ಮಡಿಕೇರಿ, ನ. ೪: ಕೊಡಗು ಜಿಲ್ಲೆಗೆ ಕಾಂಗ್ರೆಸ್ ನೀಡಿರುವ ಕೊಡುಗೆಗಳ ಬಗ್ಗೆ ಜಿಲ್ಲಾ ಕಾಂಗ್ರೆಸ್‌ನಿAದ ಕರಪತ್ರವನ್ನು ಪತ್ರಿಕಾಭವನದಲ್ಲಿ ಬಿಡುಗಡೆ ಮಾಡಲಾಯಿತು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಡಗಿನಲ್ಲಿ ಮೆಡಿಕಲ್ ಕಾಲೇಜು, ಕುಶಾಲನಗರ ಇಂಜಿನಿಯರಿAಗ್ ಕಾಲೇಜು, ಕುಶಾಲನಗರ ಕಾವೇರಿ ನದಿಗೆ ಸೇತುವೆ ನಿರ್ಮಾಣವಾಯಿತು. ಮಡಿಕೇರಿ ಪುರಸಭೆ ನಗರಸಭೆಯಾಗಿ ಮಾರ್ಪಾಡಾಯಿತು. ಮಡಿಕೇರಿ - ಮೈಸೂರ್ ಹೆದ್ದಾರಿ ನಿರ್ಮಾಣ ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ನಡೆಯಿತು. ಟರ್ಫ್ ಹಾಕಿ ಮೈದಾನ ಕೂಡ ಕೇಂದ್ರ ಕಾಂಗ್ರೆಸ್ ಸರ್ಕಾರದ ಕೊಡುಗೆಯಾಗಿದೆ.

ಕುಶಾಲನಗರ, ಪೊನ್ನಂಪೇಟೆ ತಾಲೂಕುಗಳು, ಕಾಂಗ್ರೆಸ್ - ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಘೋಷಿಸಲ್ಪಟ್ಟವು. ಭಾಗಮಂಡಲ ಮೇಲ್ಸೇತುವೆ ಕೂಡ ಇದೇ ಅವಧಿಯಲ್ಲಿ ಆರಂಭವಾದದ್ದು. ಜನರಲ್ ತಿಮ್ಮಯ್ಯ ಮ್ಯೂಸಿಯಂ ಕೂಡ ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಕೊಡುಗೆಯಾಗಿದೆ ಎಂಬಿತ್ಯಾದಿ ಮಾಹಿತಿಗಳನ್ನು ಕರ ಪತ್ರದಲ್ಲಿ ಮುದ್ರಿಸಲಾಗಿದೆ.

ಈ ಸಂದರ್ಭ ಕೆಪಿಸಿಸಿ ವಕ್ತಾರ ಲಕ್ಷö್ಮಣ್, ಮಾಜಿ ಸಚಿವ ಜೀವಿಜಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಅಧ್ಯಕ್ಷ ಮಂಜುನಾಥ್ ಕುಮಾರ್, ಜಿ.ಪಂ. ಮಾಜಿ ಸದಸ್ಯ ಪ್ರಥ್ಯು, ಡಿಸಿಸಿ ಸದಸ್ಯ ನಾಗಣ್ಣ ಉಪಸ್ಥಿತರಿದ್ದರು.