ವೀರಾಜಪೇಟೆ, ನ. ೫: ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಬಿಜೆಪಿಯ ಟಿ.ಕೆ ಯಶೋಧ ಅವಿರೋಧವಾಗಿ ಆಯ್ಕೆಯಾದರು. ಪುರಸಭೆ ಅಧ್ಯಕ್ಷೆ ಸುನಿತಾ ಅವರ ಅಧ್ಯಕ್ಷತೆಯಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ರಂಜಿ ಪೂಣಚ್ಚ ಹಾಗೂ ಬಿಜೆಪಿಯ ಟಿ.ಕೆ ಯಶೋಧ ಅವರು ನಾಮಪತ್ರ ಸಲ್ಲಿಸಿದ್ದರು. ರಂಜಿ ಪೂಣಚ್ಚ ನಾಮಪತ್ರ ಹಿಂಪಡೆದ ಹಿನೆÀ್ನಲೆಯಲ್ಲಿ ಚುನಾವಣಾಧಿಕಾರಿ ಚಂದ್ರಕುಮಾರ್ ಯಶೋಧ ಅವರ ಆಯ್ಕೆಯನ್ನು ಸಿಂಧುಗೊಳಿಸಿದರು.

ಚುನಾವಣೆಯಲ್ಲಿ ಸ್ಥಾಯಿ ಸಮಿತಿ ಸದಸ್ಯರಿಗೆ ಮಾತ್ರ ಮತದಾನದ ಅವಕಾಶ ಇದ್ದ ಕಾರಣ ಸ್ಥಾಯಿ ಸಮಿತಿ ಸದಸ್ಯರಾದ ಬಿಜೆಪಿಯ ಸುನಿತಾ ಜೂನಾ, ಆಶಾಸುಬ್ಬಯ್ಯ, ಅನಿತಾ, ಟಿ.ಕೆ ಯಶೋಧ, ಬಿಜೆಪಿ ಬೆಂಬಲಿತ ಪಕ್ಷೇತರ ಸದಸ್ಯ ಜಲೀಲ್, ಕಾಂಗ್ರೆಸ್‌ನ ರಂಜಿ ಪೂಣಚ್ಚ, ಅಗಸ್ಟಿನ್ ಬೆನ್ನಿ, ಕಾಂಗೆಸ್ ಬೆಂಬಲಿತ ಪಕ್ಷೇತರ ಸದಸ್ಯ ರಜನಿಕಾಂತ್ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷ

(ಮೊದಲ ಪುಟದಿಂದ) ಮಂಡೇಪAಡ ವಿನಾಂಕ್ ಕುಟ್ಟಪ್ಪ, ಮುಖ್ಯಾಧಿಕಾರಿ ಚಂದ್ರಕುಮಾರ್ ಇದ್ದರು.

ಸ್ಥಾಯಿ ಸಮಿತಿ ಅಧ್ಯಕ್ಷೆ ಯಶೋಧ ಮಾತನಾಡಿ, ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಶುಚಿತ್ವಕ್ಕೆ ಮೊದಲ ಆದ್ಯತೆ ನೀಡುವ ಜೊತೆಗೆ ಅಭಿವೃದ್ದಿಗೆ ಶ್ರಮಿಸಲಾಗುವುದು. ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಇದೇ ಸಂದರ್ಭ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ತಾಲೂಕು ಅಧ್ಯಕ್ಷ ನೆಲ್ಲಿರ ಚಲನ್, ಕಾರ್ಯದರ್ಶಿ ವಾಟೇರಿರ ಬೋಪಣ್ಣ, ನಗರ ಅಧ್ಯಕ್ಷ ಟಿ.ಪಿ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.