ಮಡಿಕೇರಿ, ನ. ೩: ಕೊಡಗು ಪತ್ರಿಕಾ ಭವನದ ೨೧ನೇ ವರ್ಷದ ವಾರ್ಷಿಕೋತ್ಸವ ತಾ. ೫ರಂದು ಬೆಳಿಗ್ಗೆ ೧೦.೩೦ಗಂಟೆಗೆ ಪತ್ರಿಕಾಭವನದಲ್ಲಿ ನಡೆಯಲಿದೆ. ಭವನದ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ.ಕೇಶವ ಕಾಮತ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಬೆಂಗಳೂರಿನ ಹೊಸತು ಪತ್ರಿಕೆಯ ಸಂಪಾದಕ ಡಾ.ಸಿದ್ಧನಗೌಡ ಪಾಟೀಲ್ ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಸಂಯುಕ್ತ ಕರ್ನಾಟಕ ಸಹಾಯಕ ಸಂಪಾದಕ ಕೆ.ವಿ. ಪರಮೇಶ್, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರಳೀಧರ್ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಜಿಲ್ಲೆಯ ಪತ್ರಕರ್ತರಿಗೆ ಏರ್ಪಡಿಸಲಾಗಿದ್ದ ಕ್ರೀಡಾ ಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಗುವದೆಂದು ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್ ತಿಳಿಸಿದ್ದಾರೆ.