ಮಡಿಕೇರಿ, ನ. ೧: ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಹೋಬಳಿ ಘಟಕಗಳ ರಚನೆಗೆ ಚಾಲನೆ ನೀಡಿಲಾಗಿದೆ. ಪೊನ್ನಂಪೇಟೆ ಕಸಬಾ ಹೋಬಳಿಯ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕವನ್ನು ಗೋಣಿಕೊಪ್ಪಲು ನಗರದಲ್ಲಿ ಸ್ಥಾಪಿಸಿ ಅಧ್ಯಕ್ಷರಾಗಿ ಕುಲ್ಲಚಂಡ ಪ್ರಮೋದ್ ಗಣಪತಿ, ಬಾಳೆಲೆ ಹೋಬಳಿಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಪಡಿಞರಂಡ ಪ್ರಭುಕುಮಾರ್ ಅವರನ್ನು ಮತ್ತು ಹುದಿಕೇರಿ ಹೋಬಳಿಯ ಕಸಾಪ ಅಧ್ಯಕ್ಷರಾಗಿ ಬಾನಂಗಡ ಅರುಣ್ ಅವರನ್ನು ಆರಿಸಲಾಗಿದೆ.
ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೋಳೆರ ದಯಾ ಚಂಗಪ್ಪ ಅವರ ಶಿಫಾರಸಿನ ಮೇರೆಗೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಈ ಘೋಷಣೆಯನ್ನು ಮಾಡಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.