ವೀರಾಜಪೇಟೆ, ನ. ೧: ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ತಾಲೂಕು ಆಡಳಿತ ಹಾಗೂ ಪುರಸಭೆ ಜಂಟಿಯಾಗಿ ಕನ್ನಡ ರಾಜ್ಯೋತ್ಸವ ದಿನದಂದು ವೀರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಶುದ್ಧ ಕನ್ನಡ ನಾಮಫಲಕ ಅಭಿಯಾನಕ್ಕೆ ತಾಲೂಕು ತಹಶೀಲ್ದಾರ್ ಅರ್ಚನಾಭಟ್ ಹಾಗೂ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಚಾಲನೆ ನೀಡಿದರು.

ವೀರಾಜಪೇಟೆ ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ನಡೆಸುವವರು ಕನ್ನಡ ಭಾಷೆಯೊಂದಿಗೆ ಸ್ಥಳೀಯ ಕೊಡವ ಭಾಷಾ ನಾಮಫಲಕ ಅಳವಡಿಸುವಂತಾಗಬೇಕೆAದು ಸುಜಾ ಕುಶಾಲಪ್ಪ ಹೇಳಿದರು.

ಈ ಸಂದÀರ್ಭ ವೇದಿಕೆಯಲ್ಲಿ ಪುರಸಭೆ ಅಧ್ಯಕ್ಷೆ ಸುಶ್ಮಿತಾ, ಉಪಾಧ್ಯಕ್ಷ ವಿನಾಂಕ್ ಕುಟ್ಟಪ್ಪ, ತಾಲೂಕು ಕಾರ್ಯ ನಿರ್ವಹಕಾಧಿಕಾರಿ ಅಪ್ಪಣ್ಣ, ಕನ್ನಡ ಸಾಹಿತ್ಯ ಪರಿಷತ್‌ನ ತಾಲೂಕು ಅಧ್ಯಕ್ಷ ಡಿ.ಪಿ. ರಾಜೇಶ್, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲಬಿಳಗಿ, ಪುರಸಭೆ ಮುಖ್ಯಾಧಿಕಾರಿ ಚಂದ್ರಕುಮಾರ್, ಮಾಜಿ ಸೈನಿಕರ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ನಂಜಪ್ಪ ಮತ್ತಿತರರು ಉಪಸ್ಥಿತರಿದ್ದರು.