ಕಲ್ಲುಮಠದ ಎಸ್.ಕೆ.ಎಸ್. ವಿದ್ಯಾಸಂಸ್ಥೆ

ಶನಿವಾರಸAತೆ: ಸಮೀಪದ ಕೊಡ್ಲಿಪೇಟೆಯ ಕಲ್ಲುಮಠದ ಎಸ್.ಕೆ.ಎಸ್. ವಿದ್ಯಾಸಂಸ್ಥೆಯಲ್ಲಿ ರಾಷ್ಟಿçÃಯ ಏಕತಾ ದಿನದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಬೆಳಿಗ್ಗೆ ವಿದ್ಯಾರ್ಥಿಗಳ ಸೈಕಲ್ ಜಾಥಾ ಹಾಗೂ ಏಕತಾ ಓಟಕ್ಕೆ ಮಠಾಧೀಶ ಹಾಗೂ ಸಂಸ್ಥೆ ಅಧ್ಯಕ್ಷ ಮಹಾಂತ ಸ್ವಾಮೀಜಿ ಚಾಲನೆ ನೀಡಿದರು. ಸರ್ದಾರ್ ವಲ್ಲಭಭಾಯಿ ಅವರ ಭಾವಚಿತ್ರ ಹಿಡಿದು ಜೈಕಾರ, ಘೋಷಣೆ ಕೂಗುತ್ತಾ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಸಾಗಿದ ವಿದ್ಯಾರ್ಥಿಗಳ ಜೊತೆ ಮುಖ್ಯ ಶಿಕ್ಷಕ ಅಭಿಲಾಷ್, ಶಿಕ್ಷಕರು, ಆಡಳಿತ ಮಂಡಳಿ ಪದಾಧಿಕಾರಿಗಳು ಹೆಜ್ಜೆ ಹಾಕಿದರು.

ಮೆರವಣಿಗೆ ನಂತರ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಮತ್ತು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸ್ವಾಮೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮಾತನಾಡಿ, ಭಾರತದ ಏಕತೆಯ ಸೂತ್ರದಾರ, ಪ್ರಥಮ ಉಪಪ್ರಧಾನಿ, ಪ್ರಥಮ ಗೃಹ ಸಚಿವ, ಉಕ್ಕಿನ ಮನುಷ್ಯ ಹಾಗೂ ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಎಂದು ಗುಣಗಾನ ಮಾಡಿ, ಅವರನ್ನು ಸ್ಮರಿಸಿ ಗೌರವ ಸೂಚಿಸಲಾಯಿತು.ಅಂಕುರ್ ಪಬ್ಲಿಕ್ ಶಾಲೆ

ನಾಪೋಕ್ಲು: ಹೋಬಳಿ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಸೋಮವಾರ ಸರದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ಏಕತಾ ಓಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಸಮೀಪದ ಅಂಕುರ್ ಪಬ್ಲಿಕ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಟ್ಟಣದ ಪೆಟ್ರೋಲ್ ಬಂಕಿನಿAದ ಶಾಲೆಯವರೆಗೆ ಏಕತಾ ಓಟ ಆಯೋಜಿಸಲಾಗಿದ್ದು ಇದರಲ್ಲಿ ಶಾಲಾ ವಿದ್ಯಾರ್ಥಿಗಳು ಶಿಕ್ಷಕರು ಪಾಲ್ಗೊಂಡಿದ್ದರು. ಶಾಲಾ ಶಾಲಾ ಕಾರ್ಯದರ್ಶಿ ಕೇಟೋಳಿರ ರತ್ನಾ ಚರ್ಮಣ್ಣ ಕಾರ್ಯಕ್ರಮವನ್ನು ಮುದ್ದಾಟಿಸಿ ಮಾತನಾಡಿ, ಸರ್ಕಾರದ ವತಿಯಿಂದ ಏಕತಾ ಓಟ ನಡೆಸಲು ಆದೇಶ ಬಂದಿದ್ದು, ಅದರಂತೆ ಏಕತಾ ಓಟವನ್ನು ಹಮ್ಮಿಕೊಳ್ಳಲಾಗಿದೆ ಎಂದ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಈ ಸಂದರ್ಭ ಶಿಕ್ಷಕರಾದ ಧರಣಿ, ಮಹೇಶ್, ಗ್ರೀನಾ, ವಿನೋದ್, ಪೊಲೀಸ್ ಸಿಬ್ಬಂದಿ ಇನ್ನಿತರರು ಪಾಲ್ಗೊಂಡಿದ್ದರು.

ಇಲ್ಲಿನ ಶ್ರೀ ರಾಮಟ್ರಸ್ಟ್, ಸೇಕ್ರೆಡ್ ಹಾರ್ಟ್ ಶಾಲೆ, ಕರ್ನಾಟಕ ಪಬ್ಲಿಕ್ ಶಾಲೆ, ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ಸೇರಿದಂತೆ ವಿವಿಧ ಶಾಲೆಗಳಲ್ಲಿ ಕಾರ್ಯಕ್ರಮ ನಡೆಸಲಾಯಿತು.ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆ

ಶನಿವಾರಸAತೆ: ಶನಿವಾರಸಂತೆ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಭಾರತದ ಮೊದಲ ಉಪಪ್ರಧಾನಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ದಿನದಂದು ರಾಷ್ಟಿçÃಯ ಏಕತಾ ದಿವಸ ಆಚರಿಸಲಾಯಿತು. ಪ್ರಾಂಶುಪಾಲೆ ಸುಜಲಾದೇವಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಶಿಕ್ಷಕರು ಇದ್ದರು.