ಚೆಯ್ಯಂಡಾಣೆ, ನ. ೧: ಚೇರಂಬಾಣೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೆೆÃರಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಚೇರಂಬಾಣೆ ಸಂಯುಕ್ತಾಶ್ರಯದಲ್ಲಿ ವಿಶ್ವ ರೇಬಿಸ್ ತಡೆ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ದಿನದ ಕುರಿತು ಆಡಳಿತ ವೈದ್ಯಾಧಿಕಾರಿ ಡಾ. ಪಾರ್ವತಿ ಮಾಹಿತಿ ನೀಡಿದರು.
ಈ ಸಂದರ್ಭ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಇದ್ದರು.