*ಗೋಣಿಕೊಪ್ಪ, ಅ. ೩೧: ವಾಲ್ಮೀಕಿ ಮಹಾಋಷಿಯ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ ಎಂದು ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣ ಸಮಿತಿ ಅಧ್ಯಕ್ಷೆ ಮತ್ತು ತಹಶೀಲ್ದಾರ್ ಡಿ. ಅರ್ಚನಾ ಭಟ್ ತಿಳಿಸಿದರು.
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಅಂಗವಾಗಿ ಗೋಣಿಕೊಪ್ಪ ಸ್ವಾತಂತ್ರö್ಯ ಹೋರಾಟಗಾರರ ಭವನದಲ್ಲಿ ತಾಲೂಕು ಆಡಳಿತ ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆ, ವಾಲ್ಮೀಕಿ ನಾಯಕ ಕ್ಷೇಮ ಅಭಿವೃದ್ಧಿ ಸಂಘ, ವಿವಿಧ ಆದಿವಾಸಿ ಬುಡಕಟ್ಟು ಸಂಘಗಳ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಾಲ್ಮೀಕಿಯು ಕವಿಕುಲದ ಗುರುವಾಗಿ ಹಲವಾರು ಕವಿಗಳಿಗೆ ಮತ್ತು ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ ಎಂದು ನುಡಿದರು.
ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕೆÀ್ಷ ಚೈತ್ರ ಬಿ. ಚೇತನ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ಕೊಣಿಯಂಡ ಅಪ್ಪಣ್ಣ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗುರು ಶಾಂತಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೆಳಗಿ, ಎಸ್ ಸಿ ಎಸ್ ಟಿ ನೌಕರ ಸಂಘದ ಜಿಲ್ಲಾಧ್ಯಕ್ಷ ಮಹೇಂದ್ರ ಎಸ್, ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸುರೇಶ್ ಉಪಸ್ಥಿತರಿದ್ದರು. ಎಸ್ಎಸ್ಎಲ್ಸಿ ಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಯಿತು ಮತ್ತು ವಾಲ್ಮೀಕಿ ಸಮುದಾಯದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ನಡೆಯಿತು.