ಮಡಿಕೇರಿ, ನ. ೨: ಮಡಿಕೇರಿ ಚಾಮುಂಡೇಶ್ವರಿ ನಗರದ ರಸ್ತೆ ತೀರಾ ಹಾನಿಗೀಡಾಗಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಡಿಕೇರಿಯ ಗ್ರಾಹಕರ ವೇದಿಕೆ ನ್ಯಾಯಾಲಯದ ಸನಿಹದಲ್ಲಿ ರಸ್ತೆಗಳು ಗುಂಡಿ ಬಿದ್ದಿದ್ದು, ದ್ವಿಚಕ್ರ ವಾಹನ ಸವಾರರು, ಪಾದಚಾರಿಗಳು ಪರದಾಡುವಂತಾಗಿದೆ. ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಹಾಗೂ ಮತ್ತೋರ್ವ ಸದಸ್ಯೆ ಶ್ವೇತಾ ಪ್ರಶಾಂತ್ ಅವರುಗಳು ಈ ವಾರ್ಡ್ಗೆ ಸಂಬAಧಿಸಿದವರಾಗಿದ್ದಾರೆ. ಆದರೂ ರಸ್ತೆಯ ಸ್ಥಿತಿ ಈ ರೀತಿಯಲ್ಲಿರುವ ಬಗ್ಗೆ ಪ್ರಶ್ನಿಸುವಂತಾಗಿದೆ ಎಂದು ಜನರು ಬೇಸರ ವ್ಯಕ್ತಪಡಿಸಿದ್ದಾರೆ.