ಮಡಿಕೇರಿ ನ. ೩: ತೊರೆನೂರು ಗ್ರಾಮಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಸಾರಿಗೆ ಬಸ್ ಗಳನ್ನು ನಿಲುಗಡೆಗೊಳಿಸಬೇಕೆಂದು ಒತ್ತಾಯಿಸಿ ನ.೫ ರಂದು ಬೆಳಗ್ಗೆ ೮ ಗಂಟೆಗೆ ಕೊಡಗು ರಕ್ಷಣಾ ವೇದಿಕೆ ವತಿಯಿಂದ ರಸ್ತೆ ತಡೆ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ವೇದಿಕೆಯ ಅಧ್ಯಕ್ಷ ಸಾಗರ್ ತೊರೆನೂರು ತಿಳಿಸಿದ್ದಾರೆ.

ಅರಸೀಕೆರೆ ಮತ್ತು ಚನ್ನರಾಯಪಟ್ಟಣ ಘಟಕದ ಸರಕಾರಿ ಸಾರಿಗೆ ಬಸ್ಸುಗಳು ಖಾಲಿ ಇದ್ದರೂ ತೊರೆನೂರು ಗ್ರಾಮ ವ್ಯಾಪ್ತಿಯಲ್ಲಿ ನಿಲುಗಡೆಗೊಳಿಸದೆ ಸಂಚರಿಸುತ್ತಿವೆ. ಇದರಿಂದ ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ಅನಾನುಕೂಲವಾಗುತ್ತಿದೆ. ಈ ಬಗ್ಗೆ ಘಟಕದ ವ್ಯವಸ್ಥಾಪಕರು ಹಾಗೂ ಸಂಬAಧಿಸಿದ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಸ್ಪಂದನ ದೊರೆತಿಲ್ಲವೆಂದು ಅವರು ಆರೋಪಿಸಿದ್ದಾರೆ.

ಗ್ರಾಮಸ್ಥರ ಸಹಕಾರದೊಂದಿಗೆ ಶನಿವಾರ ಶಾಂತಿಯುತ ಹೋರಾಟ ನಡೆಸಿ ರಾಜ್ಯ ಸಾರಿಗೆ ಸಂಸ್ಥೆಯ ಗಮನ ಸೆಳೆಯಲಾಗುವುದು ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.