ಸುಂಟಿಕೊಪ್ಪ, ನ. ೫: ಸುಂಟಿಕೊಪ್ಪ ಹೋಬಳಿಯ ಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ, ದೇಯಿಬೈದೇದಿ ಬಿಲ್ಲವ ಮಹಿಳಾ ಸಂಘ ಹಾಗೂ ಬಿಲ್ಲವ ವಿದ್ಯಾರ್ಥಿ ಘಟಕದ ಸಂಯುಕ್ತ ಆಶ್ರಯದಲ್ಲಿ ಬಿಲ್ಲವ ಕ್ರೀಡಾಕೂಟ ಮಾದಾಪುರ ಡಿ’ಚೆನ್ನಮ್ಮ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯಿತು.
ಕ್ರಿಕೆಟ್ ಪಂದ್ಯಾಟವನ್ನು ಹರದೂರು ಗ್ರಾ.ಪಂ.ಅಧ್ಯಕ್ಷ ಬಿ.ಡಿ. ಪದ್ಮನಾಭ ಹಾಗೂ ಬೇಳೂರು ಗ್ರಾ. ಪಂ. ಅಧ್ಯಕ್ಷ ಬಿ.ಎಂ. ಪ್ರಶಾಂತ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಗೌರವ ಅಧ್ಯಕ್ಷ ಬಿ.ಕೆ. ಮೋಹನ ಮಾತನಾಡಿ, ಮೂರು ದಿನ ನಡೆಯುವ ಕ್ರೀಡಾಕೂಟದಲ್ಲಿ ಭಾಗವಹಿಸುವ
(ಮೊದಲ ಪುಟದಿಂದ) ಆಟಗಾರರು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದರು. ಸಮಾರಂಭದಲ್ಲಿ ಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಬಿ.ಎಂ. ಮುಖೇಶ್, ಉಪಾಧ್ಯಕ್ಷ ನಾಗೇಶ್ ಪೂಜಾರಿ, ದೇಯಿ ಬೈದೇದಿ ಮಹಿಳಾ ಘಟಕದ ಸದಸ್ಯೆ ಜಯಂತಿ ಕೃಷ್ಣಪ್ಪ, ಕಾರ್ಯಕಾರಿ ಸಮಿತಿ ಸದಸ್ಯ ತೊಂಡೂರು ದಿನೇಶ, ಸಲಹಾ ಸಮಿತಿ ಸದಸ್ಯ ಹೊಸತೋಟ ಪದ್ಮನಾಭ, ಬಿ.ಎ.ಕೃಷ್ಣಪ್ಪ ಹಾಜರಿದ್ದರು. ಕೊಡಗಿನ ಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘದ ಹತ್ತು ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಬಿಲ್ಲವ ಸಮುದಾಯದ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ