ಮಡಿಕೇರಿ, ಅ. ೩೧ : ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ರಾಷ್ಟಿçÃಯ ಏಕತಾ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ ಅವರು ಪ್ರತಿಜ್ಞಾ ವಿಧಿ ಭೋಧಿಸಿದರು.
ರಾಷ್ಟçದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆ ಕಾಪಾಡಲು ನಮ್ಮನ್ನು ಅರ್ಪಿಸುಕೊಳ್ಳುತ್ತೇವೆ ಮತ್ತು ದೇಶ ಭಾಂಧವರಲ್ಲಿ ಸಂದೇಶವನ್ನು ಸಾರಲು ಶ್ರಮಿಸುತ್ತೇನೆ ಎಂದು ಪ್ರಜ್ಞಾಪೂರ್ವಕವಾಗಿ ಪ್ರತಿಜ್ಞೆ ಮಾಡಲಾಯಿತು.
ರಾಷ್ಟçದ ಪ್ರಥಮ ಗೃಹ ಸಚಿವರಾದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ದೂರದೃಷ್ಟಿ ಮತ್ತು ಕಾರ್ಯಕ್ಷಮತೆಯಿಂದ ಸಾಧಿಸಿದ ರಾಷ್ಟಿçÃಯ ಏಕೀಕರಣದ ಸ್ಫೂರ್ತಿ ಕಾಪಾಡುತ್ತೇನೆ. ರಾಷ್ಟçದ ಆಂತರಿಕ ಭದ್ರತೆಯನ್ನು ಖಾತ್ರಿಪಡಿಸಲು ತಮ್ಮದೇ ಆದ ಕೊಡುಗೆ ನೀಡುತ್ತೇನೆ ಎಂದು ಪ್ರತಿಜ್ಞೆ ಸ್ವೀಕರಿಸಲಾಯಿತು. ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ನಾನಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.ಮಡಿಕೇರಿ: ನೆಹರು ಯುವ ಕೇಂದ್ರ, ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ ಕೊಡಗು, ಜಿಲ್ಲಾ ಯುವ ಒಕ್ಕೂಟ, ಕೊಡಗು. ತಾಲೂಕು ಯುವ ಒಕ್ಕೂಟ ಮಡಿಕೇರಿ, ಎಫ್, ಎಂ.ಕೆ.ಎA.ಸಿ. ಕಾಲೇಜು ಮಡಿಕೇರಿ, ಅಂಚೆ ಇಲಾಖೆ ಮಡಿಕೇರಿ, ಇವರ ಸಂಯುಕ್ತ ಆಶ್ರಯದಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮ ದಿನಾಚರಣೆಯ ಪ್ರಯುಕ್ತ ಏಕತಾ ದಿನದ ಅಂಗವಾಗಿ ಏಕತಾ ರ್ಯಾಲಿಯನ್ನು ಕೋಟೆ ಆವರಣದಿಂದ ಎಫ್ಎಂಸಿ ಕಾಲೇಜಿನವರೆಗೆ ನಡೆಸಲಾಯಿತು.
ಪೊಲೀಸ್ ಠಾಣಾಧಿಕಾರಿ ರಾಧಾ ರ್ಯಾಲಿಗೆ ಚಾಲನೆ ನೀಡಿದರು. ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲೂಕು ಒಕ್ಕೂಟದ ಅಧ್ಯಕ್ಷರಾದ ಬಾಳಾಡಿ ದಿಲೀಪ್ ಕುಮಾರ್ ಹಾಗೂ ಅಂಚೆ ಪಾಲಕ ಶ್ರೀನಿವಾಸ್ ಟಿ.ಪಿ. ಮತ್ತು ಸಿಬ್ಬಂದಿಗಳು ಆಗಮಿಸಿದ್ದರು. ಮಡಿಕೇರಿ ನಗರ ಠಾಣಾ ಸಿಬ್ಬಂದಿಗಳಾದ ಗಣಪತಿ ಎ.ಪಿ., ರವಿ. ಸಿ.ವಿ., ಸುನಿಲ್ ಹಾಗೂ ರಾಷ್ಟಿçà ಯುವ ಕಾರ್ಯಕರ್ತರಾದ ರಂಜಿತ ಜಿ.ಪಿ. ಹಾಗೂ ಲಕ್ಷಿö್ಮಕಾಂತ್ ಹಾಜರಿದ್ದರು. ಜಿಲ್ಲಾ ಯುವ ಒಕ್ಕೂಟ ಪದಾಧಿಕಾರಿಗಳು, ಅಂಚೆ ಇಲಾಖೆ ಸಿಬ್ಬಂದಿಗಳು, ರಾಷ್ಟಿçÃಯ ಸೇವಾ ಯೋಜನೆ ಎಫ್ಎಂಕೆಎAಸಿ ಘಟಕದ ಶಿಬಿರಾಧಿಕಾರಿ ಗಾಯಿತ್ರಿ ಹಾಗೂ ವಿದ್ಯಾರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಿ ಏಕತಾ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.*ಗೋಣಿಕೊಪ್ಪ: ಸರದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮ ದಿನ ಆಚರಣೆ ಪ್ರಯುಕ್ತ ಏಕತಾ ಓಟವನ್ನು ಪೊನ್ನಂಪೇಟೆ ಸಂತ ಅಂತೋಣಿ ಪ್ರೌಢಶಾಲೆಯ ವತಿಯಿಂದ ಏರ್ಪಡಿಸಲಾಗಿತ್ತು. ಸಂತ ಅಂತೋಣಿ ಪ್ರೌಢಶಾಲೆಯಿಂದ ರಾಮಕೃಷÀ್ಣ ಆಶ್ರಮದವರೆಗೆ ಏಕತಾ ಓಟ ನಡೆಯಿತು. ಮುಖ್ಯ ಶಿಕ್ಷಕಿ ರಜನಿ, ಸಹ ಶಿಕ್ಷಕಿ ರಶ್ಮಿ, ಗೀತಾ, ಶಾಂತ ಉಷಾ, ಹರ್ಷಿತಾ ಭಾಗವಹಿಸಿದ್ದರು.ಚೆಯ್ಯಂಡಾಣೆ: ಕಕ್ಕಬೆಯ ಸಮಾಜ ಕಲ್ಯಾಣ ಇಲಾಖೆಯಿಂದ ಇಲ್ಲಿನ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ‘ರಾಷ್ಟಿçÃಯ ಏಕತಾ ದಿನ’ ಆಚರಿಸಲಾಯಿತು. ಭಾರತದ ಏಕತೆಯ ಸೂತ್ರಧಾರ, ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನದ ಅಂಗವಾಗಿ ‘ಏಕತಾ ಪ್ರತಿಜ್ಞೆ’ ಮಾಡಲಾಯಿತು. ಈ ಸಂದರ್ಭ ಮುಖ್ಯ ಶಿಕ್ಷಕಿ ಸುಮಯ್ಯ ಕೆ.ಎಂ. ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಸಹಶಿಕ್ಷಕಿಯರಾದ ಕವಿತ, ಅಶ್ವಿನಿ ಉಪಸ್ಥಿತರಿದ್ದರು.ವೀರಾಜಪೇಟೆ: ವೀರಾಜಪೇಟೆ ಪಟ್ಟಣದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಪ್ರೌಢಶಾಲೆಯ ಎನ್.ಸಿ.ಸಿ. ಘಟಕದ ವತಿಯಿಂದ ಶಾಲೆಯಲ್ಲಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯ್ ಪಟೇಲ್ರ ಜನುಮದಿನ ಹಾಗೂ ರಾಷ್ಟಿçÃಯ ಏಕತಾ ದಿನವನ್ನು ಆಚರಿಸಲಾಯಿತು. ಈ ಸಂದರ್ಭ ಏಕತಾ ರ್ಯಾಲಿ ನಡೆಯಿತು.
ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಕರ್, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಬೆನ್ನಿ ಜೋಸೆಫ್, ಎನ್.ಸಿ.ಸಿ. ಅಧಿಕಾರಿಗಳಾದ ಅಬ್ದುಲ್ ಮುನೀರ್ ಉಪಸ್ಥಿತರಿದ್ದರು. ಪ್ರೌಢಶಾಲೆಯ ಎಲ್ಲಾ ಎನ್ಸಿಸಿ ವಿದ್ಯಾರ್ಥಿಗಳು ಹಾಜರಿದ್ದರು.