ಮಡಿಕೇರಿ: ಮಡಿಕೇರಿಯಲ್ಲಿ ೬೭ ವರ್ಷಗಳ ಸುದೀರ್ಘ ಇತಿಹಾಸವಿರುವ ಮಹದೇವಪೇಟೆ ಮಹಿಳಾ ಸಹಕಾರ ಸಂಘ ನಗರದ ಹೆಗ್ಗುರುತುಗಳಲ್ಲಿ ಒಂದಾಗಿದ್ದು ಮಹಿಳೆಯರ ಶ್ರೇಯೋಭಿವೃದ್ಧಿಯಲ್ಲಿ ಮಹಿಳಾ ಸಮಾಜದ ಸದಸ್ಯೆಯರ ಶ್ರಮ ಮಹತ್ವದ್ದಾಗಿದೆ ಎಂದು ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಎಚ್.ಟಿ. ಶ್ಲಾಘಿಸಿದರು.
ನಗರದ ಮಹದೇವಪೇಟೆ ಮಹಿಳಾ ಸಂಘದ ವತಿಯಿಂದ ಆಯೋಜಿತ ೬೭ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ನಾಡು ನುಡಿಗಾಗಿ ಕಾರ್ಯನಿರ್ವಹಿಸುತ್ತಿರುವ ಸಾಧಕರಿಗೆ ನೀಡಲಾಗುವ ವಾರ್ಷಿಕ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಅನಿಲ್ ಎಚ್.ಟಿ., ೧೯೫೫ ರಲ್ಲಿಯೇ ಅಂದಿನ ಗೃಹ ಸಚಿವ ಮಲ್ಲಪ್ಪ ಅವರ ಪರಿಕಲ್ಪನೆಯಲ್ಲಿ ಸರ್ಕಾರದಿಂದ ರೂ. ೧೦ ಸಾವಿರ, ಪಾರ್ವತಮ್ಮ ಬಸಪ್ಪ ಅವರಿಂದ ರೂ. ೧೦ ಸಾವಿರ ಆರ್ಥಿಕ ನೆರವನ್ನು ಪಡೆದು ಪ್ರಾರಂಭವಾದ ಮಹದೇವಪೇಟೆ ಮಹಿಳಾ ಸಹಕಾರ ಸಂಘವು ಕಳೆದ ೬೭ ವರ್ಷಗಳಲ್ಲಿ ಗಮನಾರ್ಹ ಸಾಧನೆ ಮಾಡಿದೆ ಎಂದರು.
ಪಾರ್ವತಮ್ಮ ಬಸಪ್ಪ, ವಸುಂದರ ಪ್ರಸನ್ನ, ಆರತಿ ಶೆಣೈ, ಕಮಲ ಸುಬ್ಬಯ್ಯ, ಎನ್. ಸವಿತಾ ಭಟ್ ಸಾರಥ್ಯದಲ್ಲಿ ಮಹಿಳಾ ಸಹಕಾರ ಸಂಘವು ವರ್ಷದಿಂದ ವರ್ಷಕ್ಕೆ ಮಹಿಳೆಯರಿಗಾಗಿ ಅನೇಕ ಕಾಯಕ್ರಮಗಳನ್ನು ರೂಪಿಸುತ್ತಾ ಸಾಕಷ್ಟು ಪ್ರಗತಿ ಸಾಧಿಸಿದೆ ಎಂದು ಹೇಳಿದ ಅವರು, ಮುಂದಿನ ದಿನಗಳಲ್ಲಿ ಮಹಿಳೆಯರಿಗೆ ಸಹಾಯವಾಣಿಯ ಮಾಹಿತಿ ಫಲಕ ಅಳವಡಿಕೆ, ಉದ್ಯೋಗ ಮೇಳದಂತಹ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುವಂತಾಗಲಿ ಎಂದೂ ಅನಿಲ್ ಸಲಹೆ ನೀಡಿದರು.
ಮಹದೇವಪೇಟೆ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಎನ್. ಸವಿತಾ ಭಟ್ ಮಾತನಾಡಿ, ಕನ್ನಡದ ಮಹತ್ವವನ್ನು ತಿಳಿಸುವ ನಿಟ್ಟಿನಲ್ಲಿ ಮಹಿಳಾ ಸಹಕಾರ ಸಂಘದಿAದ ಸಾಹಿತ್ಯ ಪರ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಸಂಘದ ಸಾಧನೆಗಾಗಿ ೨೦೧೯ ರ ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನದಲ್ಲಿ ಪ್ರಶಸ್ತಿ ಮತ್ತು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಶತಮಾನೋತ್ಸವ ಸಂದರ್ಭ ಉತ್ತಮ ಸಹಕಾರ ಸಂಘ ಪ್ರಶಸ್ತಿಯು ನಮ್ಮ ಸಂಘಕ್ಕೆ ದೊರಕಿದೆ. ಪ್ರತೀ ತಿಂಗಳೂ ಮಹಿಳೆಯರ ಸಮ್ಮಿಲನ ಕಾರ್ಯಕ್ರಮವೂ ಮಹಿಳಾ ಸಂಘದ ಸದಸ್ಯೆಯರ ಒಗ್ಗಟ್ಟಿನ ಪ್ರತೀಕವಾಗಿ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ಮತ್ತಷ್ಟು ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸುವ ನಿಟ್ಟಿನಲ್ಲಿ ಬದ್ದರಾಗಿದ್ದೇವೆ ಎಂದರು.
ಕನ್ನಡ ಸಾಹಿತ್ಯ, ಸಾಹಿತಿಗಳ ಕುರಿತಂತೆ ರಸಪ್ರಶ್ನೆ ಸ್ಪರ್ಧೆಯನ್ನು ಸವಿತಾ ಭಟ್ ಮತ್ತು ಉಪಾಧ್ಯಕ್ಷೆ ಶೈಲಾ ಮಂಜುನಾಥ್ ಆಯೋಜಿಸಿದ್ದರು.
ಕಾರ್ಯಕ್ರಮವನ್ನು ಶ್ಯಾಮಲ ದಿನೇಶ್, ಅರವಿಂದ್ ಅಣ್ಣಪ್ಪ, ರೂಪಾ ಸುಮಂತ್, ಕಮಲ ಸುಬ್ಬಯ್ಯ ನಿರ್ವಹಿಸಿದರು. ಮಹಿಳಾ ಸಮಾಜದ ಸದಸ್ಯೆಯರಿಂದ ಕನ್ನಡ ಹಾಡುಗಳ ಕಾರ್ಯಕ್ರಮ ಆಯೋಜಿಸಲ್ಪಟ್ಟಿತು.
ಮುಳ್ಳೂರು: ಸಮೀಪದ ಕೊಡ್ಲಿಪೇಟೆ ವಿದ್ಯಾಸಂಸ್ಥೆ ವತಿಯಿಂದ ೬೭ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕೊಡ್ಲಿಪೇಟೆ ವಿದ್ಯಾಸಂಸ್ಥೆ ಅಧ್ಯಕ್ಷ ಹೈಕೋರ್ಟ್ನ ಹಿರಿಯ ವಕೀಲ ಚಂದ್ರಮೌಳಿ ಕನ್ನಡ ಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬ ಕನ್ನಡಿಗ ಕನ್ನಡದಲ್ಲಿ ಮಾತನಾಡಿದರೆ ಕನ್ನಡ ಭಾಷೆ ಅಭಿವೃದ್ಧಿಯಾಗುತ್ತದೆ, ಪ್ರಪಂಚದ ಹಲವಾರು ರಾಷ್ಟçಗಳಲ್ಲಿ ಕನ್ನಡಿಗರು ನೆಲಸಿದ್ದು ಅಲ್ಲಿ ಅವರು ಕನ್ನಡದ ಸಂಘವನ್ನು ಕಟ್ಟಿಕೊಂಡು ಕನ್ನಡ ಸಾಹಿತ್ಯ, ಸಂಸ್ಕೃತಿಯ ಕಾರ್ಯಕ್ರಮಗಳನ್ನು ನಡೆಸುತ್ತಾರೆ ಹೀಗಿರುವಾಗ ನಾವು ಇಲ್ಲಿ ಕನ್ನಡ ಭಾಷೆಯನ್ನು ಮಾತನಾಡಿ ಇತರ ಭಾಷಿಗರಿಗೆ ಕನ್ನಡ ಕಲಿಸಿಕೊಡುವ ಮೂಲಕ ಕನ್ನಡ ಸಾಹಿತ್ಯ ಸಂಸ್ಕೃತಿಯನ್ನು ಬೆಳೆಸಬೇಕೆಂದರು.
ವೇದಿಕೆಯಲ್ಲಿ ವಿದ್ಯಾಸಂಸ್ಥೆ ಉಪಾಧ್ಯಕ್ಷ ಶಂಭು ಲಿಂಗಪ್ಪ, ನಿರ್ದೇಶಕ ಯತೀಶ್, ಪ್ರಮುಖರಾದ ಪುನಿತ್, ಮಾದಪ್ಪ, ಚಂದನಾ, ಸೀಮಂತಿನಿ, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಎಂ.ಆರ್. ನಿರಂಜನ್, ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಜಗದೀಶ್ ಬಾಬು, ಪ್ರೌಢಶಾಲಾ ಮುಖ್ಯ ಶಿಕ್ಷಕ ಅಬ್ದುಲ್ ರಬ್ ಮುಂತಾದವರಿದ್ದರು. ರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಗೆ ಕನ್ನಡ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.ಚೆಯ್ಯಂಡಾಣೆ: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ೬೭ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣಕ್ಕೆ ಹಾಗೂ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷೆ ರತ್ನಾ ವಹಿಸಿ ಮಾತನಾಡಿದರು. ಶಿಕ್ಷಕಿಯರಾದ ಧಮಯಂತಿ ಹಾಗೂ ಜಯಪ್ರಧಾ ದಿನದ ಮಹತ್ವದ ಕುರಿತು ಮಾತನಾಡಿದರು. ವಿದ್ಯಾರ್ಥಿಗಳಿಂದ ಭಾಷಣ ಹಾಗೂ ನಾಡಗೀತೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ವಿದ್ಯಾರ್ಥಿಗಳು, ಶಿಕ್ಷಕಿಯರು, ಎಸ್‌ಡಿಎಂಸಿ ಸದಸ್ಯರು ಹಾಜರಿದ್ದರು.ಕಡಂಗ: ಕಡಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶಾಂತಿ ಕುಮಾರಿ ಪಿ.ಎಂ. ಅವರು ಮಾತನಾಡಿ, ಕನ್ನಡ ದಿನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಕನ್ನಡ ಭಾಷೆ, ನೆಲ, ಜಲ ಮತ್ತು ಸಂಸ್ಕೃತಿಯ ಬಗ್ಗೆ ಸಂಕ್ಷಿಪ್ತವಾಗಿ ತಿಳುವಳಿಕೆ ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕನ್ನಡ ಸಾಮೂಹಿಕ ಗಾಯನ ಮತ್ತು ಭಾಷಣವನ್ನು ಮಾಡಿದರು.ವೀರಾಜಪೇಟೆ: ಕನ್ನಡ ರಾಜ್ಯೋತ್ಸವದ ಅಂಗವಾಗಿ ವೀರಾಜಪೇಟೆ ಕರ್ನಾಟಕ ಸಂಘದ ಅಧ್ಯಕ್ಷ ಮಾಳೇಟಿರ ಎಂ. ಬೆಲ್ಲು ಬೋಪಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ವೀರಾಜಪೇಟೆ ಕರ್ನಾಟಕ ಸಂಘ ಮುಂದಿನ ದಿನದಲ್ಲಿ ಕನ್ನಡ ನಾಡು, ನುಡಿ, ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಹೆಚ್ಚು ಕನ್ನಡ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದರು.
ಧ್ವಜಾರೋಹಣ ಸಂದರ್ಭ ಕರ್ನಾಟಕ ಸಂಘದ ಉಪಾಧ್ಯಕ್ಷ ಸಿ.ಈ. ಗಿರೀಶ್ ಪೂಣಚ್ಚ, ಕಾರ್ಯದರ್ಶಿ ಎಂ.ಬಿ. ಅರುಣ್ ಅಪ್ಪಣ್ಣ ಮತ್ತು ಎಂ.ಸಿ. ಅಶೋಕ, ಆಡಳಿತ ಮಂಡಳಿ ನಿರ್ದೇಶಕರಾದ ಸಿ.ಪಿ. ಕಾವೇರಪ್ಪ, ಎಂ. ಕುಸುಮ ಸೋಮಣ್ಣ, ಎ.ಎಂ. ಜೋಯಪ್ಪ, ಪಿ.ಎಸ್. ನಂದ, ಬಿ.ಎಂ. ಸುರೇಶ್, ಎಂ.ಜಿ. ಪೂಣಚ್ಚ, ಬಿ.ಆರ್. ಗಣೇಶ್, ಬಿ. ಗಣೇಶ್ ಬಿದ್ದಪ್ಪ ಹಾಜರಿದ್ದರು.ವೀರಾಜಪೇಟೆ: ೬೭ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೆಗೌಡ ಬಣ) ವೀರಾಜಪೇಟೆ ತಾಲೂಕು ಸಮಿತಿ ವತಿಯಿಂದ ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.
ಈ ಸಂದರ್ಭ ರಕ್ಷಣ ವೇದಿಕೆಯ ತಾಲೂಕು ಸಮಿತಿ ಅಧ್ಯಕ್ಷ ಅನಿಲ್ ಕುಮಾರ್, ಉಪಾಧ್ಯಕ್ಷ ಸಂತೋಷ್, ಹೋಬಳಿ ಅಧ್ಯಕ್ಷ ಜುನೈದ್, ಖಜಾಂಚಿ ತಭ್ರೆಝ್, ಸಮಿತಿಯ ವಿವೇಕ್, ಉಮೇಶ್, ಡ್ಯಾನಿ, ಶ್ರೀಧರ್ ಹಾಜರಿದ್ದರು. ಇದಕ್ಕೂ ಮೊದಲು ಗೋಣಿಕೊಪ್ಪ ರಸ್ತೆ ಆಟೋ ಚಾಲಕರ ಸಂಘದಿAದ ಅಧ್ಯಕ್ಷ ಮೋಹನ್ ದಾಸ್ ಹಾಗೂ ರಕ್ಷಣಾ ವೇದಿಕೆ ಸದಸ್ಯರಿಂದ ಧ್ವಜಾರೋಹಣ ನೆರವೇರಿಸಲಾಯಿತು. ಈ ವೇಳೆ ಆಟೋ ಚಾಲಕರು ಹಾಜರಿದ್ದರು.ಪೊನ್ನಂಪೇಟೆ: ಅತ್ತೂರು ನ್ಯಾಷನಲ್ ಅಕಾಡೆಮಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭ ಶಾಲೆಯ ಮುಖ್ಯಸ್ಥೆ ಶಾಂತಿ ಅಚ್ಚಪ್ಪ ಅವರು ಮಾತನಾಡಿ, ಕನ್ನಡ ಭಾಷೆಯನ್ನು ಹೆಚ್ಚು ಬಳಸಬೇಕು. ಕನ್ನಡವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂಬುದನ್ನು ಅರಿತು ನಡೆಯಬೇಕು ಎಂದು ಹೇಳಿದರು. ಮುಖ್ಯ ಅತಿಥಿ ಟ್ರಸ್ಟಿ ರಕ್ಷಿತ್ ಅಯ್ಯಪ್ಪ, ಸಿನೆಮಾ ನಿರ್ದೇಶಕ ಮತ್ತು ನಿರ್ಮಾಪಕ ನಂಬಿ, ಸಹ ನಿರ್ದೇಶಕ ಎಲ್. ಅಶೋಕ್, ಪ್ರಾಂಶುಪಾಲೆ ಪುಷ್ಪ, ಶಿಕ್ಷಕಿ ಫೆಲ್ಸಿಟಾ ಕ್ಲಾಮಿ, ಬೋಧಕ, ಬೋಧಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಕ್ಕಳಿಂದ ಕನ್ನಡ ನಾಡು, ನುಡಿಯ ಬಗ್ಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು. ಜುಹೈನ ಸ್ವಾಗತಿಸಿ, ಸಂಕೇತ್ ವೇಣುಕುಮಾರ್ ದಿನದ ವಿಶೇಷತೆಯನ್ನು ತಿಳಿಸಿದರು. ರಕ್ಷಾ ವಂದಿಸಿ, ಲಕ್ಷಿö್ಮÃಪ್ರಿಯ ನಿರೂಪಿಸಿದರು.
ನಾಪೋಕ್ಲು: ಇಲ್ಲಿನ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ೬೭ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ದಿನದ ಮಹತ್ವದ ಕುರಿತು ಶಿಕ್ಷಕಿ ಶೋಭಿತ ಅವರು ಮಾತನಾಡಿ, ನವೆಂಬರ್ ೧ ೧೯೫೬ ರಲ್ಲಿ ಅಸ್ತಿತ್ವಕ್ಕೆ ಬಂದ ಕರುನಾಡು ಪ್ರಾಕೃತಿಕ ಸೌಂದರ್ಯದ ನೆಲೆಬೀಡು. ಹೆಮ್ಮೆಯ ನಾಡಿನ ಬಗ್ಗೆ ಅಭಿಮಾನವನ್ನು ಉಳಿಸಿಕೊಳ್ಳಬೇಕಾಗಿದ್ದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.
ಈ ಸಂದರ್ಭ ರಾಜ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ಭಾಷಣ, ನಾಡಗೀತೆ, ನೃತ್ಯ ಸೇರಿದಂತೆ ಹಲವು ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮದವಲ್ಲಿ ನಿವೃತ್ತ ಪ್ರೊ. ಕಲ್ಯಾಟಂಡ ಪೂಣಚ್ಚ, ಉಪಾಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ, ಪ್ರಾಂಶುಪಾಲೆ ಕಲ್ಯಾಟಂಡ ಶಾರದಾ ಅಪ್ಪಣ್ಣ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಮುಳ್ಳೂರು: ಮುಳ್ಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ೬೭ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಬೆಳಿಗ್ಗೆ ನಡೆದ ಕನ್ನಡ ಧ್ವಜರೋಹಣವನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಬಿಂಧು ಸುರೇಶ್ ನೆರವೇರಿಸಿದರು. ಬಳಿಕ ವಿದ್ಯಾರ್ಥಿಗಳು ಶಾಲೆಯಿಂದ ಮುಳ್ಳೂರು ಜಂಕ್ಷನ್ ವರೆಗೆ ಮೆರವಣಿಗೆಯಲ್ಲಿ ತೆರಳಿದರು. ನಂತರ ಜಂಕ್ಷನ್ ಬಳಿಯ ಅರಳಿ ಕಟ್ಟೆಯಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ತದನಂತರ ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳಿಂದ ಕನ್ನಡ ನಾಡು, ನೆಲ, ಜಲ ಕುರಿತಾದ ನೃತ್ಯ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಗ್ರಾಮಸ್ಥರನ್ನು ರಂಜಿಸಿದರು. ಕಾರ್ಯಕ್ರಮದಲ್ಲಿ ನಿಡ್ತ ಗ್ರಾ.ಪಂ. ಸದಸ್ಯ ಹರೀಶ್, ಮಕ್ಕಳ ಸಹಾಯವಾಣಿ ಕೇಂದ್ರದ ಕುಮಾರಿ, ಶಾಲಾ ಮುಖ್ಯ ಶಿಕ್ಷಕ ಸಿ.ಎಸ್. ಸತೀಶ್, ಶಿಕ್ಷಕಿ ನವ್ಯ, ಪೋಷಕರು ಹಾಜರಿದ್ದರು.ಜ್ಯೋತಿ ಯುವಕ ಸಂಘ
ಮಡಿಕೇರಿ: ಜ್ಯೋತಿ ಯುವಕ ಸಂಘದ ವತಿಯಿಂದ ಇಂದಿರಾ ನಗರದಲ್ಲಿ ೬೭ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಧ್ವಜಾರೋಹಣವನ್ನು ಜ್ಯೋತಿ ಯುವಕ ಸಂಘದ ಮಾಜಿ ಅಧ್ಯಕ್ಷ ಸೋಮಶೇಖರ್ ಬಿ.ಡಿ. ಅವರು ನೆರವೇರಿಸಿದರು. ನಂತರ ಮಾತನಾಡಿದ ಅವರು, ಕನ್ನಡದ ಅಭಿಮಾನ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು. ವರ್ಷಪೂರ್ತಿ ಕನ್ನಡ ರಾಜ್ಯೋತ್ಸವ ಆಚರಿಸುವಂತಾಗಬೇಕು ಎಂದರು. ಯುವಕ ಸಂಘದ ಅಧ್ಯಕ್ಷ ಜಯಕುಮಾರ್ ಅವರು ಎಲ್ಲರಿಗೂ ಕನ್ನಡ ರಾಜ್ಯೋತ್ಸವ ಶುಭಾಶಯ ತಿಳಿಸಿದರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಮನೋಜ್, ಖಜಾಂಚಿ ದೀಪಕ್ ಹಾಗೂ ಸಂಘದ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.