ಪುನೀತ್ ರಾಜ್ ಕುಮಾರ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

ಬೆಂಗಳೂರು, ನ. ೧: ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ, ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ, ಗಣ್ಯರ ಸಮ್ಮುಖದಲ್ಲಿ ದಿ. ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಳೆಯನ್ನೂ ಲೆಕ್ಕಿಸದೇ ಸಹಸ್ರಾರು ಮಂದಿ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದನ್ನು ಕಣ್ತುಂಬಿಕೊAಡರು. ಕಾರ್ಯಕ್ರಮದಲ್ಲಿ ಡಾ. ಸುಧಾಮೂರ್ತಿ ಅವರು ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ನಟ ರಜನಿಕಾಂತ್, ಅಪ್ಪು ಸಾಧಾರಣ ವ್ಯಕ್ತಿಯಲ್ಲ, ಆತ ಅಪಾರವಾದದ್ದನ್ನು ಸಾಧಿಸಿದ್ದಾರೆ. ಕಲಿಯುಗಕ್ಕೆ ಪುನೀತ್ ದೇವರ ಮಗು, ಎನ್‌ಟಿಅರ್, ಎಂಜಿಆರ್, ಶಿವಾಜಿಗಣೇಶನ್, ರಾಜ್ ಕುಮಾರ್ ಅವರು ೫೦ ವರ್ಷದಲ್ಲಿ ಸಾಧಿಸಿದ್ದನ್ನು ಅಪ್ಪು ೨೦ ವರ್ಷಗಳಲ್ಲಿ ಸಾಧಿಸಿದ್ದರು. ಕೇವಲ ನಟನೆಯಿಂದಷ್ಟೇ ಜನರನ್ನು ಗೆಲ್ಲಲು ಸಾಧ್ಯವಿಲ್ಲ. ಆದರ್ಶಗಳ ಮೂಲಕ ಗೆಲ್ಲಬಹುದು ಎಂಬುದನ್ನು ನಮ್ಮ ಅಪ್ಪು ಮಾಡಿ ತೋರಿಸಿದ್ದಾರೆ ಎಂದು ಬಣ್ಣಿಸಿದರು. ಜ್ಯೂ. ಎನ್‌ಟಿಆರ್ ಮಾತನಾಡಿ, ಒಬ್ಬ ವ್ಯಕ್ತಿಗೆ ಉಪನಾಮ ಎಂಬುದು ಪರಂಪರೆಯಿAದ ಬರುತ್ತದೆ ಆದರೆ ವ್ಯಕ್ತಿತ್ವ ಸ್ವಂತ ಸಂಪಾದನೆಯಾಗಿರುತ್ತದೆ. ಸ್ವಂತ ವ್ಯಕ್ತಿತ್ವದಿಂದ ನಗುವಿನಿಂದಲೇ ಒಂದು ರಾಜ್ಯ ಗೆದ್ದ ರಾಜ ಪುನೀತ್ ರಾಜ್ ಕುಮಾರ್, ಅವರು ಎಲ್ಲಕ್ಕೂ ಮಿಗಿಲಾಗಿ ಶ್ರೇಷ್ಠ ವ್ಯಕ್ತಿತ್ವದವರಾಗಿದ್ದರು. ಪುನೀತ್ ನಗುವಿನ ಒಡೆಯ ಅವರು ತಮ್ಮ ವ್ಯಕ್ತಿತ್ವದಿಂದ ಅಭಿಮಾನಿಗಳನ್ನು ಪಡೆದಿದ್ದರು, ಕರ್ನಾಟಕ ರತ್ನದ ಅರ್ಥವೇ ಪುನೀತ್ ರಾಜ್ ಕುಮಾರ್ ಅವರಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೆಮ್ಮೆಯ ಗೆಳೆಯನಾಗಿ ನಿಂತಿದ್ದೇನೆ, ಈ ಅವಕಾಶ ನೀಡಿದ್ದಕ್ಕೆ ಸರ್ಕಾರಕ್ಕೆ, ಡಾ. ರಾಜ್ ಕುಟುಂಬಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಿರುವುದು "ನನ್ನ ಹಾಗೂ ಸರ್ಕಾರದ ಸೌಭಾಗ್ಯ ಎಂದರು.

ಚಕ್ರ ಮುರಿದು ಉರುಳಿ ಬಿದ್ದ ರಥ:ಅಪಾಯದಿಂದ ಪಾರಾದ ಭಕ್ತರು

ಚಾಮರಾಜನಗರ, ನ. ೧: ದೇವಾಲಯವೊಂದರ ರಥದ ಚಕ್ರ ಮುರಿದ ಪರಿಣಾಮ ರಥ ಉರುಳಿಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ಚಾಮರಾಜನಗರ ತಾಲೂಕಿನ ಚೆನ್ನಪ್ಪನಪುರ ಗ್ರಾಮದ ವೀರಭದ್ರೇಶ್ವರ ಸ್ವಾಮಿ ರಥೋತ್ಸವದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ ೧೨ ಗಂಟೆ ಸುಮಾರಿನಲ್ಲಿ ದೇವಾಲಯದ ಹೊರ ಆವರಣದಲ್ಲಿ ರಥೋತ್ಸವ ನಡೆಯುತ್ತಿದ್ದಾಗ ರಥದ ಬಲಗಡೆಯ ಚಕ್ರ ಮುರಿದು, ರಥ ಕೆಳಗೆ ಉರುಳಿ ಬಿದ್ದಿದೆ. ತಕ್ಷಣ ಭಕ್ತರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯವಾಗಿಲ್ಲ.

ಗುಜರಾತ್ ಸೇತುವೆ ದುರಂತ: ಆಸ್ಪತ್ರೆಗೆ ಭೇಟಿ ನೀಡಿದ ಪ್ರಧಾನಿ

ಮೊರ್ಬಿ, ನ. ೧: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಂಜೆ ಮೊರ್ಬಿ ತೂಗು ಸೇತುವೆ ಕುಸಿತದಲ್ಲಿ ಗಾಯಗೊಂಡು ಇಲ್ಲಿನ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಈ ವೇಳೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಜೊತೆಗಿದ್ದರು. ದುರಂತದ ನಂತರದ ಪರಿಸ್ಥಿತಿಯನ್ನು ಪರಿಶೀಲಿಸಲು ಮೊರ್ಬಿಯಲ್ಲಿ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯ ಬಗ್ಗೆ ಮಾಹಿತಿ ಪಡೆದರು. ಭಾನುವಾರ ಮೊರ್ಬಿ ಪಟ್ಟಣದಲ್ಲಿ ತೂಗು ಸೇತುವೆ ಕುಸಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಟ ೧೪೧ ಜನರು ಸಾವನ್ನಪ್ಪಿದ್ದರು. ೧೦೦ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರಿನಲ್ಲಿ ೪೦ ಪಿಸ್ತೂಲ್ ಸೇರಿ ಹಲವು ಅಕ್ರಮ ಶಸ್ತಾçಸ್ತç ವಶ

ಇಂದೋರ್, ನ. ೧: ಮಧ್ಯ ಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ ೪೦ ಪಿಸ್ತೂಲ್‌ಗಳು ಮತ್ತು ೩೬ ಮ್ಯಾಗಜೀನ್‌ಗಳು ಸೇರಿದಂತೆ ಹಲವು ಅಕ್ರಮ ಶಸ್ತಾçಸ್ತçಗಳನ್ನು ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಸೋಮವಾರ ಮುಂಜಾನೆ ಇಂದೋರ್‌ನ ರಾವು ಪ್ರದೇಶದಲ್ಲಿ ಆಗ್ರಾ-ಮುಂಬೈ ರಾಷ್ಟಿçÃಯ ಹೆದ್ದಾರಿಯಲ್ಲಿ ಹರಿಯಾಣ ನೋಂದಣಿಯ ಕಾರನ್ನು ಪೊಲೀಸರು ತಡೆದರು ಎಂದು ಪೊಲೀಸ್ ಕಮಿಷನರ್ ಹರಿನಾರಾಯಣಚಾರಿ ಮಿಶ್ರಾ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಚಾಲಕ ಕಾರಿನ ವೇಗವನ್ನು ಹೆಚ್ಚಿಸಿ ಪರಾರಿಯಾಗುತ್ತಿದ್ದಾಗ ಪೊಲೀಸ್ ವಾಹನ ಡಿಕ್ಕಿ ಹೊಡೆಸಿ ತಡೆದಿದ್ದಾರೆ. ದುಷ್ಕರ್ಮಿಗಳು ಖಾರ್ಗೋನ್ ಜಿಲ್ಲೆಯ ಸನವಾಡ್ ಪ್ರದೇಶದಲ್ಲಿ ಕಾರನ್ನು ಬಿಟ್ಟು ದಟ್ಟ ಅರಣ್ಯದೊಳಗೆ ಪರಾರಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಹರಿಯಾಣ ನೋಂದಣಿ ಸಂಖ್ಯೆಯನ್ನು ಹೊಂದಿರುವ ವಾಹನದಿಂದ ಕನಿಷ್ಟ ೪೦ ಪಿಸ್ತೂಲ್‌ಗಳು, ೩೬ ಮ್ಯಾಗಜೀನ್‌ಗಳು ಮತ್ತು ಐದು ಕಾರ್ಟ್ರಿಡ್ಜ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನಾಲ್ಕು ವರ್ಷದ ಬಾಲಕಿ ಅತ್ಯಾಚಾರ ಬಂಧನ

ಖAಡ್ವಾ, ನ. ೧: ಮಧ್ಯ ಪ್ರದೇಶದ ಖಂಡ್ವಾ ಜಿಲ್ಲೆಯಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿ ಕಬ್ಬಿನ ಗದ್ದೆಯಲ್ಲಿ ಬಿಟ್ಟು ಹೋಗಿರುವ ಘಟನೆ ನಡೆದಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ. ಸೋಮವಾರ ಕಬ್ಬಿನ ಹೊಲದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಮಗು ಇಂದೋರ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಸೋಮವಾರ ಬೆಳಗ್ಗೆ ಜಸ್ವಾಡಿಯಲ್ಲಿರುವ ತನ್ನ ಸಂಬAಧಿಕರ ಮನೆಯಿಂದ ಬಾಲಕಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವಿವೇಕ್ ಸಿಂಗ್ ತಿಳಿಸಿದ್ದಾರೆ. ತನಿಖೆಯ ಸಮಯದಲ್ಲಿ, ಪೊಲೀಸರು ಈ ಪ್ರದೇಶದ ಉಪಾಹಾರ ಗೃಹದಲ್ಲಿ ಕೆಲಸ ಮಾಡುತ್ತಿದ್ದ ೨೫ ವರ್ಷದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ವೇಳೆ ಬಾಲಕಿಯನ್ನು ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಹೇಳಿದ್ದಾರೆ. ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಕೇಸ್ ದಾಖಲಿಸಿದ್ದಾರೆ.

ಚೆನ್ನೆöÊನಲ್ಲಿ ಮಳೆ ಅವಘಡಗಳಲ್ಲಿ ಇಬ್ಬರು ಸಾವು

ಚೆನ್ನೆöÊ, ನ. ೧: ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಚೆನ್ನೆöÊನಲ್ಲಿ ಮಳೆ ಸಂಬAಧಿತ ಘಟನೆಗಳಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ. ಮಂಗಳವಾರ ಬೆಳಿಗ್ಗೆ ಮನೆಯ ಬಾಲ್ಕನಿ ಗೋಡೆಯ ಒಂದು ಭಾಗ ೪೭ ವರ್ಷದ ಮಹಿಳೆಯೊಬ್ಬರ ಮೇಲೆ ಬಿದ್ದು ಮೃತಪಟ್ಟಿದ್ದಾರೆ. ಪುಲಿಯನ್‌ತೋಪ್‌ನ ಪ್ರಕಾಶ್ ರಾವ್ ಕಾಲೋನಿ ನಿವಾಸಿಯಾದ ಶಾಂತಿ ಎಂಬವರು ತಮ್ಮ ಮನೆಯ ಹೊರಗೆ ನಿಂತು ಕಾರ್ಪೋರೇಷನ್ ನೀರನ್ನು ಪಂಪ್ ಮಾಡುತ್ತಿದ್ದಾಗ ಗೋಡೆಯು ಆಕೆಯ ಮೇಲೆ ಬಿದ್ದಿದೆ. ಶಾಂತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಕೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಸ್ಟಾನ್ಲಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಪುಲಿಯನ್‌ತೋಪ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸೋಮವಾರ ಸಂಜೆಯಿAದ ಸುರಿದ ಭಾರಿ ಮಳೆಗೆ ಹಳೆಯ ಮನೆಯ ಗೋಡೆ ಕುಸಿದಿದೆ ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ. ಇನ್ನೊಂದು ಘಟನೆಯಲ್ಲಿ ಸೋಮವಾರ ವ್ಯಾಸರಪಾಡಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ೫೨ ವರ್ಷದ ಆಟೋ ಚಾಲಕರೊಬ್ಬರು ಸಾವಿಗೀಡಾಗಿದ್ದಾರೆ. ಮದ್ಯದ ಅಮಲಿನಲ್ಲಿದ್ದ ದೇವೇಂದ್ರನ್ ಎಂದು ಗುರುತಿಸಲಾದ ವ್ಯಕ್ತಿ ಸೋಮವಾರ ರಾತ್ರಿ ವ್ಯಾಸರಪಾಡಿಯ ಬಿವಿ ಕಾಲೋನಿಯಲ್ಲಿರುವ ತನ್ನ ಮನೆಗೆ ಮರಳುತ್ತಿದ್ದರು. ರಸ್ತೆಯಲ್ಲಿ ನಿಂತಿದ್ದ ಮೊಣಕಾಲುದ್ದದ ಮಳೆನೀರಿನಲ್ಲಿ ನಡೆದು ಹೋಗುತ್ತಿದ್ದಾಗ, ಮನೆಯ ಸಮೀಪದಲ್ಲಿ ನಿರ್ಮಿಸಲಾದ ಟೆಂಟ್‌ನ ಕಂಬದ ಸಂಪರ್ಕಕ್ಕೆ ಬಂದಿದ್ದಾರೆ. ಪಕ್ಕದ ಇಬಿ ಬಾಕ್ಸ್ನ ವಿದ್ಯುತ್ ತಂತಿಗೆ ಕಂಬ ತಗುಲಿದ್ದರಿಂದ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎಂಕೆಬಿ ನಗರ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಸ್ಟಾನ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.