ವೀರಾಜಪೇಟೆ, ನ. ೩: ಜೀವನದಲ್ಲಿ ಜಿಗುಪ್ಸೆ ಹೊಂದಿ ವ್ಯಕ್ತಿಯೋರ್ವ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್ಜಿ ಪಂಚಾಯಿತಿ ಕಂಡಿಮಕ್ಕಿ ಗ್ರಾಮದಲ್ಲಿ ನಡೆದಿದೆ. ಕಂಡಿಮಕ್ಕಿ ಗ್ರಾಮದ ನಿವಾಸಿ ಪಿ.ಕೆ. ಜಗದೀಶ (೪೨) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.

ಮೃತ ಹೊಂದಿರುವ ಜಗದೀಶ್ ವೀರಾಜಪೇಟೆ ನಗರದ ಖಾಸಗಿ ಬಸ್ಸು ನಿಲ್ದಾಣದ ಸಮೀಪದ ಹಂದಿ ಮಾಂಸದ ಅಂಗಡಿಯಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದು, ಎರಡು ದಿನಗಳಿಂದ ಕೆಲಸಕ್ಕೆ ಗೈರುಹಾಜರಾಗಿದ್ದರು. ದೇವಾಲಯಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ತೆರಳಿದ ಜಗದೀಶ್ ಬೆಳಿಗ್ಗೆ ೧೦:೩೦ ರ ಸಮಯದಲ್ಲಿ ದೇವಾಲಯಕ್ಕೆ ವೀರಾಜಪೇಟೆ, ನ. ೩: ಜೀವನದಲ್ಲಿ ಜಿಗುಪ್ಸೆ ಹೊಂದಿ ವ್ಯಕ್ತಿಯೋರ್ವ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್ಜಿ ಪಂಚಾಯಿತಿ ಕಂಡಿಮಕ್ಕಿ ಗ್ರಾಮದಲ್ಲಿ ನಡೆದಿದೆ. ಕಂಡಿಮಕ್ಕಿ ಗ್ರಾಮದ ನಿವಾಸಿ ಪಿ.ಕೆ. ಜಗದೀಶ (೪೨) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.

ಮೃತ ಹೊಂದಿರುವ ಜಗದೀಶ್ ವೀರಾಜಪೇಟೆ ನಗರದ ಖಾಸಗಿ ಬಸ್ಸು ನಿಲ್ದಾಣದ ಸಮೀಪದ ಹಂದಿ ಮಾಂಸದ ಅಂಗಡಿಯಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದು, ಎರಡು ದಿನಗಳಿಂದ ಕೆಲಸಕ್ಕೆ ಗೈರುಹಾಜರಾಗಿದ್ದರು. ದೇವಾಲಯಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ತೆರಳಿದ ಜಗದೀಶ್ ಬೆಳಿಗ್ಗೆ ೧೦:೩೦ ರ ಸಮಯದಲ್ಲಿ ದೇವಾಲಯಕ್ಕೆ ಸಂದರ್ಭದಲ್ಲಿ ಬಾವಿಯಲ್ಲಿ ಮೃತ ಜಗದೀಶನ ಶವ ಪತ್ತೆಯಾಗಿದೆ.

ಮೃತನ ಪತ್ನಿ ತಾರ ಅವರು ನೀಡಿದ ದೂರಿನ ಮೇರೆಗೆ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ವೀರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು ಮೃತ ಶರೀರವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. -ಕಿಶೋರ್ ಶೆಟ್ಟಿ