ಸಿದ್ದಾಪುರ, ನ. ೧: ದ್ವಿಚಕ್ರ ವಾಹನ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಸಿದ್ದಾಪುರದಲ್ಲಿ ನಡೆದಿದೆ.
ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡುಗದ್ದೆ ನಿವಾಸಿ ಬಶೀರ್ ಎಂಬವರ ಮಗ ಸಲ್ಮಾನ್ (೧೯) ಮೃತ ದುರ್ದೈವಿ.
ಸಿದ್ದಾಪುರದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ ಮಂಗಳವಾರದAದು ಸಿದ್ದಾಪುರ ಸಮೀಪದ ಅಂಬೇಡ್ಕರ್ ನಗರದಿಂದ ಸಿದ್ದಾಪುರಕ್ಕೆ ದ್ವಿಚಕ್ರ (ಕೆಎ ೧೨ ವಿ೫೭೮೫) ವಾಹನದಲ್ಲಿ ಬರುತ್ತಿದ್ದ ಸಂದರ್ಭ ಸವಾರನ ನಿಯಂತ್ರಣ ತಪ್ಪಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿಯಲ್ಲಿ ನಿಲ್ಲಿಸಿದ್ದ ವ್ಯಾಗನರ್ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.