ಮಡಿಕೇರಿ, ನ. ೩ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ, ಉದ್ಧವ್ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ ಬೆಂಗಳೂರು ಮತ್ತು ಆರೋಗ್ಯ ರಕ್ಷಾ ಸಮಿತಿ ಸಂಪಾಜೆ, ಬಾಲಂಬಿ, ಪೆರಾಜೆ, ಮದೆನಾಡು ಗ್ರಾಮ ಪಂಚಾಯಿತಿ ಇವರುಗಳ ಸಹಯೋಗದಲ್ಲಿ ತಾ. ೪ ರಂದು (ಇಂದು) ಬೆಳಿಗ್ಗೆ ೯ ಗಂಟೆಯಿAದ ಮಧ್ಯಾಹ್ನ ೨ ಗಂಟೆಯವರೆಗೆ ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.
ಶಿಬಿರದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ತಜ್ಞ ವೈದ್ಯರುಗಳಿಂದ ಆರೋಗ್ಯ ತಪಾಸಣೆ ಮಾಡಲಾಗುತ್ತಿದ್ದು ಶಿಬಿರದಲ್ಲಿ ವೈದ್ಯಕೀಯ ವಿಭಾಗ, ಪ್ರಸೂತಿ ಮತ್ತು ಸ್ತಿçÃರೋಗ ವಿಭಾಗ, ಮಕ್ಕಳ ವಿಭಾಗ, ಕಿವಿ, ಮೂಗು, ಗಂಟಲು ವಿಭಾಗ, ಶಸ್ತç ಚಿಕಿತ್ಸಾ ವಿಭಾಗ, ನೇತ್ರ ಚಿಕಿತ್ಸಾ ವಿಭಾಗ, ಕೀಲು ಮತ್ತು ಮೂಳೆ ವಿಭಾಗ, ಚರ್ಮ ರೋಗ ವಿಭಾಗ, ಶ್ವಾಸಕೋಶ ವಿಭಾಗ, ಮಾನಸಿಕ ರೋಗ ವಿಭಾಗ, ದಂತ ಚಿಕಿತ್ಸಾ ವಿಭಾಗ, ಸಮುದಾಯ ಶಾಸ್ತç ವಿಭಾಗಗಳ ತಜ್ಞ ವೈದ್ಯರುಗಳು ಶಿಬಿರದಲ್ಲಿ ಪಾಲ್ಗೊಳ್ಳಲಿದ್ದು, ಶಿಬಿರದಲ್ಲಿ ಅಭಾ ಕಾರ್ಡ್ (ಆಯುಷ್ಮಾನ್ ಭಾರತ್ ಆರೋಗ್ಯ ಖಾತೆ) ನೋಂದಣಿಯನ್ನು ಸ್ಥಳದಲ್ಲಿಯೇ ಮಾಡಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಬಿರದ ಸದುಪಯೋಗಪಡೆದುಕೊಳ್ಳಲು ಪ್ರಕಟಣೆ ಕೋರಿದೆ.