದ ಮಾಸಿಕ ಸಭೆಯಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಲಕ್ಷಿö್ಮನಾರಾಯಣ ಕಜೆಗದ್ದೆ-ತನ್ನ ಅಧಿಕಾರದ ಅವಧಿಯಲ್ಲಿ ಅರೆಭಾಷೆ ಗೌಡ ಸಮಾಜದ ಬಾಂಧವರ ಪ್ರೋತ್ಸಾಹ, ಸಹಕಾರದಿಂದ ಅರೆಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿಯನ್ನು ಬೆಳೆಸಲು ಸಾಧ್ಯವಾಯಿತು. ಅಕಾಡೆಮಿ ವತಿಯಿಂದ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅರೆಭಾಷೆ ಸಾಹಿತ್ಯ, ಸಂಸ್ಕೃತಿಗೆ ಸಂಬAಧಪಟ್ಟ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಅರೆಭಾಷೆ ಸಮಾಜಗಳು ಭಾಷೆ ಮತ್ತು ಸಂಸ್ಕೃತಿಯನ್ನು ಅಭಿವೃದ್ಧಿಗೊಳಿಸಲು ಆಸಕ್ತಿ ತೋರಬೇಕು ಎಂದು ಹೇಳಿದರು.

ಆಲೂರುಸಿದ್ದಾಪುರ ಅರೆಭಾಷೆ ಗೌಡ ಸಮಾಜದ ಹಿರಿಯ ಸದಸ್ಯ ಅತ್ತೇಡಿ ಪೂವಯ್ಯ ಮಾತನಾಡಿ, ಅಧಿಕಾರದ ಅವಧಿಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದ ಕೀರ್ತಿ ಲಕ್ಷಿö್ಮನಾರಾಯಣ ಕಜೆಗದ್ದೆ ಅವರಿಗೆ ಸಲ್ಲುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಅಕಾಡೆಮಿ ಸದಸ್ಯ ಧನಂಜಯ ಅಗೋಳಿಕಜೆ, ಅರೆಭಾಷೆ ಗೌಡ ಸಮಾಜದ ಅಧ್ಯಕ್ಷ ದೇವಾಯಿರ ಗಿರೀಶ್, ಉಪಾಧ್ಯಕ್ಷ ಭಟ್ಯನ ಈರಪ್ಪ ಮಾತನಾಡಿದರು. ವೇದಿಕೆಯಲ್ಲಿ ಸಮಾಜದ ಪ್ರಧಾನ ಕಾರ್ಯದರ್ಶಿ ಕುಯ್ಯಮುಡಿ ಜಯಕುಮಾರ್, ಖಜಾಂಚಿ ಎ. ರಾಮಣ್ಣ, ಸಹ ಕಾರ್ಯದರ್ಶಿ ಪರ್ಲಕೋಟಿ ಶೈಲಾ ಸತೀಶ್, ಪಟ್ಟಡ ಲೀಲಾಕುಮಾರ್ ಹಾಜರಿದ್ದರು. ನಂತರ ನಡೆದ ಸಮಾಜದ ಮಾಸಿಕ ಸಭೆಯಲ್ಲಿ ಸಮಾಜದ ವತಿಯಿಂದ ನಡೆಯುವ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ನವೆಂಬರ್ ತಿಂಗಳಲ್ಲಿ ಸಮಾಜದ ವತಿಯಿಂದ ಆಲೂರುಸಿದ್ದಾಪುರ ಸರಕಾರಿ ಆಸ್ಪತ್ರೆಯಲ್ಲಿ ಸಾರ್ವಜನಿಕ ರಕ್ತದಾನ, ರಕ್ತ ಪರೀಕ್ಷೆ, ಮುಂತಾದ ಆರೋಗ್ಯ ಶಿಬಿರವನ್ನು ನಡೆಸಲು ತೀರ್ಮಾನಿಸಲಾಯಿತು.