ಸೋಮವಾರಪೇಟೆ, ನ. ೬: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸಿ ಕೊಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಕರ್ನಾಟಕ ಒಕ್ಕಲಿಗರ ಸಂಘದಿAದ ಮುಂದಿನ ದಿನಗಳಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ ಹೇಳಿದರು.

ತಾಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆ ಯಲ್ಲಿ ನೂತನವಾಗಿ ನಿರ್ಮಿಸಿರುವ ವಿಜ್ಞಾನ ಪ್ರಯೋಗ ಶಾಲೆಯ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಒಕ್ಕಲಿಗ ಸಮುದಾಯದವರು ಕೃಷಿ ಮಾಡಿ ಕೊಂಡು ಜೀವನ ಸಾಗಿಸುತ್ತಿದ್ದಾರೆ. ಅವರ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಕಲ್ಪಿಸಬೇಕೆಂದು ತಾಲೂಕು ಒಕ್ಕಲಿಗರ ಸಂಘದವರು ಆಂಗ್ಲ ಮಾಧ್ಯಮ ಶಾಲೆಯನ್ನು ತೆರೆದು ಎಲ್ಲಾ ಸಮುದಾಯದ ಜನರಿಗೂ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಎಂದರು. ರಾಜ್ಯ ಒಕ್ಕಲಿಗರ ಸಂಘದಿAದ ಸಿಗುವಂತಹ ಸೌಲಭ್ಯಗಳನ್ನು ಶಾಲೆಯ ಅಭಿವೃದ್ಧಿಗೆ ನೀಡಲಾಗುವುದು.

ಒಕ್ಕಲಿಗರ ಸಂಘದಿAದ ವಿಶ್ವವಿದ್ಯಾಲಯ ಸ್ಥಾಪನೆಗೆ ಯೋಜನೆ ಪ್ರಗತಿಯಲ್ಲಿದೆ. ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು ಎಂದು ಹೇಳಿದರು.

ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ಮಾತನಾಡಿ, ಗ್ರಾಮೀಣ ಮಕ್ಕಳಿಗೆ ಆಂಗ್ಲ ಮಾಧ್ಯಮದ ಶಿಕ್ಷಣ ಸಿಗಬೇಕು ಎಂಬ ಉದ್ದೇಶದಿಂದಲೇ ವಿದ್ಯಾಸಂಸ್ಥೆ ಸ್ಥಾಪನೆ ಮಾಡಿದ್ದೇವೆ.

ಕಳೆದ ೬ ವರ್ಷಗಳಿಂದ ಹತ್ತನೆ ತರಗತಿಯಲ್ಲಿ ಶೇ. ೧೦೦ ರಷ್ಟು ಫಲಿತಾಂಶ ಬರುತ್ತಿದೆ. ಮುಂದಿನ ಸಾಲಿನಿಂದ ೧೧ ಮತ್ತು ೧೨ನೇ ತರಗತಿಗೆ ವಿಜ್ಞಾನ ವಿಭಾಗ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ದಾನಿಗಳಾದ ಬೆಂಗಳೂರಿನ ಬಿ.ಈ. ರಾಮಚಂದ್ರ ಅವರು ರಸಾಯನಶಾಸ್ತç ಪ್ರಯೋಗಶಾಲೆ, ನಗರೂರು ಎಸ್ಟೇಟ್ ಮಾಲೀಕ ಡಾ. ಮಂಥರ್‌ಗೌಡ- ಭೌತಶಾಸ್ತç ಲ್ಯಾಬ್, ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ-ಜೀವಶಾಸ್ತç ಲ್ಯಾಬ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ವಲಯ ಮತ್ತು ತಾಲೂಕು ಮಟ್ಟದ ತರಗತಿಯಲ್ಲಿ ಶೇ. ೧೦೦ ರಷ್ಟು ಫಲಿತಾಂಶ ಬರುತ್ತಿದೆ. ಮುಂದಿನ ಸಾಲಿನಿಂದ ೧೧ ಮತ್ತು ೧೨ನೇ ತರಗತಿಗೆ ವಿಜ್ಞಾನ ವಿಭಾಗ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ದಾನಿಗಳಾದ ಬೆಂಗಳೂರಿನ ಬಿ.ಈ. ರಾಮಚಂದ್ರ ಅವರು ರಸಾಯನಶಾಸ್ತç ಪ್ರಯೋಗಶಾಲೆ, ನಗರೂರು ಎಸ್ಟೇಟ್ ಮಾಲೀಕ ಡಾ. ಮಂಥರ್‌ಗೌಡ- ಭೌತಶಾಸ್ತç ಲ್ಯಾಬ್, ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ-ಜೀವಶಾಸ್ತç ಲ್ಯಾಬ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ವಲಯ ಮತ್ತು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪ್ರಶಸ್ತಿಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸ ಲಾಯಿತು.

ವಿದ್ಯಾಸಂಸ್ಥೆಯ ಅಭಿವೃದ್ಧಿಗೆ ಹೆಚ್ಚಿನ ಧನಸಹಾಯ ಮಾಡಿದ ಬಿ.ಈ. ರಾಮಚಂದ್ರ-ಚAದ್ರಕಲಾ ದಂಪತಿಯನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಂ. ಚಂಗಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಶಾಲೆಯ ಭಾತ್ಮೀದಾರರಾದ ಕೆ.ಎಂ. ಜಗದೀಶ್, ಸಂಘದ ಕಾರ್ಯದರ್ಶಿ ಎನ್.ಬಿ. ಗಣಪತಿ, ಖಜಾಂಚಿ ಜಿ.ಪಿ. ಲಿಂಗರಾಜು, ಮುಖ್ಯ ಶಿಕ್ಷಕಿ ಮಿಲ್ಡೆçಡ್ ಗೊನ್ಸಾಲ್ವೆಸ್ ಇದ್ದರು.