ಸೋಮವಾರಪೇಟೆ,ನ.೩: ಲಯನ್ಸ್ ಸೇವಾ ಸಂಸ್ಥೆ, ತಾಲೂಕು ಒಕ್ಕಲಿಗರ ಸಂಘ ಹಾಗೂ ಸುಳ್ಯದ ಕೆ.ವಿ.ಜಿ.ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ತಾ. ೬ರಂದು ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ-ಚಿಕಿತ್ಸೆ, ಮಾಹಿತಿ ಕಾರ್ಯಾಗಾರ ಹಾಗೂ ಉಚಿತ ಔಷಧಿ ವಿತರಣೆ ನಡೆಯಲಿದೆ ಎಂದು ಲಯನ್ಸ್ ಅಧ್ಯಕ್ಷ ಸಿ.ಕೆ. ರೋಹಿತ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೯ರಿಂದ ಸಂಜೆ ೩ ಘÀಂಟೆಯವರೆಗೆ ಸೋಮವಾರಪೇಟೆಯ ವಿಶ್ವಮಾನವ ಕುವೆಂಪು ವಿದ್ಯಾ ಸಂಸ್ಥೆಯ ಆವರಣದಲ್ಲಿ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ಶಿಬಿರದಲ್ಲಿ ಜನರಲ್ ಮೆಡಿಸಿನ್, ಶಸ್ತç ಚಿಕಿತ್ಸಾ ವಿಭಾಗ, ಮಕ್ಕಳ ತಜ್ಞರು, ಕಿವಿ, ಮೂಗು, ಗಂಟಲು, ನೇತ್ರ, ಚರ್ಮ, ಲೈಂಗಿಕ ರೋಗ, ಸ್ತಿçà ರೋಗ, ಎಲುಬು ಮತ್ತು ಕೀಲು ವಿಭಾಗ, ಶ್ವಾಸಕೋಶ ವಿಭಾಗ, ತುರ್ತು ಚಿಕಿತ್ಸೆಗೆ ಸಂಬAಧಿಸಿದAತೆ ತಪಾಸಣೆ ನಡೆಸಲಾಗುವುದು. ಇ.ಸಿ.ಜಿ ಮತ್ತು ರಕ್ತ ಪರೀಕ್ಷೆ ಮಾಡಲಾಗುವುದು. ಲಭ್ಯವಿರುವ ಔಷಧಿಗಳನ್ನು ಶಿಬಿರದಲ್ಲಿ ಉಚಿತವಾಗಿ ವಿತರಿಸಲಾಗುವುದು ಎಂದು ತಿಳಿಸಿದರು.

ಸೋಮವಾರಪೇಟೆ ಖಾಸಗಿ ಬಸ್ ನಿಲ್ದಾಣದಿಂದ ಶಿಬಿರ ನಡೆಯುವ ವಿಶ್ವಮಾನವ ಕುವೆಂಪು ವಿದ್ಯಾ ಸಂಸ್ಥೆಯವರೆಗೆ ರೋಗಿಗಳು ಹಾಗೂ ಸಂಬAಧಿಕರಿಗೆ ಉಚಿತ ವಾಹನ ಸೌಲಭ್ಯ ಕಲ್ಪಿಸಲಾಗಿದೆ. ಶಿಬಿರಾರ್ಥಿಗಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ರೋಹಿತ್ ಹೇಳಿದರು.

ಶಿಬಿರದ ಬಗ್ಗೆ ಹೆಚ್ಚಿನ ವಿವರಗಳಿಗೆ ೯೪೮೩೧೧೦೩೯೧ ಅಥವಾ ೯೪೮೧೧೧೨೩೬೬ ಈ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದ ಅವರು, ಸಭಾ ಕಾರ್ಯಕ್ರಮ ಅಂದು ಬೆಳಿಗ್ಗೆ ೯.೩೦ ಕ್ಕೆ ನಡೆಯಲಿದ್ದು, ಶಾಸಕ ಅಪ್ಪಚ್ಚು ರಂಜನ್ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎ.ಆರ್.ಮುತ್ತಣ್ಣ, ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ನಿರ್ದೇಶಕರಾದ ಡಾ.ಕೆ.ವಿ. ಚಿದಾನಂದ, ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ, ಸೋಮವಾರಪೇಟೆ ಸರಕಾರಿ ಆಸ್ಪತ್ರೆಯ ಸರ್ಜನ್ ಡಾ.ಹೆಚ್.ಎಸ್.ಶಿವಪ್ರಸಾದ್ ಪಾಲ್ಗೊಳ್ಳಲಿದ್ದಾರೆ ಎಂದರು.

ಗೋಷ್ಠಿಯಲ್ಲಿ ಕಾರ್ಯದರ್ಶಿ ಕೆ.ಎನ್.ತೇಜಸ್ವಿ, ಖಜಾಂಚಿ ಜಿ.ಟಿ.ಯೋಗೇಂದ್ರ, ವಲಯ ಸಲಹೆಗಾರರಾದ ಮಂಜುನಾಥ್ ಚೌಟ, ವಿಷನ್ ಕೇರ್ ವಿಭಾಗದ ಜಿಲ್ಲಾ ಸಂಚಾಲಕ ಎಸ್.ಎನ್.ಯೋಗೇಶ್ ಇದ್ದರು.