ಕೂಡಿಗೆ: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ನಿರ್ಮಾಣ ಅಂಗವಾಗಿ ಪವಿತ್ರ ಮೃತ್ತಿಕೆಯನ್ನು ಮುಳ್ಳುಸೋಗೆ, ಕೂಡುಮಂಗಳೂರು, ಕೂಡಿಗೆ, ಹೆಬ್ಬಾಲೆ, ತೊರೆನೂರು, ಶಿರಂಗಾಲ ಪಂಚಾಯಿತಿ ಸೇರಿದಂತೆ ಸುತ್ತಮುತ್ತಲಿನಿಂದ ಸಂಗ್ರಹಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಧ್ಯಕ್ಷರು ಉಪಾಧ್ಯಕ್ಷರು ಸೇರಿದಂತೆ ಸರ್ವ ಸದಸ್ಯರು ಅಂಗನವಾಡಿ ಕಾರ್ಯಕರ್ತರು ವಿವಿಧ ಸಂಘಟನೆಗಳ ಪ್ರಮುಖರು ಹಾಜರಿದ್ದರು.ಸೋಮವಾರಪೇಟೆ: ನಾಡಪ್ರಭು ಕೆಂಪೇಗೌಡರ ೧೦೮ ಅಡಿ ಪ್ರತಿಮೆ ಉದ್ಘಾಟನೆ ಅಂಗವಾಗಿ ಮಾದಾಪುರ ಹಾಗೂ ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹಣೆ ಅಭಿಯಾನ ನಡೆಯಿತು.
ಮಾದಾಪುರಕ್ಕೆ ಆಗಮಿಸಿದ ಕೆಂಪೇಗೌಡರ ರಥಕ್ಕೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಹೂಗುಚ್ಚ ಅರ್ಪಿಸಿ ಸ್ವಾಗತಿಸಿದರು. ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಪ್ರಮುಖರು, ತಾಲೂಕು ತಹಶೀಲ್ದಾರ್ ನರಗುಂದ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಜಯಣ್ಣ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.