ಪಾಲಿಬೆಟ್ಟ, ನ. ೬: ಪರಿಸರ ಸಂರಕ್ಷಣಾ ಅಭಿಯಾನಕ್ಕೆ ಪಾಲಿಬೆಟ್ಟದಲ್ಲಿ ಚಾಲನೆ ನೀಡಲಾಯಿತು.

ಪಾಲಿಬೆಟ್ಟ ಲಯನ್ಸ್ ಕ್ಲಬ್ ನೇತೃತ್ವದಲ್ಲಿ ಶಾಲಾ ವಿದ್ಯಾರ್ಥಿಗಳು ಮುಖ್ಯ ಬೀದಿಗಳಲ್ಲಿ ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ ಎಂಬ ಅಭಿಯಾನ ದೊಂದಿಗೆ ಬಿತ್ತಿಪತ್ರಗಳನ್ನು ಪ್ರದರ್ಶಿಸಿ ಜಾಗೃತಿ ಮೂಡಿಸಿದರು.

ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆದ ಪರಿಸರ ಸಂರಕ್ಷಣೆ ಅಭಿಯಾನ ಕಾರ್ಯಕ್ರಮದಲ್ಲಿ ಪಾಲಿಬೆಟ್ಟ ಲಯನ್ಸ್ ಕ್ಲಬ್ ಅಧ್ಯಕ್ಷ ಡೋಮಿ ರೊಜೋರಿಯೋ ಮಾತನಾಡಿ, ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಪ್ಲಾಸ್ಟಿಕ್ ಮುಕ್ತ ಸುಂದರ ಪರಿಸರ ನಿರ್ಮಾಣ ಮಾಡಲು ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ ಎಂದು ಹೇಳಿದ ಅವರು, ಲಯನ್ಸ್ ಕ್ಲಬ್ ಮೂಲಕ ಬಟ್ಟೆ ಬ್ಯಾಗ್‌ಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು. ಲಯನ್ಸ್ ಕ್ಲಬ್ ಮೂಲಕ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದರು.

ಅರಣ್ಯ ಕಾಲೇಜು ಪ್ರಾಂಶುಪಾಲ ಡಾ. ದೇವಗಿರಿ ಮಾತನಾಡಿ ಮಾನವ ಹಾಗೂ ಪ್ರಾಣಿ - ಪಕ್ಷಿಗಳಿಗೂ ಮಾರಕ ವಾಗುವ ಪ್ಲಾಸ್ಟಿಕ್ ಅನ್ನು ಸಂಪೂರ್ಣ ತ್ಯಜಿಸಿ ಬಟ್ಟೆ, ಪೇಪರ್ ಬ್ಯಾಗ್‌ಗಳನ್ನು ಉಪಯೋಗಿಸಿ ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿಸಲು ಪ್ರತಿಯೊಬ್ಬರೂ ಸಹಕರಿಸುವುದರೊಂದಿಗೆ ಪರಿಸರ ಸಂರಕ್ಷಣೆಗೆ ಮುಂದಾಗಬೇಕೆAದರು.

ಈ ಸಂದರ್ಭ ಪ್ರಮುಖರಾದ ಡಾ. ಎ.ಸಿ. ಗಣಪತಿ, ಮಮತಾ ನಾಗರಾಜ್, ಸ್ವರೂಪ್ ಅಯ್ಯಪ್ಪ, ಅನಂತ ರಾಂ, ಕುಪ್ಪಂಡ ದೀಪಕ್, ಎಂ.ಎA. ಗಣಪತಿ, ಇನಿತ ನಾಚಪ್ಪ, ಕನ್ನಿಕಾ ಅಯ್ಯಪ್ಪ ಸೇರಿದಂತೆ ಮತ್ತಿತರರು ಹಾಜರಿದ್ದರು.