ಮಡಿಕೇರಿ, ನ. ೫ : ತಾ. ೧೧ ರಂದು ದಾಸಶ್ರೇಷ್ಠ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಪೂರ್ವಭಾವಿ ಸಭೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಭಕ್ತ ಕನಕದಾಸರ ಜಿಲ್ಲಾ ಮಟ್ಟದ ಜಯಂತಿ ಕಾರ್ಯಕ್ರಮವನ್ನು ಕುಶಾಲನಗರದ ವಾಲ್ಮೀಕಿ ಭವನದಲ್ಲಿ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಭಕ್ತ ಕನಕದಾಸರ ಜಯಂತಿಯನ್ನು ಶಿಷ್ಟಾಚಾರದಂತೆ ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಜಿಲ್ಲಾಡಳಿತ ವತಿಯಿಂದ ಶಿಷ್ಟಾಚಾರದಂತೆ ಆಹ್ವಾನ ಪತ್ರ ಮುದ್ರಿಸಲಾಗುವುದು. ಭಕ್ತ ಕನಕದಾಸರ ಕುರಿತು ಕೀರ್ತನೆಗಳ ಗೀತಾಗಾಯನ ಏರ್ಪಡಿಸಲಾಗುವುದು. ಕೊಡಗು ಜಿಲ್ಲೆಯವರನ್ನು ಮುಖ್ಯ ಭಾಷಣಕಾರರನ್ನಾಗಿ ಆಹ್ವಾನಿಸುವುದು, ಮತ್ತಿತರ ಬಗ್ಗೆ ಸಮಾಜದ ಮುಖ್ಯಸ್ಥರೊಂದಿಗೆ ಚರ್ಚಿಸಿ ಅಗತ್ಯ ಕ್ರಮಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.
ಹೆಚ್ವುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ ಮಾತನಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕÀ ಚಿನ್ನಸ್ವಾಮಿ, ಮಣಜೂರು ಮಂಜುನಾಥ್ ಅವರು ಕನಕದಾಸ ಜಯಂತಿ ಸಿದ್ಧತೆ ಸಂಬAಧ ಹಲವು ಮಾಹಿತಿ ನೀಡಿದರು.
ಸಂಗೊಳ್ಳಿ ರಾಯಣ್ಣ ಕುರುಬರ ವೇದಿಕೆಯ ಅಧ್ಯಕ್ಷ ಡಿ.ಆರ್. ಪ್ರಭಾಕರ್, ಉಪಾಧ್ಯಕ್ಷರಾದ ಮಂಜುನಾಥ್, ಪುಟ್ಟಸ್ವಾಮಿ, ಸಹ ಕಾರ್ಯದರ್ಶಿ ಕುಮಾರ್, ಸಂಘಟನಾ ಕಾರ್ಯದರ್ಶಿ ಕೆ.ಆರ್. ರವಿ., ನಿರ್ದೇಶಕ ಭರಮಣ್ಣ, ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಗಂಗಾಧರ, ಹಾಲುಮತ ಮಹಾಸಭಾ ವೇದಿಕೆಯ ಅಧ್ಯಕ್ಷ ರವಿಗೌಡ, ಪ್ರಧಾನ ಕಾರ್ಯದರ್ಶಿ ವಿ.ಆರ್.ನಾಗರಾಜು, ಇತರರು ಇದ್ದರು.