ಸೋಮವಾರಪೇಟೆ, ನ. ೧: ಇಲ್ಲಿನ ರೋಟರಿ ಕ್ಲಬ್ ಆಫ್ ಸೋಮವಾರಪೇಟೆ ಹಿಲ್ಸ್ನ ವತಿಯಿಂದ ಸಮೀಪದ ಯಡೂರು ಗ್ರಾಮದ ಸರ್ಕಾರಿ ಬಿಟಿಸಿಜಿ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ ರೋಟರಿ ಸದಸ್ಯರಿಗೆ ವಲಯ ಮಟ್ಟದ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿತ್ತು.
ಕ್ರೀಡಾಕೂಟಕ್ಕೆ ರೋಟರಿ ಜಿಲ್ಲಾ ಕ್ರೀಡಾ ಸಂಚಾಲಕ ರವೀಂದ್ರ ರೈ ಚಾಲನೆ ನೀಡಿದರು. ನಂತರ ಮಾತನಾಡಿ, ದಿನನಿತ್ಯದ ಜಂಜಾಟದಲ್ಲಿ ಎಲ್ಲರೂ ತೊಡಗಿದ್ದು, ಒಟ್ಟಾಗಿ ಕ್ರೀಡೆಯಲ್ಲಿ ಪಾಲ್ಗೊಂಡು ಸಂಭ್ರಮಿಸುವ ಸಲುವಾಗಿ ವಲಯ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಕ್ರೀಡಾಕೂಟವನ್ನು ಆಯೋಜಿಸಿ ಕೊಂಡು ಬರಲಾಗುತ್ತಿದೆ. ಕ್ರೀಡೆ ಸಂಬAಧಗಳನ್ನು ಬೆಸೆಯುವು ದರೊಂದಿಗೆ ಒಂದಾಗಿ ಬಾಳಲು ಸಹಕಾರಿಯಾಗಿದೆ. ಕ್ರೀಡೆಯಲ್ಲಿ ಎಲ್ಲರೂ ಕ್ರೀಡಾ ಸ್ಪೂರ್ತಿಯಿಂದ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಸಂಸ್ಥೆಯ ಅಧ್ಯಕ್ಷ ಎಚ್.ಸಿ. ಲೋಕೇಶ್ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಸಹಾಯಕ ಗವರ್ನರ್‌ಗಳಾದ ಎಸ್.ಕೆ. ಸತೀಶ್, ಎಂ.ಡಿ. ಲಿಖಿತ್, ಹೆಚ್.ಕೆ. ದಿವಾಕರ್, ವಲಯದ ಮಾಜಿ ಗವರ್ನರ್ ಪಿ.ಕೆ. ರವಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಕ್ರೀಡಾಕೂಟದಲ್ಲಿ ೭ ತಂಡಗಳು ಪಾಲ್ಗೊಂಡಿದ್ದವು. ರೋಟರಿ ಕ್ಲಬ್ ಆಫ್ ಸೋಮವಾರಪೇಟೆ ಹಿಲ್ಸ್ ಪ್ರಥಮ ಸ್ಥಾನವನ್ನು ಪಡೆಯಿತು. ರೋಟರಿ ಶನಿವಾರಸಂತೆ ದ್ವಿತೀಯ ಸ್ಥಾನವನ್ನು ಪಡೆಯಿತು.