ಪೊನ್ನಂಪೇಟೆ, ನ. ೧: ಪೊನ್ನಂಪೇಟೆ ತಾಲೂಕು ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶಿರಸ್ತೆದಾರ್ ಜನಾರ್ಧನ್ ಧ್ವಜಾರೋಹಣ ನೆರವೇರಿಸಿದರು. ತಾಲೂಕು ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ತಹಶೀಲ್ದಾರ್ ರವಿಕುಮಾರ್, ಪ್ರಮುಖರಾದ ಸ್ವಾತಿ, ಸುಧೀಂದ್ರ ಹಾಗೂ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.