ಮಡಿಕೇರಿ, ನ.೭ : ಕಾಲೇಜು ಹಾಗೂ ವಿದ್ಯಾರ್ಥಿಗಳ ನಡುವಿನ ಸಂಬAಧ ಶಾಶ್ವತವಾಗಿರಬೇಕಾದರೆ ಹಳೇ ವಿದ್ಯಾರ್ಥಿಗಳು ಕಾಲೇಜಿನ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುವುದು ಅಗತ್ಯ ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ಎಂ.ರವಿಕಾಳಪ್ಪ ಅಭಿಪ್ರಾಯಪಟ್ಟಿದ್ದಾರೆ.
ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆದ ಹಳೇ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷ ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ತಾವು ಓದಿದ ಕಾಲೇಜಿನ ಅಭಿವೃದ್ಧಿಗೆ ಸಹಕರಿಸುವುದು ಜವಾಬ್ದಾರಿಯಾಗಿದೆ. ತಂಡ ರಚಿಸಿಕೊಂಡು ಹಳೇ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಮೂಲಕ ಸಂಘದ ಸದಸ್ಯತ್ವವನ್ನು ಹೆಚ್ಚಿಸಬೇಕೆಂದು ಸಲಹೆ ನೀಡಿದರು.
ಕಾರ್ಯಪ್ಪ ಕಾಲೇಜು ಕೊಡಗಿನ ಅತ್ಯಂತ ಹಳೆಯ ಕಾಲೇಜು ಆಗಿದ್ದು, ಅಭಿವೃದ್ಧಿ ಕಾರ್ಯಕ್ಕೆ ಹಳೇ ವಿದ್ಯಾರ್ಥಿಗಳು ಕೈಜೋಡಿಸಬೇಕೆಂದು ಮನವಿ ಮಾಡಿದರು. ಕೊಡಗಿನ ಉತ್ತಮ ಪರಿಸರದಲ್ಲಿ ನಾವಿದ್ದು, ನಶಿಸಿ ಹೋಗುತ್ತಿರುವ ಜೀವಿಗಳು ಹಾಗೂ ಗಿಡಮೂಲಿಕೆಗಳನ್ನು ಸಂರಕ್ಷಿಸುವ ಪಣತೊಡಬೇಕು ಎಂದರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ಸಿ.ಕೆ.ಕಿಶೋರ್ ಕುಮಾರ್ ಮಾತನಾಡಿ, ದೇಶಕ್ಕೆ ಕೊಡುಗೆ ನೀಡಿದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಹೆಸರಿನಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ನಡೆಯುತ್ತಿರುವುದು ಪುಣ್ಯದ ಕೆಲಸ. ಮಂಗಳೂರು ವಿಶ್ವವಿದ್ಯಾನಿಲಯದ ಹೆಮ್ಮೆಯ ಕಾಲೇಜು ಇದಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಆರ್ಥೋಪೆಡಿಕ್ ಸರ್ಜನ್ ಡಾ.ರವಿ ಅಪ್ಪಾಜಿ ಮಾತನಾಡಿ, ವಿದ್ಯಾರ್ಥಿಗಳಿಗೆ ತಾವು ಓದಿದ ವಿದ್ಯಾಸಂಸ್ಥೆಯ ಮೇಲೆ ಅಭಿಮಾನ ಇರಬೇಕು. ಆಗ ಮಾತ್ರ ಕಾಲೇಜಿನ ಉಳಿವು ಮತ್ತು ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಸಂಘದ ಸದಸ್ಯತ್ವ ಹೆಚ್ಚಳಕ್ಕೆ ಪೂರಕÀ ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷೆ ಡಾ.ಪಾರ್ವತಿ ಅಪ್ಪಯ್ಯ, ಶಿಕ್ಷಣ ಸಂಸ್ಥೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದದ್ದು, ವಿದ್ಯಾರ್ಥಿ ಸಂಘದ ಅನುಭವಗಳಿಂದ ವಿದ್ಯಾರ್ಥಿಗಳನ್ನು ಹಾಗೂ ಸಮುದಾಯವನ್ನು ಉತ್ತೇಜಿಸಲು ಸಹಕಾರಿಯಾಗಿದೆ. ಹಳೇ ವಿದ್ಯಾರ್ಥಿಗಳು ಒಗ್ಗೂಡಿ ವಿದ್ಯೆ ಕಲಿತ ಕಾಲೇಜಿನ ಅಭಿವೃದ್ಧಿಗೆ ಪಣ ತೊಡಬೇಕು ಎಂದರು.
ನ್ಯಾಕ್ ಸಂಬAಧಿಸಿದAತೆ ಹಳೆಯ ವಿದ್ಯಾರ್ಥಿ ಸಂಘ ಪ್ರಮುಖ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಸಂಘವನ್ನು ಮತ್ತಷ್ಟು ಬಲಿಷ್ಠ ಹಾಗೂ ಚುರುಕುಗೊಳಿಸಬೇಕಾಗಿದೆ. ಕಾಲೇಜು ಆವರಣದಲ್ಲಿ ಹುತಾತ್ಮರ ಚೌಕ ನಿರ್ಮಿಸಲು ಈಗಾಗಲೇ ನಿರ್ಧರಿಸಲಾಗಿದ್ದು, ಇದಕ್ಕೆ ಹಳೇ ವಿದ್ಯಾರ್ಥಿಗಳ ಸಂಘದಿAದ ಸಹಕಾರ ನೀಡಲಾಗಿದೆ. ಅಲ್ಲದೆ ವೇದಿಕೆಯೊಂದನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದ್ದು, ಸಂಘದ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದೆಂದು ಭರವಸೆ ನೀಡಿದರು.
ಕಾಲೇಜಿನಲ್ಲಿ ಹಳೇ ವಿದ್ಯಾರ್ಥಿಗಳ ಸಂಘದ ಸಭೆ ನಡೆಸಲು ಸಂಘದಿAದ ಕೊಠಡಿಯೊಂದನ್ನು ನಿರ್ಮಾಣ ಮಾಡುವ ಯೋಜನೆಯನ್ನು ಕೈಗೊಳ್ಳಲಾಗಿದೆ ಎಂದ ಪಾರ್ವತಿ ಅಪ್ಪಯ್ಯ, ಮುಂದಿನ ವರ್ಷ ಈ ಯೋಜನೆಯನ್ನು ಪೂರ್ಣಗೊಳಿಸ ಲಾಗುವುದು. ಕಾಲೇಜಿನ ಸುತ್ತಲು ಕಾಂಪೌAಡ್ ವಾಲ್ ನಿರ್ಮಿಸಲು ಕ್ರಿಯಾಯೋಜನೆ ಸಿದ್ಧಗೊಂಡಿದ್ದು, ಕಾಮಗಾರಿ ಶೀಘ್ರ ಪ್ರಾರಂಭವಾಗಲಿದೆ ಎಂದರು.
ಸಂಘದ ಉಪಾಧ್ಯಕ್ಷ ನಾಟೋಳಂಡ ಡಿ.ಚರ್ಮಣ, ನಿರ್ದೇಶಕರಾದ ಕಾವೇರಿ ನಂಜಪ್ಪ, ರಾಣಿ ಮಾಚಯ್ಯ, ಬಿ.ಕೆ.ಪೂಣಚ್ಚ ಹಾಗೂ ಬಿ.ಎನ್.ತಿಮ್ಮಯ್ಯ ಉಪಸ್ಥಿತರಿದ್ದರು.
ಸಭೆಯಲ್ಲಿ ಎಂ.ಬಿ.ಎ ಮತ್ತು ಟೂರಿಸಂ ನಲ್ಲಿ ಮೊದಲ ರ್ಯಾಂಕ್ ಪಡೆದ ಲಿಪಿಶ್ರೀ, ಕರ್ನಾಟಕ ಮಹಿಳಾ ಹಾಕಿ ತಂಡವನ್ನು ಪ್ರತಿನಿಧಿಸಿ ಬೆಳ್ಳಿ ಪದಕ ಪಡೆದ ಹಾಗೂ ವಿವಿಧ ರಾಷ್ಟಿçÃಯ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಸಾಧನೆ ಮಾಡಿದ ಕರವಟ್ಟಿರ ದೀಪ್ತಿ, ಅಂರ್ರಾಷ್ಟಿçÃಯ ರಸಾಯನಶಾಸ್ತç ವಿಜ್ಞಾನಿಗಳ ಪಟ್ಟಿಯಲ್ಲಿ ಹೆಸರು ಪಡೆದ ಡಾ.ಮಂಜುನಾಥ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ``ಕೊಡಗಿನ ಪರಿಸರದ ಮೇಲೆ ಪ್ರವಾಸೋದ್ಯಮದ ಪರಿಣಾಮಗಳು'' ಎಂಬ ವಿಷಯದ ಕುರಿತು ಕನ್ನಡ, ಹಿಂದಿ, ಇಂಗ್ಲೀಷ್ನಲ್ಲಿ ನಡೆಸಲಾದ ಭಾಷಣ, ಪ್ರಬಂಧ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಹಾಜರಿದ್ದ ಸದಸ್ಯರಿಗೆ ಸಂಘದ ನಿರ್ದೇಶಕ ಬಿ.ಕೆ.ನಂಜಪ್ಪ ರಸಪ್ರಶ್ನೆ ಸ್ಪರ್ಧೆ ನಡೆಸಿದರು. ಮೃತಪಟ್ಟ ಸಂಘದ ಸದಸ್ಯರಿಗೆ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಸಂಘದ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ ೨೦೨೧-೨೨ನೇ ಸಾಲಿನ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರ ಮಂಡನೆ ಮಾಡಿದರು. ನಿರ್ದೇಶಕಿ ಶೋಭಾ ಸುಬ್ಬಯ್ಯ ಪ್ರಾರ್ಥಿಸಿದರು, ಸುಶ್ಮಿತಾ ಸ್ವಾಗತಿಸಿ, ನಿಖಿಲ್ ನಾಚಪ್ಪ ನಿರೂಪಿಸಿ, ಗ್ರೀಷ್ಮ ವಂದಿಸಿದರು. ಸಭೆಯಲ್ಲಿ ಸಂಘದ ಸದಸ್ಯತ್ವ ಶುಲ್ಕವನ್ನು ರೂ.೫೦೦ ರಿಂದ ೧೦೦೦ಕ್ಕೆ ಏರಿಕೆ ಮಾಡಲು ನಿರ್ಧರಿಸಲಾಯಿತು.