ಕೂಡಿಗೆ, ನ. ೩: ಪ್ರಸ್ತುತ ಭಾರತದ ಆರ್ಥಿಕ ವ್ಯವಸ್ಥೆಯು ಏರುಗತಿ ಯಲ್ಲಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಬಲಿಷ್ಠವಾಗಲಿದೆ ಎಂದು ವಿವಿಧ ದೇಶಗಳಲ್ಲಿ ಭಾರತೀಯ ರಾಯಭಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಗೊಂಡಿರುವ ರಾಯಭಾರಿ ಎನ್. ಪಾರ್ಥಸಾರಥಿ ವಿಶ್ವಾಸ ವ್ಯಕ್ತಪಡಿಸಿದರು.
ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕರ್ನಾಟಕ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ‘ಭಾರತ ದೇಶದ ಆರ್ಥಿಕ ಬೆಳವಣಿಗೆಯ ಮುನ್ನೋಟ ಹಾಗೂ ಸವಾಲುಗಳು’ ಕುರಿತಂತೆ `ಅಂರ್ರಾಷ್ಟಿçÃಯ ಮಟ್ಟದಲ್ಲಿ ಭಾರತದ ಹೆಗ್ಗುರುತುಗಳು' ಕುರಿತು ವಿದ್ಯಾರ್ಥಿ ಗಳೊಂದಿಗೆ ಏರ್ಪಡಿಸಿದ್ದ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶ್ವಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಭಾರತ ದೇಶದ ಸಾಧನೆಗಳ ಕುರಿತು ಮಾಹಿತಿ ನೀಡಿದರು.
ದೇಶದಲ್ಲಿ ಉತ್ತಮ ಸಾಧನೆ ಮಾಡಿರುವ ಮಹಾ ನಾಯಕರು ಗ್ರಾಮೀಣ ಪ್ರದೇಶದ ಸರ್ಕಾರಿ ಕನ್ನಡ ಶಾಲೆಗಳಲ್ಲಿಯೇ ಶಿಕ್ಷಣ ಪಡೆದಿದ್ದಾರೆ. ಹಾಗಾಗಿ ಕನ್ನಡ ಶಾಲೆಗಳೆಂದರೆ ತಾತ್ಸಾರ ಬೇಡ. ಭವ್ಯ ಪರಂಪರೆ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆ ಹೊಂದಿ ರುವ ಕನ್ನಡ ನಾಡಿನಲ್ಲಿ ಹುಟ್ಟಿರುವುದೇ ನಮ್ಮೆಲ್ಲರ ಸೌಭಾಗ್ಯ ಎಂದರು.
ಭಾರತ ದೇಶದಲ್ಲಿ ಅತ್ಯಾಧುನಿಕ ಸೌಲಭ್ಯಗಳು ಹಾಗೂ ಅನೇಕ ಅವಕಾಶಗಳು ಇರುವುದರಿಂದ ವಿದ್ಯಾರ್ಥಿಗಳು ಉತ್ತಮ ಅವಕಾಶ ಗಳನ್ನು ಬಳಸಿಕೊಂಡು ಉತ್ತಮ ಸಾಧಕರಾಗುವ ಗುರಿಯನ್ನು ವಿದ್ಯಾರ್ಥಿ ಗಳು ಈಗಿನಿಂದಲೇ ಹೊಂದಬೇಕು ಎಂದು ಪಾರ್ಥಸಾರಥಿ ಹೇಳಿದರು.
ಹಿಂದೆAದಿಗಿAತಲೂ ಮುಂದಿನ ಹತ್ತಾರು ವರ್ಷಗಳಲ್ಲಿ ಭಾರತ ದೇಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಹತ್ತರ ಹೆಜ್ಜೆ ಇಡÀಲಿದೆ. ಹಾಗಾಗಿ ಇಂದಿನ ಮಕ್ಕಳು ಭವಿಷ್ಯದ ಬಗ್ಗೆ ದೊಡ್ಡ ಕನಸು ಹೊಂದಿ ನಿರ್ದಿಷ್ಟ ಗುರಿ ತಲುಪಲು ಹೆಚ್ಚು ಅಧ್ಯಯನಶೀಲ ರಾಗಬೇಕು ಎಂದು ಕರೆ ನೀಡಿದರು.
ವಿಶ್ವದಲ್ಲಿಯೇ ಭಾರತ ದೇಶ ಹೆಚ್ಚು ಇಂಜಿನಿಯರ್ ಹಾಗೂ ವಿವಿಧ ಪದವೀಧರರನ್ನು ಹೊಂದಿರುವ ಬಹು ದೊಡ್ಡ ಆರ್ಥಿಕ ಶಕ್ತಿಯುಳ್ಳ ರಾಷ್ಟçವಾಗಿದೆ ಎಂದು ಹೇಳಿದರು.
ಅತಿಥಿಯಾಗಿದ್ದ ಬೆಂಗಳೂರಿನ ಸಾಹಿತಿ ಹಾಗೂ ನಾಟಕ ರಚನಾಕಾರ ಎನ್. ನಾಗರಾಜ್ ರಾವ್ ಮಾತನಾಡಿ, ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆಯೊAದಿಗೆ ಹೊಸ ಹೊಸ ವೈಜ್ಞಾನಿಕ ಅನ್ವೇಷಣೆಗಳ ಬಗ್ಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ ಟಿ.ಜಿ. ಪ್ರೇಮಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಾಜಿ ರಾಯಭಾರಿ ಪಾರ್ಥ ಸಾರಥಿ ಅವರೊಂದಿಗೆ ವಿದ್ಯಾರ್ಥಿಗಳು ವಿದೇಶಗಳೊಂದಿಗೆ ಭಾರತಕ್ಕೆ ಸಂಬAಧಿಸಿದAತೆ ವಿಭಿನ್ನವಾದ ಹಾಗೂ ಕುತೂಹಲಕಾರಿ ಯಾದ ತಮ್ಮ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಂಡರು.
ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಮಾಜಿ ಅಧ್ಯಕ್ಷ ಭಾರದ್ವಾಜ್ ಕೆ. ಆನಂದತೀರ್ಥ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್. ಮೂರ್ತಿ, ಕೋಶಾಧಿಕಾರಿ ಕೆ.ವಿ. ಉಮೇಶ್, ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿಯ ಪದಾಧಿಕಾರಿಗಳಾದ ಎಂ.ಎನ್. ವೆಂಕಟನಾಯಕ್, ಎಂ.ಇ. ಮೊಹಿದ್ದೀನ್, ಜಿ. ಶ್ರೀಹರ್ಷ, ಎನ್.ಕೆ. ಮಾಲಾದೇವಿ, ಶಿಕ್ಷಕ ಸಿ.ಡಿ. ಲೋಕೇಶ್, ತೊರೆನೂರು ಸಾಗರ್ ಇತರರು ಇದ್ದರು.