ಮಡಿಕೇರಿ ಅ. ೩೧ ನ. ೨ರಿಂದ ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಅನಿರ್ದಿಷ್ಟಾವಧಿ ಹೋರಾಟವನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಿಂಪಡೆದುಕೊAಡಿದ್ದಾರೆ. ಪಿಡಿಓಗಳ ಬೇಡಿಕೆಗಳನ್ನು ಈಡೇರಿಸುವ ಸ್ಪಷ್ಟ ಭರವಸೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿರುವುದರಿಂದ ಈ ನಿರ್ಧಾರ ತೆಗದುಕೊಂಡಿರುವುದಾಗಿ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಪರಿಷತ್ ಸದಸ್ಯ ಅಬ್ದುಲ್ಲಾ ತಿಳಿಸಿದ್ದಾರೆ. ವಿವಿಧ ೧೨ ಬೇಡಿಕೆಗಳನ್ನು ಮುಂದಿಟ್ಟುಕೊAಡು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ನ.೨ರಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲು ನಿರ್ಧರಿಸಿದ್ದರು. ಈ ಹಿನ್ನೆಲೆಯಲ್ಲಿ ಸಭೆ ಕರೆದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದಷ್ಟು ಬೇಗ ಪಿಡಿಓಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಸಂಘದ ಪ್ರತಿನಿಧಿಗಳಿಗೆ ಭರವಸೆ ನೀಡಿದ್ದಾರೆ.
ಪ್ರತಿಭಟನೆಯ ಬದಲಿಗೆ ನ.೨೦ರ ನಂತರ ಪಿಡಿಓಗಳ ರಾಜ್ಯಮಟ್ಟದ ಸಮಾವೇಶವೊಂದನ್ನು ಆಯೋಜಿಸಲಾಗುತ್ತಿದ್ದು, ಈ ಸಮಾವೇಶದಲ್ಲಿ ತಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿ ಗಮನಕ್ಕೆ ತಂದು, ಸಭೆ ಆಯೋಜನೆಗೆ ಕಾರಣಕರ್ತರಾದ ಸರಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರನ್ನು ಸನ್ಮಾನಿಸುವುದಾಗಿ ಅಬ್ದುಲ್ಲಾ ಹೇಳಿದ್ದಾರೆ.