ಮಡಿಕೇರಿ, ನ. ೩: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷಕೂಟ ಕಾರ್ಯಕ್ರಮವು ತಾ. ೬ ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷೆ ಡಾ. ಪಾರ್ವತಿ ಅಪ್ಪಯ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ ೧೦ ಗಂಟೆಗೆ ಎಫ್.ಎಂ.ಕೆ.ಎA.ಸಿ. ಕಾಲೇಜಿನ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕಾಲೇಜಿನ ಹಳೆಯ ವಿದ್ಯಾರ್ಥಿ ಹಾಗೂ ಕರ್ನಾಟಕ ಜೀವವೈವಿಧ್ಯ ಮಂಡಳಿಯ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಕಿಶೋರ್ ಕುಮಾರ್, ಹಳೆ ವಿದ್ಯಾರ್ಥಿ ಹಾಗೂ ಆರ್ಥೋಫೆಡಿಕ್ ಸರ್ಜನ್ ಡಾ. ರವಿ ಅಪ್ಪಾಜಿ ಪಾಲ್ಗೊಳ್ಳಲಿದ್ದಾರೆ.
ಎಂ.ಬಿ.ಎ. ಮತ್ತು ಟೂರಿಸಂನಲ್ಲಿ ಮೊದಲ ರ‍್ಯಾಂಕ್ ಪಡೆದ ಲಿಪಿಶ್ರೀ ಹಾಗೂ ಅಂರ‍್ರಾಷ್ಟಿçÃಯ ರಸಾಯನಶಾಸ್ತç ವಿಜ್ಞಾನಿಗಳ ಪಟ್ಟಿಯಲ್ಲಿ ಹೆಸರು ಪಡೆದ ಡಾ. ಮಂಜುನಾಥ್ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು.
ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೊಡಗಿನ ಪರಿಸರದ ಮೇಲೆ ಪ್ರವಾಸೋದ್ಯಮದ ಪರಿಣಾಮಗಳು ಎಂಬ ವಿಷಯದ ಕುರಿತು ಕನ್ನಡ, ಹಿಂದಿ, ಇಂಗ್ಲೀಷ್‌ನಲ್ಲಿ ನಡೆಸಲಾದ ಭಾಷಣ ಸ್ಪರ್ಧೆಯ ವಿಜೇತರಿಗೆ ಹಾಗೂ ಕ್ವಿಜ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವುದು.
ಸಂತೋಷ ಕೂಟದ ಪ್ರಯುಕ್ತ ಸಂಘದ ಸದಸ್ಯರಿಗೆ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಅವರು ತಿಳಿಸಿದರು.
ಕಾಲೇಜು ಆವರಣದಲ್ಲಿ ಹುತಾತ್ಮರ ಚೌಕ ನಿರ್ಮಿಸಲು ಈಗಾಗಲೇ ನಿರ್ಧರಿಸಲಾಗಿದ್ದು, ಇದಕ್ಕೆ ಹಳೇ ವಿದ್ಯಾರ್ಥಿಗಳ ಸಂಘದಿAದ ಸಹಕಾರ ನೀಡಲಾಗಿದೆ. ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಸಭೆ ನಡೆಸಲು ಹಳೆ ವಿದ್ಯಾರ್ಥಿಗಳ ಸಂಘದಿAದ ಕೊಠಡಿಯೊಂದನ್ನು ನಿರ್ಮಾಣ ಮಾಡುವ ಯೋಜನೆಯನ್ನು ಕೈಗೊಳ್ಳಲಾಗಿದೆ. ಮುಂದಿನ ವರ್ಷ ಈ ಯೋಜನೆಯನ್ನು ಪೂರ್ಣಗೊಳಿಸಲಾಗುವುದು.
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಲಾಗಿದ್ದು, ಕಾಲೇಜಿನ ಹಳೆ ವಿದ್ಯಾರ್ಥಿಗಳು ಸಂಘದ ಸದಸ್ಯತ್ವ ಪಡೆದುಕೊಳ್ಳುವ ಮೂಲಕ ಕಾಲೇಜಿನ ಅಭಿವೃದ್ಧಿಗೆ ಸಹಕರಿಸಬೇಕೆಂದು ಅವರು ಮನವಿ ಮಾಡಿದರು.
ಸದಸ್ಯತ್ವ ಪಡೆದುಕೊಳ್ಳಲು ಇಚ್ಛಿಸುವವರು ತಾ. ೬ ರಂದು ಕಾರ್ಯಕ್ರಮದಲ್ಲಿ ಸದಸ್ಯತ್ವ ಪಡೆದುಕೊಳ್ಳಬಹುದು ಅಥವಾ ೯೪೮೧೭೬೨೯೭೯ ಸಂಖ್ಯೆಗೆ ಕರೆ ಮಾಡಿ ದೂರವಾಣಿ ಮೂಲಕ ಪಡೆದು ಕೊಳ್ಳಬಹುದು. ಹೆಚ್ಚಿನ ಮಾಹಿತಿ ಯನ್ನು ಕಾಲೇಜಿನ ಕಚೇರಿಯಿಂದ ಪಡೆದುಕೊಳ್ಳಬಹುದು ಎಂದು ಪಾರ್ವತಿ ಅಪ್ಪಯ್ಯ ವಿವರಿಸಿದರು.
ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಎನ್.ಡಿ. ಚರ್ಮಣ, ಕಾರ್ಯದರ್ಶಿ ಬೊಳ್ಳಜಿರ ಬಿ. ಅಯ್ಯಪ್ಪ, ನಿರ್ದೇಶಕರಾದ ಬಿ.ಎನ್. ವಿಠಲ್ ತಿಮ್ಮಯ್ಯ, ನಂದಿನೆರವAಡ ಅಪ್ಪಯ್ಯ ಹಾಗೂ ರಾಣಿ ಮಾಚಯ್ಯ ಉಪಸ್ಥಿತರಿದ್ದರು.