ಮಡಿಕೇರಿ, ನ. ೩: ಜಿಲ್ಲೆಯಲ್ಲಿ ಈ ವರ್ಷ ಸುರಿದ ಸತತ ಮಳೆ ಯಿಂದಾಗಿ ಅಪಾರ ಬೆಳೆಹಾನಿ ಯಾಗಿದ್ದು, ಈ ಕುರಿತು ಕೊಡಗು ಪ್ಲಾö್ಯಂಟರ್ಸ್ ಅಸೋಸಿಯೇಶನ್ ಮತ್ತು ಇತರ ಸಂಘ ಸಂಸ್ಥೆಗಳು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಹಾನಿಯಾಗಿರುವ ಬೆಳೆಗಳ ಸಮೀಕ್ಷೆ ನಡೆಸಿ ಪರಿಹಾರ ಘೋಷಿಸಲು ಸಲ್ಲಿಸಿದ ಮನವಿಗೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ತ್ವರಿತವಾಗಿ ಸ್ಪಂದಿಸಿರುವುದನ್ನು ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಸ್ವಾಗತಿಸಿದೆ.
ಸಂಬAಧಪಟ್ಟ ಇಲಾಖೆಗಳಿಂದ ಬೆಳೆ ಸಮೀಕ್ಷೆ ನಡೆಸಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಶೇ. ೩೩ ಕ್ಕಿಂತ ಹೆಚ್ಚು ಬೆಳೆಹಾನಿಯಾಗಿರುವುದನ್ನು ಖಾತರಿಪಡಿಸಿ ಸರಕಾರಕ್ಕೆ ವರದಿ ಸಲ್ಲಿಸಿ ಮತ್ತು ಬೆಳೆ ಪರಿಹಾರ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ. ಬೆಳೆಗಾರರು ಬೆಳೆ ಪರಿಹಾರದ ಅರ್ಜಿಯನ್ನು ಸಂಬAಧಪಟ್ಟ ದಾಖಲೆಗಳೊಂದಿಗೆ ಆದಷ್ಟು ಬೇಗನೆ ಸಲ್ಲಿಸಲು ಕೋರಲಾಗಿದೆ.
ಅಲ್ಲದೆ ಜಿಲ್ಲೆಯಲ್ಲಿ ಬಹು ವರ್ಷಗಳಿಂದ ಪರಿಹಾರ ಕಾಣದೆ ನೆನೆಗುದಿಗೆ ಬಿದ್ದಿರುವ ಬಾಣೆ ಜಮೀನುಗಳಿಗೆ ಕಂದಾಯ ನಿಗದಿಯಾಗದೆ ಇರುವುದು ಮತ್ತು ಈ ಕಾರಣದಿಂದಾಗಿ ಜಿಲ್ಲೆಯಲ್ಲಿನ ಬಹುತೇಕ ರೈತರು ಸರಕಾರದ ಹಲವಾರು ಸವಲತ್ತುಗಳಿಂದ ವಂಚಿತರಾಗಿರುವುದನ್ನು ಗಮನ ಸೆಳೆದ ನಂತರ ಜಿಲ್ಲಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ಮತ್ತು ಈ ಸಮಿತಿಯ ತೀರ್ಮಾನದಂತೆ ಜಿಲ್ಲೆಯಲ್ಲಿ ಪ್ರಯೋಗಿಕವಾಗಿ ೩ ಗ್ರಾಮಗಳನ್ನು ಆಯ್ಕೆ ಮಾಡಿ ಕಂದಾಯ ನಿಗದಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿರುವುದರಿಂದ ರೈತರಿಗೆ ಸಹಕಾರಿಯಾಗಿದೆ ಎಂದು ಅಸೋಸಿಯೇಷನ್ ತಿಳಿಸಿದೆ.