ಮಡಿಕೇರಿ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ೬೭ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡ ಧ್ವಜಾರೋಹಣವು ಮಡಿಕೇರಿಯ ಗಾಂಧಿ ಮೈದಾನದಲ್ಲಿ ನಡೆಯಿತು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಧ್ವಜಾರೋಹಣ ಮಾಡಿ ಕನ್ನಡ, ಕನ್ನಡಿಗ, ಕರ್ನಾಟಕ, ಕನ್ನಡ ನಾಡು ನುಡಿ. ಪರಂಪರೆ, ಸಂಸ್ಕೃತಿ, ಇವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ ಕನ್ನಡ ಸಾಹಿತ್ಯ ಪರಿಷತ್ತು ವರ್ಷದ ೩೬೫ ದಿನವೂ ಕೂಡ ಕನ್ನಡದ ಕೆಲಸ ಮಾಡುತ್ತಿದೆ.
ಕನ್ನಡದ ಅಸ್ಮಿತೆಯನ್ನು ಉಳಿಸುವ ಬೆಳೆಸುವ ಕೆಲಸ ಮಾಡುತ್ತಿದೆ ಎಂದರು. ಧ್ವಜಾರೋಹಣ ಸಂದರ್ಭ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಮಡಿಕೇರಿ ತಾಲೂಕು ಅಧ್ಯಕ್ಷ ಅಂಬೆಕಲ್ ನವೀನ್, ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಎಸ್.ಐ. ಮುನಿರ್ ಅಹಮದ್, ಪಿ. ರೇವತಿ ರಮೇಶ್, ಕೋಶಾಧಿಕಾರಿ ಮುಂಡುವAಡ ಜೋಯಪ್ಪ, ಕರ್ನಾಟಕ ಕೊಡವ ಅಕಾಡೆಮಿ ಮಾಜಿ ಅಧ್ಯಕ್ಷೆ ರಾಣಿ ಮಾಚಯ್ಯ, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಕುಡೆಕಲ್ ಸಂತೋಷ್, ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾದ ಶ್ವೇತಾ ರವೀಂದ್ರ, ಎನ್.ಎ. ಗೌರಮ್ಮ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ, ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಭಾರತಿ ರಮೇಶ, ಮುತ್ತಪ್ಪ, ಬೈತಡ್ಕ ಜಾನಕಿ, ಆರ್.ಪಿ. ಚಂದ್ರಶೇಖರ್, ವಿ.ಟಿ. ಮಂಜುನಾಥ್, ಪವಿತ್ರ ಇತರರು ಹಾಜರಿದ್ದರು.ವೀರಾಜಪೇಟೆ: ಗಡಿಭಾಗವಾದ ಮಾಕುಟ್ಟದಲ್ಲಿ ೬೭ನೇ ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ ವೀರಾಜಪೇಟೆ ತಾಲೂಕು ಘಟಕ ಮತ್ತು ಬೇಟೋಳಿ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ರಾಜ್ಯದ ಗಡಿಭಾಗವಾದ ಮಾಕುಟ್ಟ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ೬೭ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಾಕುಟ್ಟ ವಲಯ ಅರಣ್ಯ ಸಂರಕ್ಷಣಾಧಿಕಾರಿ ಸುಹಾನ ಹರೀಶ್ ಅತ್ತಾವರ, ಬೇಟೋಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಬಿ. ಮಣಿ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಜೇಶ್ ಪದ್ಮನಾಭ ಅವರು ಕನ್ನಡದ ಭಾವುಟವನ್ನು ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಜ್ಯೋತ್ಸವದ ದಿನದ ಮಹತ್ವವನ್ನು ಉದ್ದೇಶಿಸಿ ಮಾತನಾಡಿದ ಬೇಟೋಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಬಿ. ಮಣಿ ಅವರು, ಸಂಸ್ಕೃತವು ಪ್ರಪಂಚದ ಮೊಟ್ಟಮೊದಲ ಭಾಷೆಯಾಗಿ ಪ್ರಚಲಿತವಾದರೂ ಕನ್ನಡ ಭಾಷೆಗೆ ಶಾಸ್ತಿçÃಯ ಸ್ಥಾನಮಾನಗಳನ್ನು ನೀಡುವಂತೆ ಇಂದಿಗೂ ಹೋರಾಟಗಳು ನಡೆಯುತ್ತಾ ಬಂದಿದೆ. ಕನ್ನಡ ಭಾಷೆಯ ಮೇಲೆ ವಿವಿಧ ಭಾಷೆಗಳ ಪ್ರಯೋಗವಾದರೂ, ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾವುಗಳು ಕಠಿಬದ್ದರಾಗಬೇಕು ಎಂದರು. ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಮಾತನಾಡಿ, ರಾಜ್ಯ ಮತ್ತು ಜಿಲ್ಲೆಯ ಗಡಿ ಭಾಗವಾದ ಮಾಕುಟ್ಟದಲ್ಲಿ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸಂತೋಷದಾಯಕ ವಿಷಯ. ಕನ್ನಡ ಭಾಷೆಗೆ ಸೂಕ್ತ ಸ್ಥಾನಮಾನಗಳು ಲಭಿಸುವಂತಾಗಬೇಕು ಎಂದರು. ರಾಜ್ಯೋತ್ಸವದ ಮಹತ್ವದ ಕುರಿತು ಸಾಹಿತ್ಯ ಪರಿಷತ್ ಕೋಶಾಧಿಕಾರಿ ಶಭರೀಶ್ ಶೆಟ್ಟಿ ಮತ್ತು ಪೊನ್ನಂಪೇಟೆ ಅರಣ್ಯ ಕಾಲೇಜು ಪ್ರಶಿಕ್ಷಣಾರ್ಥಿ ಸುಮಂತ್ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ ವೀರಾಜಪೇಟೆ ತಾಲೂಕು ಘಟಕದ ಅಧ್ಯಕ್ಷ ರಾಜೇಶ್ ಪದ್ಮನಾಭ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾತನಾಡುವ ಭಾಷೆ ಹಲವು ಇದ್ದರೂ, ರಾಜ್ಯ ಭಾಷೆ ಮಾತೃ ಭಾಷೆಗೆ ಪ್ರಾಮುಖ್ಯತೆ ನೀಡಿ ಇತರ ಭಾಷೆಯನ್ನು ಗೌರವಿಸುವಂತಾಗಬೇಕು. ಕನ್ನಡವನ್ನು ಮರೆತರೆ ತಂದೆ-ತಾಯಿಯನ್ನೇ ಮರೆತ ಹಾಗೆ. ರಾಜ್ಯದ ಭಾಷೆಯಾಗಿರುವ ಕನ್ನಡವನ್ನು ಇತರ ಭಾಷಿಕರಿಗೂ ತಿಳಿಸಿಕೊಡಬೇಕು. ವ್ಯಾವಹಾರಿಕವಾಗಿ ಕನ್ನಡ ಭಾಷೆಯು ಪ್ರಚಲಿತದಲ್ಲಿ ಬರಲು ಸರ್ವರು ಸಹಕರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಟೋಮಿ ತೋಮಸ್, ಕಲಾವಿದ ಮೋಹನ್, ಶಿಕ್ಷಣ ಇಲಾಖೆಯ ವೆಂಕಟೇಶ್, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸಜೇಶ್ ಕುಮಾರ್, ಬೇಟೋಳಿ ಗ್ರಾಮ ಪಂಚಾಯಿತಿ ಸದಸ್ಯರು, ಮಾಕುಟ್ಟ ಅರಣ್ಯ ವಲಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು, ಸಾರ್ವಜನಿಕರು ಹಾಜರಿದ್ದರು.ಪೊನ್ನಂಪೇಟೆ: ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗ ಮತ್ತು ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಶಾಲೆ ಆವರಣದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ರಾಜ್ಯೋತ್ಸವದ ಪ್ರಯುಕ್ತ ಕೆಪಿಎಸ್ ಶಾಲಾ ಆವರಣದಿಂದ ಬಸವೇಶ್ವರ ದೇವಸ್ಥಾನದವರೆಗೆ ಜಾಥಾ ನಡೆಯಿತು.
ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ರಘುನಾಥ್ ಶರ್ಮಾ ಮಾತನಾಡಿ, ಕನ್ನಡ ಭಾಷೆ ಉಳಿಯಬೇಕಾದರೆ ಕನ್ನಡ ಶಾಲೆಗಳ ಗುಣಮಟ್ಟವನ್ನು ಹೆಚ್ಚಿಸುವ ಮೂಲಕ ಕನ್ನಡ ಶಾಲೆಗಳಿಗೆ ಹೆಚ್ಚು ಮಕ್ಕಳು ಸೇರುವಂತೆ ಮಾಡಬೇಕು. ಆ ಮೂಲಕ ಕನ್ನಡ ಶಾಲೆಗಳು ಉಳಿಯುವಂತೆ ಮಾಡಬೇಕು. ಈ ಬಗ್ಗೆ ಸರ್ಕಾರ ಚಿಂತನೆ ನಡೆಸುವ ಅಗತ್ಯತೆ ಇದೆ ಎಂದರು. ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಳೆರ ದಯಾ ಚಂಗಪ್ಪ ಮಾತನಾಡಿ ನಾವು ಎಲ್ಲಾ ಭಾಷೆಯನ್ನು ಪ್ರೀತಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ಆದರೆ ಕನ್ನಡ ಭಾಷೆಯನ್ನು ಪ್ರತಿದಿನ ಬಳಸುವ ಮೂಲಕ ಬೆಳೆಸುವ ಕಾರ್ಯಕ್ಕೆ ಮುಂದಾಗಬೇಕು ಎಂದರು. ಕೆಪಿಎಸ್ ಶಾಲೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೂಕಳೇರ ಕುಶಾಲಪ್ಪ ಮಾತನಾಡಿದರು.
ಶಾಲಾ ಮಕ್ಕಳು ಕರ್ನಾಟಕ ರಾಜ್ಯೋತ್ಸವದ ಬಗ್ಗೆ ಭಾಷಣ ಮಾಡಿದರು. ಕನ್ನಡ ನಾಡು ನುಡಿ ಕುರಿತಾದ ಗೀತಗಾಯನ ಮತ್ತು ನೃತ್ಯದ ಮೂಲಕ ಗಮನ ಸೆಳೆದರು. ಈ ಸಂದರ್ಭ ಮುಖ್ಯ ಶಿಕ್ಷಕ ಬಿ.ಎಂ. ವಿಜಯ್, ಪಿಡಿಓ ಪುಟ್ಟರಾಜು, ಪೊನ್ನಂಪೇಟೆ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಸುಬ್ರಮಣಿ, ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕಾಕಮಾಡ ಚಂಗಪ್ಪ, ಕಾಕಮಾಡ ಗಂಗಾ ಚಂಗಪ್ಪ, ಗ್ರಾ.ಪಂ. ಸದಸ್ಯ ರಾಮಕೃಷ್ಣ, ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಾದ ಹೆಚ್.ಟಿ. ಗಿರೀಶ್, ರುದ್ರಪ್ಪ, ರೇಖಾ ಶ್ರೀಧರ್, ಸಾಹಿತಿ ಟಿ.ಆರ್. ವಿನೋದ್, ಶಿಕ್ಷಕರು, ಅತಿಥಿ ಶಿಕ್ಷಕಿಯರು, ಎಸ್ಡಿಎಂಸಿ ಸದಸ್ಯರು ಇದ್ದರು.
ವಿದ್ಯಾರ್ಥಿ ಘನ ಶಾಮ್ ಶರ್ಮಾ ಪ್ರಾರ್ಥಿಸಿ, ದೈಹಿಕ ಶಿಕ್ಷಕ ಮಹೇಶ್ ನಿರೂಪಿಸಿದರು. ಮುಖ್ಯ ಶಿಕ್ಷಕ ಬಿ.ಎಂ. ವಿಜಯ್ ಸ್ವಾಗತಿಸಿ, ಶಿಕ್ಷಕಿ ಫಿಲೋಮಿನ ವಂದಿಸಿದರು.ಸೋಮವಾರಪೇಟೆ: ಇಲ್ಲಿನ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಪಟ್ಟಣದಲ್ಲಿ ಆಯೋಜನೆಗೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.
ಬೆಳಿಗ್ಗೆ ಆಟೋ ನಿಲ್ದಾಣದಲ್ಲಿ ಧ್ವಜಾರೋಹಣ ನೆರವೇರಿಸಿ, ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ನಂತರ ಕಕ್ಕೆಹೊಳೆ ಬಳಿಯಿಂದ ಡೊಳ್ಳು ಕುಣಿತದೊಂದಿಗೆ ಆಟೋಗಳ ಮೆರವಣಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ನಡೆಯಿತು. ಪ್ರತಿಯೊಂದು ಆಟೋಗಳಲ್ಲಿ ಕನ್ನಡ ಬಾವುಟವನ್ನು ಕಟ್ಟಿ ಕನ್ನಡಪರ ಘೋಷಣೆಗಳನ್ನು ಮೊಳಗಿಸುತ್ತಾ ಕನ್ನಡಾಭಿಮಾನ ಮೆರೆಯಲಾಯಿತು.
ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ಶಾಲಾ ವಿದ್ಯಾರ್ಥಿಗಳಿಗೆ ಕುಣಿಯೋಣ ಬಾರಾ ಸ್ಪರ್ಧಾ ಕಾರ್ಯಕ್ರಮವನ್ನು ಮಾಜೀ ಸಚಿವ ಬಿ.ಎ. ಜೀವಿಜಯ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ಆಟೋ ಚಾಲಕರು ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಸರ್ಕಾರಗಳು ಆಟೋ ಚಾಲಕರ ಬೇಕು ಬೇಡಿಕೆಗಳನ್ನು ಈಡೇರಿಸಲು ಯೋಜನೆಗಳನ್ನು ರೂಪಿಸಬೇಕೆಂದು ಅಭಿಪ್ರಾಯಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಪಟ್ಟಣ ಪಂಚಾಯಿತಿ ಸದಸ್ಯರಾದ ಬಿ.ಆರ್. ಶುಭಕರ್, ಮೋಹಿನಿ, ಶೀಲಾ ಡಿಸೋಜ, ಜಿ.ಪಂ. ಮಾಜೀ ಸದಸ್ಯ ಬಿ.ಜೆ. ದೀಪಕ್, ಶಿಕ್ಷಕರ ಸಂಘದ ಶಿವಕುಮಾರ್, ಆಟೋ ಯೂನಿಯನ್ ಮಾಜೀ ಅಧ್ಯಕ್ಷ ಉಮೇಶ್, ಪ್ರಮುಖರಾದ ಮಂದಣ್ಣ, ವನಜ ರವಿ, ಕೆ.ವಿ.ಪುಟ್ಟಣ್ಣ ಆಚಾರ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.
ನಂತರ ಸೋಮವಾರಪೇಟೆ ಸುತ್ತಮುತ್ತಲ ಶಾಲಾ-ಕಾಲೇಜು ತಂಡಗಳಿAದ ಮೂಡಿಬಂದ ನೃತ್ಯ ರೂಪಕ ಎಲ್ಲರ ಮನಸೂರೆಗೊಂಡಿತು. ವಿಜೇತ ತಂಡಗಳಿಗೆ ಅತಿಥಿಗಳು ಬಹುಮಾನ ವಿತರಿಸಿದರು. ಸಂಘದ ಅಧ್ಯಕ್ಷ ಹೆಚ್.ಕೆ. ಗಂಗಾಧರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.
ಸಂಘದ ಉಪಾಧ್ಯಕ್ಷ ಅಬ್ದುಲ್ ಕರೀಂ, ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜನಾರ್ಧನ್, ಖಜಾಂಚಿ ಸುದೀಪ್ ಆಲ್ಬರ್ಟ್ ಹಾಗೂ ಪಿ.ಎನ್. ರಮೇಶ್, ರಾಜ್ಯೋತ್ಸವ ಸಮಿತಿ ಗೌರವಾಧ್ಯಕ್ಷ ಪಾಣತ್ತಲೆ ಶಶಿಧರ್ ಸೇರಿದಂತೆ ಪದಾಧಿಕಾರಿಗಳು ಕಾರ್ಯಕ್ರಮ ನಿರ್ವಹಿಸಿದರು.ಚೆಯ್ಯಂಡಾಣೆ: ಸ್ಥಳೀಯ ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ೬೭ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಧ್ವಜಾರೋಹಣವನ್ನು ಶಾಲಾ ಶಿಕ್ಷಕಿ ಸುನೀತಾ ನೆರವೇರಿಸಿದರು. ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಭಾರ ಮುಖ್ಯ ಶಿಕ್ಷಕಿ ಸುನೀತಾ ವಹಿಸಿ ದಿನದ ಮಹತ್ವದ ಕುರಿತು ಮಾತನಾಡಿದರು. ಶಿಕ್ಷಕಿ ಮಮತಾ ಕರ್ನಾಟಕ ಏಕೀಕರಣದ ಕುರಿತು ಮಾತನಾಡಿದರು. ವಿದ್ಯಾರ್ಥಿಗಳಿಂದ ಭಾಷಣ, ನಾಡಗೀತೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಶಾಲಾ ಆಡಳಿತ ಮಂಡಳಿ ನಿರ್ದೇಶಕಿ ಹೆಚ್.ಎಸ್. ವಸಂತಿ, ಶಿಕ್ಷಕ ರಾಜಕುಮಾರ್, ಪೊನ್ನಪ್ಪ, ರವೀಂದ್ರ ನಾಥ್, ಶಿಕ್ಷಕಿ ಹೇಮಾಮಾಲಿನಿ, ಭವ್ಯ ಹಾಗೂ ವಿದ್ಯಾರ್ಥಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ನಿರೂಪಣೆಯನ್ನು ವಿದ್ಯಾರ್ಥಿಗಳಾದ ಖುಷಿ, ಸ್ವಾಗತವನ್ನು ಹರ್ಷಿತ, ವಂದನೆಯನ್ನು ರಕ್ಷಿತಾ ನೆರವೇರಿಸಿದರು.ಗುಡ್ಡೆಹೊಸೂರು: ಇಲ್ಲಿನ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷ ಬಿ.ಎನ್. ಕಾಶಿ ಧ್ಯಜಾರೋಹಣ ನೆರವೇರಿಸಿದರು. ಶಾಲಾ ಮುಖ್ಯಶಿಕ್ಷಕ ಸಣ್ಣಸ್ವಾಮಿ ಸ್ವಾಗತಿಸಿದರು. ಈ ಸಂದರ್ಭ ಶಾಲಾ ಮಕ್ಕಳು, ಶಿಕ್ಷಕ ವೃಂದ ಎಸ್.ಡಿ.ಎಂ.ಸಿ. ಸದಸ್ಯರು ಸೇರಿ ಕನ್ನಡ ವೀರರ ವೇಷ ಧರಿಸಿದ ಮಕ್ಕಳು ವಾಹನದಲ್ಲಿ ಮೆರವಣಿಗೆ ಸಾಗಿದರು. ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಕನ್ನಡ ಗೀತೆಗೆ ನೃತ್ಯ ನಡೆಯಿತು.
ಈ ಸಂದರ್ಭ ಎಸ್.ಡಿ.ಎಂ.ಸಿ. ಅಧ್ಯಕ್ಷ ಪರಮೆಶ್, ಮಾಜಿ ಅಧ್ಯಕ್ಷರಾದ ಬಿ.ಎಸ್. ಧನಪಾಲ್, ಲಲಿತ, ಪಿ.ಡಿ.ಓ. ಶ್ಯಾಂ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಹಾಜರಿದ್ದರು. ವಂದನಾರ್ಪಣೆಯನ್ನು ಶಿಕ್ಷಕಿ ಜಯಂತಿ ಮಾಡಿದರು. ಬಿ.ಡಿ. ಯಶುಮತಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ. ಆನಂದ ಅವರು ವಹಿಸಿದ್ದರು.ಮಡಿಕೇರಿ: ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕೊಡಗು ಹಿತರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿ ನಗರದ ವಿಶ್ವಮಾನವ ಉದ್ಯಾನವನದಲ್ಲಿ ೬೭ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ನ ಜಿಲ್ಲಾಧ್ಯಕ್ಷ ಕೇಶವ್ ಕಾಮತ್ ಅವರು ಧ್ವಜಾರೋಹಣ ನೆರವೇರಿಸಿದರು. ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಅವರು ರಾಜ್ಯೋತ್ಸವದ ಶುಭಾಶಯಗಳು ಕೋರಿ ರಾಜ್ಯೋತ್ಸವದ ಕುರಿತು ಹಿತನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ವೇದಿಕೆಯ ಅಧ್ಯಕ್ಷ ರವಿಗೌಡ, ತಾಲೂಕು ಉಪಾಧ್ಯಕ್ಷ ನಾಗೇಶ್, ಮಹಿಳಾ ಘಟಕದ ಅಧ್ಯಕ್ಷೆ ರೋಹಿಣಿ, ತಾಲೂಕು ಕಾರ್ಯದರ್ಶಿ ಅಕ್ಷಿತ್, ಗೌರವ ಅಧ್ಯಕ್ಷೆ ಭಾರತಿ ರಮೇಶ್, ಮೂರ್ನಾಡು ಹೋಬಳಿ ಅಧ್ಯಕ್ಷ ವಸಂತ್, ಕಾರ್ಮಿಕ ಘಟಕದ ಅಧ್ಯಕ್ಷೆ ದಿವ್ಯ, ನಗರ ಕಾರ್ಯದರ್ಶಿ ಪೂರ್ಣಿಮಾ, ನಿರ್ದೇಶಕಿ ಲಿಲ್ಲಿ, ಸದಸ್ಯರುಗಳಾದ ಕುಮಾರ್, ಷÀಂಶÀÄದ್ದೀನ್, ಸೈಮನ್, ಕಿರಣ್, ಅಜಿತ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ನ ಜಿಲ್ಲಾಧ್ಯಕ್ಷ ಕೇಶವ್ ಕಾಮತ್, ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಕೆ.ಟಿ. ಬೇಬಿ ಮ್ಯಾಥ್ಯೂ, ಜೋಯಪ್ಪ, ರಾಣಿ ಮಾಚಯ್ಯ, ಜಾನಕಿ ಬೆಳ್ಯಪ್ಪ, ಕುಡೆಕಲ್ ಸಂತೋಷ್, ಮುನೀರ್ ಅಹಮದ್, ಶ್ವೇತಾ ರವೀಂದ್ರ, ರಮೇಶ್, ರೇವತಿ ರಮೇಶ್, ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ, ಆರ್.ಪಿ. ಚಂದ್ರಶೇಖರ್, ಸತೀಶ್ ಪೈ ಹಾಗೂ ಹಲವು ವೇದಿಕೆಯ ಕಾರ್ಯಕರ್ತರು ಮತ್ತು ಸಾರ್ವಜನಿಕರು ಹಾಜರಿದ್ದರು. ಕರ್ನಾಟಕ ರಕ್ಷಣಾ ವೇದಿಕೆಯ ಗೌರವ ಅಧ್ಯಕ್ಷೆ ಭಾರತಿ ರಮೇಶ್ ಸ್ವಾಗತಿಸಿದರು. ನೆರೆದಿದ್ದವರಿಗೆ ಹಾಗೂ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು.ಮಡಿಕೇರಿ: ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕೊಡಗು ಹಿತರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿ ನಗರದ ವಿಶ್ವಮಾನವ ಉದ್ಯಾನವನದಲ್ಲಿ ೬೭ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ನ ಜಿಲ್ಲಾಧ್ಯಕ್ಷ ಕೇಶವ್ ಕಾಮತ್ ಅವರು ಧ್ವಜಾರೋಹಣ ನೆರವೇರಿಸಿದರು. ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಅವರು ರಾಜ್ಯೋತ್ಸವದ ಶುಭಾಶಯಗಳು ಕೋರಿ ರಾಜ್ಯೋತ್ಸವದ ಕುರಿತು ಹಿತನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ವೇದಿಕೆಯ ಅಧ್ಯಕ್ಷ ರವಿಗೌಡ, ತಾಲೂಕು ಉಪಾಧ್ಯಕ್ಷ ನಾಗೇಶ್, ಮಹಿಳಾ ಘಟಕದ ಅಧ್ಯಕ್ಷೆ ರೋಹಿಣಿ, ತಾಲೂಕು ಕಾರ್ಯದರ್ಶಿ ಅಕ್ಷಿತ್, ಗೌರವ ಅಧ್ಯಕ್ಷೆ ಭಾರತಿ ರಮೇಶ್, ಮೂರ್ನಾಡು ಹೋಬಳಿ ಅಧ್ಯಕ್ಷ ವಸಂತ್, ಕಾರ್ಮಿಕ ಘಟಕದ ಅಧ್ಯಕ್ಷೆ ದಿವ್ಯ, ನಗರ ಕಾರ್ಯದರ್ಶಿ ಪೂರ್ಣಿಮಾ, ನಿರ್ದೇಶಕಿ ಲಿಲ್ಲಿ, ಸದಸ್ಯರುಗಳಾದ ಕುಮಾರ್, ಷÀಂಶÀÄದ್ದೀನ್, ಸೈಮನ್, ಕಿರಣ್, ಅಜಿತ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ನ ಜಿಲ್ಲಾಧ್ಯಕ್ಷ ಕೇಶವ್ ಕಾಮತ್, ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಕೆ.ಟಿ. ಬೇಬಿ ಮ್ಯಾಥ್ಯೂ, ಜೋಯಪ್ಪ, ರಾಣಿ ಮಾಚಯ್ಯ, ಜಾನಕಿ ಬೆಳ್ಯಪ್ಪ, ಕುಡೆಕಲ್ ಸಂತೋಷ್, ಮುನೀರ್ ಅಹಮದ್, ಶ್ವೇತಾ ರವೀಂದ್ರ, ರಮೇಶ್, ರೇವತಿ ರಮೇಶ್, ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ, ಆರ್.ಪಿ. ಚಂದ್ರಶೇಖರ್, ಸತೀಶ್ ಪೈ ಹಾಗೂ ಹಲವು ವೇದಿಕೆಯ ಕಾರ್ಯಕರ್ತರು ಮತ್ತು ಸಾರ್ವಜನಿಕರು ಹಾಜರಿದ್ದರು. ಕರ್ನಾಟಕ ರಕ್ಷಣಾ ವೇದಿಕೆಯ ಗೌರವ ಅಧ್ಯಕ್ಷೆ ಭಾರತಿ ರಮೇಶ್ ಸ್ವಾಗತಿಸಿದರು. ನೆರೆದಿದ್ದವರಿಗೆ ಹಾಗೂ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು.ಚೆಯ್ಯಂಡಾಣೆ: ಕಕ್ಕಬೆಯ ಸಮಾಜ ಕಲ್ಯಾಣ ಇಲಾಖೆ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ೬೭ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು. ಕನ್ನಡ ಧ್ವಜವನ್ನು ಹಾರಿಸಿ ಸಭಾ ಕಾರ್ಯಕ್ರಮ ನಡೆಸಲಾಯಿತು. ವಿದ್ಯಾರ್ಥಿಗಳು ದಿನದ ಮಹತ್ವದ ಕುರಿತು ಹಾಡು, ಭಾಷಣ ಮಾಡಿದರು. ಮುಖ್ಯ ಶಿಕ್ಷಕಿ ಸುಮಯ್ಯ ಕೆ.ಎಂ. ಕನ್ನಡದ ಹಿರಿಮೆ, ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಸಂದೇಶ ಹೇಳಿದರು. ಶಾಲಾ ವತಿಯಿಂದ ಹಾಗೂ ಕುಂಜಿಲ ಕಕ್ಕಬೆ ಗ್ರಾಮ ಪಂಚಾಯಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿ ಹಂಚಲಾಯಿತು.
ಈ ಸಂದರ್ಭ ಶಾಲಾ ಶಿಕ್ಷಕರರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.ಮಡಿಕೇರಿ: ಮಡಿಕೇರಿಯ ಕಾವೇರಿ ವಾಹನ ಮಾಲೀಕರ ಮತ್ತು ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಸಂಘದ ಅಧ್ಯಕ್ಷ ಎ.ಸಿ. ಲೋಕೇಶ್ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಸಂಘದ ಸಲಹೆಗಾರ ತೆನ್ನಿರ ಮೈನ ಹಾಗೂ ಹಿರಿಯ ಸದಸ್ಯರಾದ ನಾಗರಾಜ್ ಅವರು ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ತೆನ್ನಿರ ಮೈನ ಅವರು, ಕರ್ನಾಟಕ ಭೌಗೋಳಿಕವಾಗಿ ಬೀದರ್ನಿಂದ ಚಾಮರಾಜನಗರದವರೆಗೆ, ಬಳ್ಳಾರಿಯಿಂದ ಉತ್ತರ ಕನ್ನಡದವರೆಗೆ ಒಂದಾಗಿದ್ದು, ಹೃದಯದ ಭಾವ ಮತ್ತು ಭಾವನೆಗಳಿಂದ ಕನ್ನಡಿಗರು ಒಂದಾಗಬೇಕು ಎಂದು ಕರೆ ನೀಡಿದರು. ೧೯೫೬ ನವೆಂಬರ್ ೧ ರಂದು ಕನ್ನಡಪರ ಹೋರಾಟಗಾರರು ಮತ್ತು ಹಿರಿಯರ ಪ್ರಯತ್ನದ ಫಲವಾಗಿ ಮುಂಬೈ ಕರ್ನಾಟಕ, ಹೈದರಾಬಾದ್ ಕರ್ನಾಟಕ, ಮೈಸೂರು ಪ್ರಾಂತ್ಯ, ಕೊಡಗು ಪ್ರಾಂತ್ಯ ಸೇರಿದಂತೆ ಅನೇಕ ಭಾಗಗಳಾಗಿದ್ದ ಕರ್ನಾಟಕ ಏಕೀಕರಣವಾಯಿತು. ಈ ದಿನದ ಸವಿ ನೆನಪಿಗಾಗಿ ಪ್ರತಿಯೊಬ್ಬ ಕನ್ನಡಿಗರು ರಾಜ್ಯೋತ್ಸವ ಆಚರಿಸುತ್ತಾರೆ ಎಂದು ವಿವರಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಎ.ಸಿ. ಲೋಕೇಶ್ ಅವರು ಕನ್ನಡಿಗರೆಲ್ಲರೂ ಸಾಮೂಹಿಕವಾಗಿ ಆಚರಿಸುವ ಹಬ್ಬ ಕನ್ನಡ ರಾಜ್ಯೋತ್ಸವ ಆಗಿದ್ದು ಇಂದು ನಮ್ಮ ಹೆಮ್ಮೆಯ ದಿನ ಎಂದು ಹೇಳಿದರು. ಸಂಘದ ಉಪಾಧ್ಯಕ್ಷ ಜಫ್ರುಲ್ಲ, ಮಾಜಿ ಅಧ್ಯಕ್ಷ ಬದ್ದಂಜೆಟ್ಟಿರ ಜೈಜಗದೀಶ್, ಪ್ರಧಾನ ಕಾರ್ಯದರ್ಶಿ ಕುಯ್ಯಮುಡಿ ರಾಜೇಶ್, ಸದಸ್ಯರಾದ ರಫೀಕ್, ಸಂತೋಷ್, ಆನಂದ, ಸುಂದರ ಬಂಗೇರ, ಯೋಗೇಶ್ ಶೆಟ್ಟಿ, ಕುಮಾರ್, ಸತೀಶ್, ಹೊಟೇಲ್ ಚಾಯ್ಸ್ ಮಾಲೀಕ ರತಿಕೇಶನ್ ಮತ್ತು ಸಿಬ್ಬಂದಿಗಳು ಸೇರಿದಂತೆ ಸ್ಥಳೀಯರು ಭಾಗವಹಿಸಿದ್ದರು.ಮಡಿಕೇರಿ: ಕನ್ನಡ ನಾಡು ನುಡಿಯ ಬಗ್ಗೆ ಕನ್ನಡಿಗರಿಗೆ ಅಪಾರವಾದ ಗೌರವವಿರಬೇಕು; ಭಾಷೆಯ ಬೆಳವಣಿಗೆಗೆ ನಾವೆಲ್ಲರೂ ಶ್ರಮಿಸಬೇಕು ಎಂದು ಕ.ಸಾ.ಪ. ಜಿಲ್ಲಾಧ್ಯಕ್ಷ ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ. ಕೇಶವ ಕಾಮತ್ ನುಡಿದರು.
ಕೊಡಗು ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದ್ದ ೬೭ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಈ ಸಂದರ್ಭ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್, ಕೋಶಾಧಿಕಾರಿ ಕೆ. ತಿಮ್ಮಪ್ಪ, ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ. ರಮೇಶ್, ಸಿಬ್ಬಂದಿಗಳಾದ ಯಮುನಾ, ಸವಿತಾ, ರಾಜೇಶ್, ಕ.ಸಾ.ಪ. ಜಿಲ್ಲಾ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್, ಕೋಶಾಧಿಕಾರಿ ಎಂ.ಬಿ. ಜೋಯಪ್ಪ, ಪದಾಧಿಕಾರಿಗಳಾದ ಭಾರತಿ ರಮೇಶ್, ಶ್ವೇತಾ ರವೀಂದ್ರ, ಮಡಿಕೇರಿ ತಾಲೂಕು ಮಾಜಿ ಅಧ್ಯಕ್ಷ ಕುಡೆಕಲ್ ಸಂತೋಷ್, ಸದಸ್ಯರಾದ ಅಬ್ದುಲ್ಲಾ, ಶರೀಫ್, ಹೆಚ್.ಎಸ್. ಪ್ರೇಮ್ ಕುಮಾರ್, ಪವಿತ್ರಾ, ಡಿ.ಡಿ. ರಮೇಶ್, ವಿ.ಟಿ. ಮಂಜುನಾಥ್, ಉದ್ಯಮಿಗಳಾದ ಅಶ್ರಫ್, ರಾಮಣ್ಣ, ಲೀಲಾವತಿ ಪುಟಾಣಿಗಳಾದ ಮೌಲ್ಯ ಬಜೆಕೋಡಿ, ತರುಣ್ ಬಜೆಕೋಡಿ, ಚರಿತಾ ಭಾಗವಹಿಸಿದ್ದರು.ಕರಿಕೆ: ರಾಜ್ಯದ ಗಡಿ ಗ್ರಾಮವಾದ ಕರಿಕೆ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸ್ಥಳೀಯ ಪಂಚಾಯಿತಿ ಹಾಗೂ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಸಹಯೋಗದೊಂದಿಗೆ ೬೭ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮಕ್ಕೆ ಬ್ಯಾಂಡ್ ಬಾರಿಸುವ ಮೂಲಕ ಮೆರವಣಿಗೆಗೆ ಗ್ರಾ.ಪಂ. ಅಧ್ಯಕ್ಷೆ ಕಲ್ಪನಾ ಜಗದೀಶ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಎನ್. ಬಾಲಚಂದ್ರನ್ ನಾಯರ್ ಹಾಗೂ ಗ್ರಾ.ಪಂ. ಸದಸ್ಯರು, ರಾಷ್ಟಿçÃಯ ಹಬ್ಬ ಸಮಿತಿಯ ಸದಸ್ಯರು, ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಾಲಾ ಮಕ�