ಶನಿವಾರಸಂತೆ, ನ. ೫: ಕ್ರಿಮಿನಾಶಕ ಸೇವಿಸಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡ ಭಂಡಾರ ಗ್ರಾಮದಲ್ಲಿ ನಡೆದಿದೆ. ಚಂದ್ರೇಗೌಡ (೭೦) ಮೃತ ದುರ್ದೈವಿ. ತಾ.೩ರಂದು ಮನೆಯ ಕೊಟ್ಟಿಗೆಯಲ್ಲಿ ಕ್ರಿಮಿನಾಶಕ ಸೇವಿಸಿದ್ದು, ಮನೆಯವರು ಹೋಗಿ ನೋಡಿದ ವೇಳೆ ಚಂದ್ರೇಗೌಡ ಕುಸಿದು ಬಿದ್ದಿದ್ದರು. ತಕ್ಷಣ ಶನಿವಾರಸಂತೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಹಾಸನದ ಹಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಲಾಗಿ ಚಿಕಿತ್ಸೆ ಫಲಕಾರಿಯಾಗದೇ ಬೆಳಗ್ಗಿನ ಜಾವ ಮೃತಪಟ್ಟಿದ್ದಾರೆ. ತಂದೆ ವಿಪರೀತ ಮದ್ಯಪಾನ ಮಾಡುತ್ತಾ ಜೀವನದಲ್ಲಿ ಜಿಗುಪ್ಸೆಗೊಂಡು ಮೃತಪಟ್ಟಿರುವುದಾಗಿ ಪುತ್ರ ನೀಡಿದ ದೂರಿನ ಮೇರೆ ಪ್ರಕರಣ ದಾಖಲಿಸಿದ್ದಾರೆ.