ಸೋಮವಾರಪೇಟೆ, ನ. ೫: ತಾಲೂಕಿನ ನೇರುಗಳಲೆ ಹಾಗೂ ಗಣಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಡಿನಾಡೂರು ಗ್ರಾಮದ ರಸ್ತೆ ದುಸ್ಥಿತಿಯಲ್ಲಿದ್ದು, ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಮೇರೆ ಸಂಬAಧಿಸಿದ ಅಧಿಕಾರಿಗಳು ೧೫ ದಿನಗಳ ಒಳಗೆ ಸ್ಥಳ ಪರಿಶೀಲಿಸಿ ಸರಿಪಡಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಆದೇಶ ಬಂದಿದೆ.

ರಸ್ತೆಯನ್ನು ಸರಿಪಡಿಸುವಂತೆ ಆದೇಶ ಬಂದು ೧೫ ದಿನಗಳು ಕಳೆದರೂ ಸ್ಥಳಕ್ಕೆ ಯಾವೊಬ್ಬ ಅಧಿಕಾರಿಗಳು ಬಂದು ಪರಿಶೀಲಿಸಿ ಸಮಸ್ಯೆ ಪರಿಹರಿಸಲು ಮುಂದಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಅಬ್ಬೂರುಕಟ್ಟೆಯಿಂದ ಆಡಿನಾಡೂರು ಮಾರ್ಗವಾಗಿ ಹೆಬ್ಬಾಲೆಗೆ ಸಂಪರ್ಕ ಕಲ್ಪಿಸುವ ರಸ್ತೆ ಅಲ್ಲಲ್ಲಿ ಗುಂಡಿ ಬಿದ್ದಿದೆ. ಸರಿಪಡಿಸು ವಂತೆ ಶಾಸಕರು, ಸಂಸದರು ಸೇರಿದಂತೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ, ಸರಿಪಡಿಸಲು ಯಾರೂ ಮುಂದಾಗಲಿಲ್ಲ. ಆದುದರಿಂದ ಮುಖ್ಯಮಂತ್ರಿಗಳಿಗೂ ದೂರು ನೀಡಲಾಗಿತ್ತು. ಈ ವಿಷಯಕ್ಕೆ ಸಂಬAಧಿಸಿದAತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವ ಹಣಾಧಿಕಾರಿಗಳಿಗೆ ಸೂಕ್ತ ಕ್ರಮ ತೆಗೆದು ಕೊಳ್ಳಬೇಕೆಂದು ಮುಖ್ಯಮಂತ್ರಿಗಳ ಅಧೀನ ಕಾರ್ಯದರ್ಶಿಗಳಾದ ಸಿ.ವಿ. ಹರಿದಾಸನ್ ಆದೇಶ ನೀಡಿದ್ದರು.

ಈ ರಸ್ತೆಯಲ್ಲಿ ಸಾಕಷ್ಟು ವಾಹನಗಳು ಸಂಚರಿಸುತ್ತಿವೆ. ರಾತ್ರಿ ಸಂಚರಿಸುವಾಗ ಹಲವು ದ್ವಿಚಕ್ರ ವಾಹನಗಳು ಅಪಘಾತಕ್ಕೀಡಾಗುತ್ತಿವೆ. ಕಾಡಾನೆಗಳ ಹಾವಳಿ ಹೆಚ್ಚಾಗಿರುವು ದರಿಂದ ರಾತ್ರಿ ಮತ್ತು ಬೆಳಗ್ಗಿನ ಸಂದರ್ಭ ಸಂಚಾರಕ್ಕೆ ತೊಂದರೆ ಯಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಈ ರಸ್ತೆ ನೇರುಗಳಲೆ ಹಾಗೂ ಗಣಗೂರು ಗ್ರಾಮ ಪಂಚಾಯಿತಿ ಗಳಿಗೆ ಹೊಂದಿಕೊAಡಿದೆ. ಮಸಗೋಡು ಗ್ರಾಮದಿಂದ ಕಣಿವೆ ರಸ್ತೆ ತೀರಾ ಹದಗೆಟ್ಟಿರುವುದರಿಂದ ಗಣಿಗಾರಿಕೆಯಿಂದ ಕಲ್ಲನ್ನು ಸಾಗಿಸಲು ಭಾರಿ ವಾಹನಗಳು ಇದೇ ರಸ್ತೆಯಲ್ಲಿ ಸಾಗುತ್ತಿವೆ. ಇದರಿಂದ ರಸ್ತೆ ಹಾಳಾಗಲು ಕಾರಣವಾಗಿದೆ. ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ಈ ರಸ್ತೆಯಲ್ಲಿ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಕೂಡಲೇ ರಸ್ತೆಯನ್ನು ಸರಿಪಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಗ್ರಾಮದ ಎಸ್.ಈ. ಅಣ್ಣಯ್ಯ ಸೇರಿದಂತೆ ಇತರರು ಆಗ್ರಹಿಸಿದ್ದಾರೆ.