ಮಡಿಕೇರಿ, ನ. ೩: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ೨೦೨೨-೨೩ನೇ ಸಾಲಿನ ಪಠ್ಯೇತರ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ತಾ. ೪ ರಂದು (ಇಂದು) ೧೦ ಗಂಟೆಗೆ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಲಿದೆ.
ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎಂ.ಪಿ. ಅಪ್ಪಚ್ಚು ರಂಜನ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ ಮತ್ತು ಮಕ್ಕಳ ತಜ್ಞ ಮೇಜರ್ ಡಾ. ಕುಶ್ವಂತ್ ಕೋಳಿಬೈಲು ಪಾಲ್ಗೊಳ್ಳಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ನಿರ್ಮಲ ಕೆ.ಡಿ. ಅವರು ವಹಿಸಿಕೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.