ಜನರ ಮೇಲೆ ಎರಗಿದ ಚಿರತೆ
ಮೈಸೂರು, ನ. ೪: ಹಾಡಹಗಲೇ ಮೈಸೂರು ಜಿಲ್ಲೆ ಕೆ.ಆರ್. ನಗರದ ಪಟ್ಟಣದಲ್ಲಿ ಚಿರತೆಯೊಂದು ಪ್ರತ್ಯಕ್ಷಗೊಂಡು ಜನರ ಮೇಲೆ ಎರಗಿರುವ ವೀಡಿಯೋ ವೈರಲ್ ಆಗಿದೆ. ಕೆ.ಆರ್. ನಗರ ಪಟ್ಟಣದ ಹೊರ ವಲಯ ದಲ್ಲಿರುವ ಕನಕ ನಗರದಲ್ಲಿ ಶುಕ್ರವಾರ ಬೆಳಗ್ಗೆ ಚಿರತೆ ಕಾಣಿಸಿಕೊಂಡಿದ್ದು, ಕೆಲವರ ಮೇಲೆ ದಾಳಿ ನಡೆಸಿದೆ. ಮುಳ್ಳೂರು ರಸ್ತೆ ಬಳಿಯ ರಾಜ ಪ್ರಕಾಶ್ ಶಾಲೆಯ ಹತ್ತಿರ ಬೀದಿನಾಯಿಯನ್ನು ಬೆನ್ನಟ್ಟಿ ಕೊಂಡು ಹೋದ ಚಿರತೆ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಸವಾರನ ಮೇಲೆ ಎರಗಿದೆ. ಆನಂತರ ಮತ್ತಿಬ್ಬರ ಮೇಲೂ ದಾಳಿ ನಡೆಸಿದೆ. ಪಟ್ಟಣದ ಕನಕನಗರ ನಿವಾಸಿಗಳಾದ ವೆಂಕಟೇಶ್, ಕರಿಗೌಡ, ಪರಶಿವ ಮತ್ತು ಚಿರತೆ ಹಿಡಿಯಲು ಬಂದಿದ್ದ ಅರಣ್ಯಾಧಿಕಾರಿ ಮಂಜು ಗಾಯಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಿದರು. ಬಳಿಕ ಅದನ್ನು ಸೆರೆಹಿಡಿಯುವಲ್ಲಿ ಯಶಸ್ವಿ ಯಾಗಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಸಾರ್ವಜನಿಕರಿಗೆ ಕಾಣಿಸಿಕೊಳ್ಳುತ್ತಿದ್ದ ಚಿರತೆ, ಜನರಲ್ಲಿ ಭಯ ಉಂಟು ಮಾಡುತ್ತಿತ್ತು, ರಾತ್ರಿ ಗಸ್ತಿನಲ್ಲಿದ್ದ ಪೊಲೀಸರಿಗೂ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಆದರೂ ಅರಣ್ಯ ಇಲಾಖೆ ಅಧಿಕಾರಿಗಳು ಅದನ್ನು ಅಲ್ಲಗಳೆದಿದ್ದರು. ಗುರುವಾರ ಸಂಜೆ ಸುಮಾರು ೭ ಗಂಟೆಯಲ್ಲಿ ಕಾಲೇಜು ಬಳಿ ಮತ್ತೆ ಕಾಣಿಸಿಕೊಂಡಿದೆ ಎಂದು ಹೇಳಿದಾಗ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿ ರಾತ್ರಿ ೧೦ ಗಂಟೆಯವರೆಗೂ ಕಾಲೇಜು ಸುತ್ತ ಜಾಲಾಡಿದ್ದಾರೆ. ಆದರೆ ಚಿರತೆ ಬಗ್ಗೆ ಸುಳಿವು ಸಿಗಲಿಲ್ಲ, ಆದರೂ ಇದೊಂದು ಹುಸಿ ಹೇಳಿಕೆಯಾಗಿರಬಹುದು ಎಂದು ಸುಮ್ಮನಾಗಿದ್ದರು. ಪಟ್ಟಣದ ಮುಳ್ಳೂರು ರಸ್ತೆ, ರಾಜ್ ಪ್ರಕಾಶ್ ಶಾಲೆ ಬಳಿ ಶುಕ್ರವಾರ ಬೆಳಿಗ್ಗೆ ಸುಮಾರು ೮ ಗಂಟೆಗೆ ಸಾರ್ವಜನಿಕರಿಗೆ ಕಾಣಿಸಿಕೊಂಡ ಚಿರತೆ ಪಟ್ಟಣದ ಕನಕನಗರ ನಿವಾಸಿಗಳಾದ ವೆಂಕಟೇಶ್, ಕರಿಗೌಡ, ಪರಶಿವ ಅವರ ಮೇಲೆ ಎಗರಿ ಗಾಯಗೊಳಿಸಿದೆ, ಚಿರತೆ ಹಿಡಿಯಲು ಬಂದಿದ್ದ ಅರಣ್ಯಾಧಿಕಾರಿ ಮಂಜು ಅವರ ಮೇಲೂ ದಾಳಿ ಮಾಡಿದೆ.
ಗುಜರಾತ್ ಆಪ್ ಮುಖ್ಯಮಂತ್ರಿ ಅಭ್ಯರ್ಥಿ ಹೆಸರು ಘೋಷಣೆ
ಅಹಮದಾಬಾದ್, ನ. ೪: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಶುಕ್ರವಾರ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಮಾಜಿ ಪತ್ರಕರ್ತ ಈಸುದನ್ ಗಧ್ವಿ ಅವರ ಹೆಸರನ್ನು ಘೋಷಿಸಿದೆ. ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ರಾಷ್ಟಿçÃಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಗುಜರಾತ್ ಚುನಾವಣೆಯಲ್ಲಿ ಈಸುದನ್ ಗಧ್ವಿ ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದ್ದಾರೆ.
ಗುಂಡಿಕ್ಕಿ ಶಿವಸೇನಾ ಮುಖಂಡನ ಹತ್ಯೆ
ಅಮೃತಸರ, ನ. ೪: ಪಂಜಾಬಿನ ಅಮೃತಸರದಲ್ಲಿ ಹಾಡಹಗಲೇ ಶಿವಸೇನಾ ಮುಖಂಡ ಸುಧೀರ್ ಸೂರಿ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಸೂರಿ ಮತ್ತಿತರ ಪಕ್ಷದ ಕೆಲವು ಮುಖಂಡರು ದೇವಾಲಯವೊಂದರ ಬಳಿ ಪ್ರತಿಭಟನೆ ನಡೆಸುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ. ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಸೂರಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಬದುಕುಳಿಯಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಘಟನೆಗೆ ಸಂಬAಧಿಸಿದAತೆ ಆರೋಪಿಯೊಬ್ಬನನ್ನು ಬಂಧಿಸಲಾಗಿದ್ದು, ಆತನಿಂದ ಬಂದೂಕನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.
ಚಂದ್ರಶೇಖರ್ ಸಾವಿನ ಪ್ರಕರಣ-ತನಿಖೆ ಚುರುಕು
ಹೊನ್ನಾಳಿ, ನ. ೪: ಶಾಸಕ ಎಂ.ಪಿ. ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಸಾವಿನ ಪ್ರಕರಣಕ್ಕೆ ಸಂಬAಧಿಸಿದAತೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ತನಿಖೆ ಚುರುಕುಗೊಳಿಸಲಾಗಿದೆ. ಎಫ್ಐಆರ್ನಲ್ಲಿ ಐಸಿಸಿ ಸೆಕ್ಷನ್ ೩೦೨, ೨೦೧ ಮತ್ತು ೪೨೭ ಅಡಿ ಕೊಲೆ, ಸಾಕ್ಷö್ಯನಾಶ, ಮತ್ತು ವಾಹನ ಜಖಂ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಮೃತ ಚಂದ್ರಶೇಖರ್ ಅವರ ತಂದೆ ರಮೇಶ್ ನೀಡಿರುವ ದೂರಿನ ಅನ್ವಯ ಎಫ್ಐಆರ್ ದಾಖಲಾಗಿದೆ. ಈ ಮೊದಲು ವ್ಯಕ್ತಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ತುಂಗಾ ನಾಲೆಯಲ್ಲಿ ಪತ್ತೆಯಾದ ಕಾರಿನ ಹಿಂಬದಿಯ ಸೀಟ್ನಲ್ಲಿ ಚಂದ್ರು ಮೃತದೇಹ ಪತ್ತೆಯಾಗಿತ್ತು. ಕೈಕಾಲು ಕಟ್ಟಿಹಾಕಿ, ಕಿವಿಗಳಿಗೆ ಹಲ್ಲೆ ಮಾಡಲಾಗಿದೆ. ಕಾರು ಪತ್ತೆಯಾಗಿದ್ದ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು, ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ವೇಳೆ ಎಫ್ಎಸ್ಎಲ್ ತಜ್ಞರು ಸ್ಯಾಂಪಲ್ಗಳನ್ನು ಸಂಗ್ರಹಿಸಿದೆ. ಇನ್ನು ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದ ಬಳಿಕ ರೇಣುಕಾಚಾರ್ಯ ನೇರವಾಗಿ ಇದೊಂದು ಕೊಲೆ ಎಂದಿ ದ್ದಾರೆ. ಒಟ್ಟಾರೆ ಚಂದ್ರಶೇಖರ್ ಪ್ರಕರಣ ಮತ್ತಷ್ಟು ಗಂಭೀರತೆ ಪಡೆದಿದೆ.
ದೆಹಲಿಯಲ್ಲಿ ಮಿತಿಮೀರಿದ ವಾಯು ಮಾಲಿನ್ಯ
ನವದೆಹಲಿ, ನ. ೪: ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯಕ್ಕೆ ಮುಖ್ಯ ಕಾರಣವಾಗಿರುವ ಹುಲ್ಲು ಸುಡುವಿಕೆಗೆ ಹೊಸ ಮಾರ್ಗಸೂಚಿಗಳನ್ನು ಸೂಚಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಾ. ೧೦ ರಂದು ವಿಚಾರಣೆಗೆ ಕೈಗೆತ್ತಿಗೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಕೊಂಡಿದೆ. ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಮತ್ತು ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರನ್ನೊಳಗೊಂಡ ನ್ಯಾಯಪೀಠವು, ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ವಕೀಲ ಶಶಾಂಕ್ ಶೇಖರ್ ಝಾ ಅವರ ಅರ್ಜಿಯನ್ನು ವಿಚಾರಣೆ ನಡೆಸಲು ಒಪ್ಪಿಕೊಂಡಿತು. ದೆಹಲಿಯ ಸಮೀಪವಿರುವ ಪಂಜಾಬ್ ರಾಜ್ಯದಲ್ಲಿ ಕೋಲುಗಳನ್ನು ಸುಡುವುದರಿಂದ ವಾಯುಮಾಲಿನ್ಯ ಪರಿಸ್ಥಿತಿಯು ಹದಗೆಟ್ಟಿದೆ. ಇಂತಹ ಪರಿಸ್ಥಿತಿಯಲ್ಲಿ ಸಾಮಾನ್ಯ ಜನರು ನಡೆದುಕೊಂಡು ಹೋಗಲು ಸಹ ಸಾಧ್ಯವಿಲ್ಲ ಎಂದು ವಕೀಲರು ಹೇಳಿದರು, ಕೋಲು ಸುಡುವುದರಿಂದ ವಾಯು ಗುಣಮಟ್ಟ ಸೂಚ್ಯಂಕ ಮಟ್ಟ ಹೆಚ್ಚಾಗಿದೆ ಎಂದು ಹೇಳಿದರು.
ದೆಹಲಿ ಪಾಲಿಕೆ ಚುನಾವಣೆ ದಿನಾಂಕ ಘೋಷಣೆ
ನವದೆಹಲಿ, ನ. ೪: ದೆಹಲಿ ಮಹಾನಗರ ಪಾಲಿಕೆಗೆ ಚುನಾವಣೆ ಘೋಷಣೆಯಾಗಿದ್ದು, ಡಿಸೆಂಬರ್ ೪ ರಂದು ಮತದಾನ ನಡೆಯಲಿದೆ ಮತ್ತು ಡಿಸೆಂಬರ್ ೭ ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ವಿಜಯ್ ದೇವ್ ಅವರು ಪ್ರಕಟಿಸಿದ್ದಾರೆ. ಈಗಾಗಲೇ ರಾಷ್ಟç ರಾಜಧಾನಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ದೇವ್ ತಿಳಿಸಿದ್ದಾರೆ.
ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ
ಚೆನ್ನೆöÊ, ನ. ೪: ಕೆಲವು ಸ್ಥಳಗಳನ್ನು ಹೊರತುಪಡಿಸಿ ಇತರೆ ಸ್ಥಳಗಳಲ್ಲಿ ಅನುಮತಿ ನಿರಾಕರಿಸಲು ಯಾವುದೇ ಪ್ರತಿಕೂಲ ಪರಿಸ್ಥಿತಿ ಕಂಡುಬAದಿಲ್ಲ. ತಾ. ೬ ರಂದು ತಮಿಳುನಾಡಿನಾದ್ಯಂತ ೪೪ ಸ್ಥಳಗಳಲ್ಲಿ ಆರ್ಎಸ್ಎಸ್ ಪಥ ಸಂಚಲನ ನಡೆಸಬಹುದು ಎಂದ ಮದ್ರಾಸ್ ಹೈಕೋರ್ಟ್ ಶುಕ್ರವಾರ ಹೇಳಿದೆ. ಆದಾಗ್ಯೂ, ಕೊಯಮತ್ತೂರು ನಗರ, ಪೊಲ್ಲಾಚಿ, ಮೆಟ್ಟುಪಾಳ್ಯಂ, ಪಲ್ಲಡಂ, ಅರುಮನೈ ಮತ್ತು ನಾಗರ್ಕೋಯಿಲ್ ಸೇರಿದಂತೆ ಆರು ಸ್ಥಳಗಳಲ್ಲಿ ಆರ್ಎಸ್ಎಸ್ ಪಥಸಂಚಲನ ನಡೆಸಲು ನ್ಯಾಯಮೂರ್ತಿ ಜಿ.ಕೆ. ಇಳಂತಿರಾಯನ್ ಅವರು ಅನುಮತಿ ನಿರಾಕರಿಸಿದ್ದಾರೆ. ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸಾರ್ವಜನಿಕ ಸಭೆಗಳನ್ನು ಆವರಣದೊಳಗೆ ನಡೆಸಬೇಕು ಮತ್ತು ಹೊರಾಂಗಣದಲ್ಲಿ ಮೆರವಣಿಗೆಗಳನ್ನು ನಡೆಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ. ತಮಿಳುನಾಡು ಪೊಲೀಸರು ಸಲ್ಲಿಸಿದ ಗುಪ್ತಚರ ವರದಿಯನ್ನು ಪರಿಶೀಲಿಸಿದಾಗ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ನಿದರ್ಶನಗಳು ಕೆಲವು ಸ್ಥಳಗಳಲ್ಲಿ ಮಾತ್ರ ಕಂಡುಬAದಿದೆ. ಅವುಗಳನ್ನು ಹೊರತುಪಡಿಸಿ ಇತರೆ ಸ್ಥಳಗಳಲ್ಲಿ ಅನುಮತಿ ನಿರಾಕರಿಸಲು ಯಾವುದೇ ಪ್ರತಿಕೂಲ ಪರಿಸ್ಥಿತಿ ಕಂಡುಬAದಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಪಿಎಫ್ಐ ಮೇಲಿನ ನಿಷೇಧದ ನಂತರ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಉಲ್ಲೇಖಿಸಿ ಆರಂಭದಲ್ಲಿ ಅಕ್ಟೋಬರ್ ೨ ರಂದು ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ ತಮಿಳುನಾಡು ಪೊಲೀಸರು ಅನುಮತಿ ನೀಡಲು ನಿರಾಕರಿಸಿದ ನಂತರ ಆರ್ಎಸ್ಎಸ್ ಸದಸ್ಯರು ಸಲ್ಲಿಸಿದ ನ್ಯಾಯಾಂಗ ನಿಂದನೆ ಅರ್ಜಿಗಳ ಮೇಲೆ ಮದ್ರಾಸ್ ಹೈಕೋರ್ಟ್ ಈ ಆದೇಶ ಹೊರಡಿಸಿದೆ.