ಭಾರತಕ್ಕೆ ಗೆಲುವು-ಸೆಮಿಫೈನಲ್‌ಗೆ ಪ್ರವೇಶ

ಮೆಲ್ಬರ್ನ್, ನ. ೬: ಭಾರತ ಕ್ರಿಕೆಟ್ ತಂಡ ಜಿಂಬಾಬ್ವೆ ವಿರುದ್ಧ ೭೧ ರನ್‌ಗಳಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾನುವಾರ ಐಸಿಸಿ ಟಿ೨೦ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿದೆ. ಈ ಮೂಲಕ ‘ಎ' ಗುಂಪಿನಲ್ಲಿ ಎರಡನೇ ಸ್ಥಾನ ಪಡೆದ ಇಂಗ್ಲೆAಡ್ ಎದುರು ಸೆಮಿಫೈನಲ್ ಪಂದ್ಯವನ್ನು ಆಡಲಿದೆ. ಇಂದು ಆಸ್ಟೆçÃಲಿಯಾದ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದೆ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಮಾಡಿದ ಭಾರತ, ಸೂರ್ಯಕುಮಾರ್ ಯಾದವ್ ಆಕರ್ಷಕ ಅರ್ಧಶತಕ (೬೧)ದ ನೆರವಿನೊಂದಿಗೆ ನಿಗದಿತ ೨೦ ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ ೧೮೬ ರನ್ ಕಲೆ ಹಾಕಿತು. ಗೆಲುವಿಗೆ ೧೮೭ ರನ್‌ಗಳ ಗುರಿ ಬೆನ್ನತ್ತಿದ ಜಿಂಬಾಬ್ವೆ ಸತತ ವಿಕೆಟ್‌ಗಳನ್ನು ಕಳೆದುಕೊಳ್ಳುವ ಮೂಲಕ ೧೭.೨ ಓವರ್‌ಗಳಲ್ಲಿ ೧೧೫ ರನ್‌ಗಳಿಗೆ ಆಲ್‌ಔಟ್ ಆಗುವ ಮೂಲಕ ಹೀನಾಯ ಸೋಲು ಅನುಭವಿಸಿತು. ಭಾರತದ ಪರ ಅಶ್ವಿನ್ ೩ ವಿಕೆಟ್ ಪಡೆದರೆ, ಮೊಹಮ್ಮದ್ ಶಮಿ ಮತ್ತು ಹಾರ್ದಿಕ್ ಪಾಂಡ್ಯ ತಲಾ ೨ ವಿಕೆಟ್ ಹಾಗೂ ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ ಮತ್ತು ಅರ್ಷದೀಪ್ ಸಿಂಗ್ ತಲಾ ೧ ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಇನ್ನು ಕೆ.ಎಲ್. ರಾಹುಲ್ ೫೧ ರನ ಗಳಿಸಿದರೆ, ಸೂರ್ಯಕುಮಾರ್ ಯಾದವ್ ೨೫ ಎಸೆತದಲ್ಲಿ ೪ ಸಿಕ್ಸ್ ೬ ಬೌಂಡರಿಗಳ ನೆರವಿನಿಂದ ಅಜೇಯರಾಗಿ ೬೧ ರನ್ ಗಳಿಸಿದರು. ಉಳಿದಂತೆ ನಾಯಕ ರೋಹಿತ್ ಶರ್ಮಾ ೧೫ ರನ್, ವಿರಾಟ್ ಕೊಹ್ಲಿ ೨೬ ರನ್, ರಿಷಭ್ ಪಂತ್ ೩ ರನ್ ಮತ್ತು ಹಾರ್ದಿಕ್ ಪಾಂಡ್ಯ ೧೮ ರನ್‌ಗಳಿಸಿ ಮಿಂಚಿದರು.

ಕುರ್ಚಿಗಾಗಿ ಪಕ್ಷ ಸೇರಬೇಡಿ - ಖರ್ಗೆ

ಬೆಂಗಳೂರು, ನ. ೬: ಶಾಸಕನಾಗಬೇಕು, ಸಚಿವನಾಗಬೇಕು, ಸಿಎಂ ಆಗಬೇಕು ಎಂದು ಕುರ್ಚಿಗಾಗಿ ಪಕ್ಷ ಸೇರಬೇಡಿ. ಪಕ್ಷದ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಬನ್ನಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರೆ ನೀಡಿದರು. ಕಾಂಗ್ರೆಸ್ ಅಧ್ಯಕ್ಷರಾದ ನಂತರ ಇದೇ ಮೊದಲ ಬಾರಿಗೆ ತವರು ರಾಜ್ಯಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ಬಳಿಕ ಅರಮನೆ ಮೈದಾನದಲ್ಲಿ ನಡೆದ ಸರ್ವೋದಯ ಸಮಾವೇಶದಲ್ಲಿ ಮಾತನಾಡಿದ ಖರ್ಗೆ, ಯಾರಿಗೆ ಬದ್ಧತೆ, ನಂಬಿಕೆ ಇರುತ್ತದೆಯೋ ಅವರು ಎಂದಿಗೂ ಪಕ್ಷ ಬಿಡುವುದಿಲ್ಲ. ಹಲವು ಜನ ಮಂತ್ರಿ ಸ್ಥಾನ, ಅಧ್ಯಕ್ಷ ಸ್ಥಾನ ಸಿಕ್ಕಿಲ್ಲ ಎಂದು ಪಕ್ಷ ಬಿಡುತ್ತಾರೆ. ನಾವು ಕುರ್ಚಿಗಾಗಿ ಪಕ್ಷ ಸೇರಬಾರದು ಎಂದು ಹೇಳಿದರು. ಕಳೆದ ೭೦ ವರ್ಷಗಳಿಂದ ಏನು ಮಾಡಿದ್ದೀರೆಂದು ಪ್ರಧಾನಿ ನರೇಂದ್ರ ಮೋದಿ ಕೇಳುತ್ತಾರೆ. ನಾವು ಕೆಲಸ ಮಾಡಿದ್ದರಿಂದಲೇ ದೇಶ ಈ ಹಂತಕ್ಕೆ ಬೆಳೆದಿದೆ. ಕಾಂಗ್ರೆಸ್ ಪಕ್ಷ ಸಂವಿಧಾನ, ಪ್ರಜಾಪ್ರಭುತ್ವ ಉಳಿಸಿದೆ. ಹಿಂದಿನ ಯಾವ ಸರ್ಕಾರ ಈ ರೀತಿ ಕೆಟ್ಟದಾಗಿ ನಡೆದುಕೊಂಡಿಲ್ಲ ಎಂದು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದರು.

ಉಪಚುನಾವಣೆ : ಬಿಹಾರ, ಹರಿಯಾಣದಲ್ಲಿ ಬಿಜೆಪಿ ಗೆಲುವು

ನವದೆಹಲಿ, ನ. ೬: ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ತಾ. ೩ ರಂದು ನಡೆದಿದ್ದ ಉಪ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಬಿಹಾರ ಮತ್ತು ಹರಿಯಾಣದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಅಲ್ಲದೆ ಒಡಿಶಾದಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ಮತ್ತು ಇತರ ಪ್ರಾದೇಶಿಕ ಪಕ್ಷಗಳ ಜಿದ್ದಾಜಿದ್ದಿ ಪೈಪೋಟಿಗೆ ಸಾಕ್ಷಿಯಾಗಿದ್ದ ೬ ರಾಜ್ಯಗಳ ೭ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಮತಎಣಿಕೆ ನಡೆಯುತ್ತಿದೆ. ಬಿಜೆಪಿ ಹರಿಯಾಣ, ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಮೂರು ಸ್ಥಾನಗಳನ್ನು ಗೆದ್ದಿದ್ದರೆ, ರಾಷ್ಟಿçÃಯ ಜನತಾ ದಳ(ಆರ್‌ಜೆಡಿ)ವು ಮೊಕಾಮಾ ವಿಧಾನಸಭಾ ಸ್ಥಾನವನ್ನು ಉಳಿಸಿಕೊಂಡಿದೆ. ಮುಂಬೈನ ಅಂಧೇರಿ (ಪೂರ್ವ) ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಶಿವಸೇನೆಯ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಅಭ್ಯರ್ಥಿ ರುತುಜಾ ಲಟ್ಕೆ ಗೆಲುವು ಸಾಧಿಸಿದರೆ, ತೆಲಂಗಾಣ ರಾಷ್ಟç ಸಮಿತಿಯು ತೆಲಂಗಾಣದ ಮುನುಗೋಡುದಲ್ಲಿ ಬಿಜೆಪಿಗಿಂತ ಸ್ವಲ್ಪ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ ಗೋಲ ಗೋಕರನಾಥ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅಮನ್ ಗಿರಿ ಅವರು ಸಮೀಪದ ಪ್ರತಿಸ್ಪರ್ಧಿ ಮತ್ತು ಸಮಾಜ ವಾದಿ ಪಕ್ಷದ ಅಭ್ಯರ್ಥಿಯನ್ನು ೩೪,೦೦೦ ಕ್ಕೂ ಹೆಚ್ಚು ಮತಗಳ ಅಂತರದಿAದ ಸೋಲಿಸಿದ್ದಾರೆ. ಹರಿಯಾಣದ ಅದಂಪುರದಲ್ಲೂ ಬಿಜೆಪಿ ಅಭ್ಯರ್ಥಿ ಭವ್ಯಾ ಬಿಷ್ಣೋಯ್ ಅವರು ಪ್ರತಿಸ್ಪರ್ಧಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಜೈಪ್ರಕಾಶ್ ಅವರನ್ನು ಸುಮಾರು ೧೬,೦೦೦ ಮತಗಳ ಅಂತರದಿAದ ಸೋಲಿಸಿದ್ದಾರೆ. ಬಿಹಾರದಲ್ಲಿ ಆರ್‌ಜೆಡಿ ಅಭ್ಯರ್ಥಿ ನೀಲಮ್ ದೇವಿ ಅವರು ಮೊಕಾಮಾ ಕ್ಷೇತ್ರದಲ್ಲಿ ೧೬,೦೦೦ ಮತಗಳಿಂದ ಗೆಲುವು ಸಾಧಿಸಿದ್ದಾರೆ.

ಗುಜರಾತ್ ಚುನಾವಣೆ : ಬಿಜೆಪಿ ಮಹತ್ವದ ನಿರ್ಧಾರ

ಅಹ್ಮದಾಬಾದ್, ನ. ೬: ಗುಜರಾತ್ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡಿದ್ದು, ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಬಿಜೆಪಿ ಮಹತ್ವದ ನಿರ್ಧಾರ ಕೈಗೊಂಡಿದೆ. ಹಾಲಿ ಶಾಸಕರು, ಸಂಸದರಾಗಿರುವವರ ಪೈಕಿ ಅವರ ಸಂಬAಧಿಕರಿಗೆ ಟಿಕೆಟ್ ನೀಡದೇ ಇರಲು ಬಿಜೆಪಿ ನಿರ್ಧರಿಸಿದೆ. ಈ ಮಾಹಿತಿಯನ್ನು ಬಿಜೆಪಿ ರಾಜ್ಯಾಧಿಯಕ್ಷ ಸಿಆರ್ ಪಾಟಿಲ್ ಸ್ಪಷ್ಟಪಡಿಸಿದ್ದಾರೆ. ಭರೂಚ್ ಸಂಸದ ಮನ್ಸುಖ್ ವಸವಾ ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಮ್ಮ ಮಗಳಿಗೆ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದರು. ಇವರ ರೀತಿಯಲ್ಲೇ ಪಕ್ಷದ ಇನ್ನೂ ಹಲವು ಸಂಸದರು, ಶಾಸಕರು, ಸಂಸದರು ಬೇಡಿಕೆಗಳನ್ನು ಹೊಂದಿದ್ದರು. ಆಡಳಿತಾರೂಢ ಬಿಜೆಪಿ ೧೮೨ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿ ಕ್ಷೇತ್ರಕ್ಕೆ ೩ ಸಂಭಾವ್ಯರ ಪಟ್ಟಿಯನ್ನು ಸಿದ್ಧಗೊಳಿಸುತ್ತಿದೆ. ಗುರುವಾರದಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಚುನಾವಣಾ ಸಮಿತಿ ಸಭೆ ನಡೆಸಲಿದ್ದಾರೆ. ಈ ನಡುವೆ ಪ್ರಣಾಳಿಕೆಗೆ ಬಿಜೆಪಿ ಸಾರ್ವಜನಿಕರಿಂದ ಸಲಹೆ ಹೇಳಿದ್ದು, ಅಗ್ರೆಸರ್ ಗುಜರಾತ್ ಎಂಬ ವೆಬ್‌ಸೈಟ್‌ನಲ್ಲಿ ಸಲಹೆ ನೀಡಬಹುದಾಗಿದೆ.

ವಿದ್ಯುತ್ ತಂತಿ ತುಳಿದು ಮೂವರು ಸಾವು

ಮೈಸೂರು, ನ. ೬: ವಿದ್ಯುತ್ ತಂತಿ ತುಳಿದು ಮೂವರು ಸಾವನ್ನಪ್ಪಿರುವ ಘಟನೆ ಇಂದು ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ನಿಲಸೋಗೆ ಗ್ರಾಮದಲ್ಲಿ ನಡೆದಿದೆ. ವರದಿಗಳ ಪ್ರಕಾರ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹರೀಶ್ (೩೨), ರಾಚೇಗೌಡ (೬೦) ಹಾಗೂ ಮಹದೇವಸ್ವಾಮಿ (೩೮) ಮೃತಪಟ್ಟಿದ್ದಾರೆ. ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ದೌಡಾಯಿಸಿದ್ದು ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಧಿಕಾರಿಗಳ ನಿರ್ಲಕ್ಷö್ಯಕ್ಕೆ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

ಬ್ಲೂ ಟಿಕ್ ಪರಿಶೀಲನೆ ಸೇವೆಗೆ ೮ ಡಾಲರ್

ನವದೆಹಲಿ, ನ. ೬: ಟ್ವಿಟರ್ ಮಾಲೀಕತ್ವ ವಹಿಸಿದ ಬಳಿಕ ಬ್ಲೂಟಿಕ್ ಪರಿಶೀಲನೆ ಸೇವೆಗೆ ೮ ಡಾಲರ್ ವಿಧಿಸುವ ಕುರಿತು ಘೋಷಣೆ ಮಾಡಿದ್ದ ಉದ್ಯಮಿ ಎಲಾನ್ ಮಸ್ಕ್ ಇದೀಗ ಈ ಪ್ರಕ್ರಿಯೆಗೆ ಐಒಸ್ ಮೂಲಕ ಚಾಲನೆ ನೀಡಿದ್ದಾರೆ. ಟ್ವಿಟರ್ ಹೊಸ ಮಾಲೀಕ ಎಲಾನ್ ಮಸ್ಕ್ ಕೆಲವೇ ದಿನಗಳ ಹಿಂದೆ ಘೋಷಿಸಿದ್ದ ಪರಿಶೀಲನಾ ಸೇವೆಯನ್ನು ಟ್ವಿಟರ್ ಇಂದು ಹೊರತಂದಿದ್ದು, ಆರಂಭಿಕ ಹಂತವಾಗಿ ಈ ನೂತನ ನವೀಕರಣ ಪ್ರಕ್ರಿಯೆಯು ಪ್ರಸ್ತುತ ಅಮೆರಿಕದ ಕೆಲವು ಪ್ರದೇಶಗಳಲ್ಲಿ ಐಫೋನ್‌ಗಳಲ್ಲಿ ಮಾತ್ರ ಲಭ್ಯವಿದೆ. ಸದ್ಯಕ್ಕೆ, ಪರಿಶೀಲನೆಯೊಂದಿಗೆ ಬ್ಲೂಟಿಕ್ ಅಮೆರಿಕ, ಕೆನಡಾ, ಆಸ್ಟೆçÃಲಿಯಾ, ನ್ಯೂಜಿಲೆಂಡ್ ಮತ್ತು ಬ್ರಿಟನ್‌ನಲ್ಲಿ ಲಭ್ಯವಿದೆ.