ಭೂಪರಿವರ್ತನೆ : ಜಿಲ್ಲಾಧಿಕಾರಿ ಹಂತದಲ್ಲಿ ಕ್ರಮಕ್ಕೆ ಆದೇಶ
ಬೆಂಗಳೂರು, ನ. ೭: ಪಿಟಿಸಿಎಲ್ ಕಾಯ್ದೆಯ ವ್ಯಾಪ್ತಿಗೆ ಒಳಪಟ್ಟು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಸರಕಾರದಿಂದ ಮಂಜೂರಾದ ಜಮೀನಿನಲ್ಲಿ ೧೦ ಸೆಂಟ್ ಜಾಗದಲ್ಲಿ ಸ್ವಂತ ವಾಸದ ಉದ್ದೇಶಕ್ಕೆ ಭೂಪರಿವರ್ತನೆ ಮಾಡಲು ಕೋರಿ ಅರ್ಜಿ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಶೀಲಿಸಿ ಜಿಲ್ಲಾಧಿಕಾರಿ ಹಂತದಲ್ಲಿ ಭೂಪರಿವರ್ತನೆ ಮಾಡುವಂತೆ ಕಂದಾಯ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಸಿ. ಬಲರಾಮ ತಾ. ೫ ರಂದು ಆದೇಶಿಸಿದ್ದಾರೆ. ಭೂಪರಿವರ್ತನೆಯಾದ ಜಾಗವನ್ನು ಯಾವುದೇ ಕಾರಣಕ್ಕೂ ಮಾರಾಟ ಮಾಡುವಂತಿಲ್ಲ. ಮಾರಾಟ ಮಾಡುವುದಾದಲ್ಲಿ ಸರಕಾರದ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಲೋಪವಾದಲ್ಲಿ ಸಂಬAಧಪಟ್ಟ ಜಿಲ್ಲಾಧಿಕಾರಿಯನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಆದೇಶದಲ್ಲಿ ಎಚ್ಚರಿಸಲಾಗಿದೆ.
ಭಾರತಕ್ಕೆ ಶಸ್ತಾçಸ್ತç ವ್ಯಾಪಾರಿ ಸಂಜಯ್ ಭಂಡಾರಿ
ಹಸ್ತಾಂತರಕ್ಕೆ ಬ್ರಿಟನ್ ಕೋರ್ಟ್ ಆದೇಶ!
ಲಂಡನ್, ನ. ೭: ಶಸ್ತಾçಸ್ತç ವ್ಯಾಪಾರಿ ಸಂಜಯ್ ಭಂಡಾರಿ ಹಸ್ತಾಂತರದಲ್ಲಿ ಭಾರತ ಗೆದ್ದಿದ್ದು ಪರಾರಿಯಾಗಿರುವ ಶಸ್ತ್ರಾಸ್ತ್ರ ವ್ಯಾಪಾರಿ ಸಂಜಯ್ ಭಂಡಾರಿ ಅವರನ್ನು ಹಸ್ತಾಂತರಿಸಲು ಯುಕೆ ನ್ಯಾಯಾಲಯ ಅನುಮತಿ ನೀಡಿದೆ. ಭಂಡಾರಿ ವಿರುದ್ಧ ತೆರಿಗೆ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪವಿದೆ. ಅಲ್ಲದೆ, ಕೆಲವು ರಕ್ಷಣಾ ವ್ಯವಹಾರಗಳಲ್ಲಿ ಲಂಚ ಪಡೆದ ಆರೋಪವಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಶಸ್ತ್ರಾಸ್ತ್ರ ವ್ಯವಹಾರಗಳಿಗೆ ಸಂಬAಧಿಸಿದAತೆ ವಿದೇಶಿ ಕಂಪನಿಗಳಿAದ ೪೦೦ ಕೋಟಿ ರೂಪಾಯಿಗೂ ಅಧಿಕ ಮೊತ್ತದ ಕಿಕ್ ಬ್ಯಾಕ್ ಅನ್ನು ಸಂಜಯ್ ಪಡೆದಿದ್ದಾರೆ ಎನ್ನಲಾಗಿದೆ. ದುಬೈನ ಹಲವಾರು ಸಂಸ್ಥೆಗಳಲ್ಲಿ ಮಾಡಿದ ವಹಿವಾಟಿನ ದಾಖಲೆಗಳಿಂದ ಇದು ಸ್ಪಷ್ಟವಾಗಿದೆ. ಈ ವರ್ಷದ ಆರಂಭದಲ್ಲಿ ಲಂಡನ್ನ ವೆಸ್ಟ್ಮಿನ್ಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಪ್ರಕರಣವನ್ನು ಆಲಿಸಿದ ಜಿಲ್ಲಾ ನ್ಯಾಯಾಧೀಶ ಮೈಕೆಲ್ ಸ್ನೋ, ಅವರನ್ನು ಹಸ್ತಾಂತರಿಸುವುದಕ್ಕೆ ಯಾವುದೇ ನಿರ್ಬಂಧಗಳಿಲ್ಲ ಎಂದು ತೀರ್ಮಾನಿಸಿದರು. ಅಲ್ಲದೆ ಹಸ್ತಾಂತರಕ್ಕೆ ಆದೇಶಿಸಲು ಅಧಿಕಾರ ಹೊಂದಿರುವ ಯುಕೆ ಗೃಹ ಕಾರ್ಯದರ್ಶಿ ಸುಯೆಲ್ಲಾ ಬ್ರಾವರ್ಮನ್ ಅವರಿಗೆ ಪ್ರಕರಣವನ್ನು ಕಳುಹಿಸಲು ನಿರ್ಧರಿಸಿದರು. ಹಸ್ತಾಂತರವು ಪ್ರತಿವಾದಿಯ ಕನ್ವೆನ್ಷನ್ ಹಕ್ಕುಗಳೊಂದಿಗೆ ಹೊಂದಿಕೆಯಾಗುತ್ತದೆ ಎಂದು ನಾನು ತೃಪ್ತಿ ಹೊಂದಿದ್ದೇನೆ, ಪ್ರತಿವಾದಿಯನ್ನು ಹಸ್ತಾಂತರಿಸಬೇಕೆ ಎಂಬ ನಿರ್ಧಾರಕ್ಕಾಗಿ ನಾನು ಈ ಪ್ರಕರಣವನ್ನು ರಾಜ್ಯ ಕಾರ್ಯದರ್ಶಿಗೆ ಕಳುಹಿಸಬೇಕು ಎಂದು ನ್ಯಾಯಾಧೀಶ ಸ್ನೋ ಅವರು ತಮ್ಮ ತೀರ್ಪಿನಲ್ಲಿ ಹೇಳಿದ್ದರು. ಸರ್ಕಾರ ನೀಡಿದ ಭರವಸೆಯ ಆಧಾರದ ಮೇಲೆ ಮಾತ್ರ ಇಂತಹ ಆದೇಶ ಹೊರಡಿಸುತ್ತಿದ್ದೇನೆ ಎಂದು ನ್ಯಾಯಾಧೀಶರು ಹೇಳಿದರು. ಸಂಬAಧಿತ ಆರೋಗ್ಯ ನಿಬಂಧನೆಗಳೊAದಿಗೆ ನವದೆಹಲಿಯಲ್ಲಿರುವ ತಿಹಾರ್ ಜೈಲಿನಲ್ಲಿ ಭಂಡಾರಿ ಅವರನ್ನು ಪ್ರತ್ಯೇಕ ಸೆಲ್ನಲ್ಲಿ ಇರಿಸಲಾಗುವುದು ಎಂದು ಭಾರತ ಸರ್ಕಾರ ನೀಡಿದ ಭರವಸೆಯನ್ನು ಉಲ್ಲೇಖಿಸಿ ಅವರು ಹೇಳಿದರು. ಭಂಡಾರಿಗಾಗಿ ಭಾರತ ಸರ್ಕಾರದ ಹಸ್ತಾಂತರ ಕೋರಿಕೆಯನ್ನು ಆಗಿನ ಯುಕೆ ಗೃಹ ಸಚಿವೆ ಪ್ರೀತಿ ಪಟೇಲ್ ಅವರು ಜೂನ್ ೨೦೨೦ರಲ್ಲಿ ಪ್ರಮಾಣೀಕರಿಸಿದರು. ಅದೇ ವರ್ಷ ಮುಂದಿನ ತಿಂಗಳು ಹಸ್ತಾಂತರ ವಾರಂಟ್ ಮೇಲೆ ಅವರನ್ನು ಬಂಧಿಸಿತ್ತು.
ಚೀನಾವನ್ನು ಹಿಂದಿಕ್ಕಲಿದೆ ಭಾರತ
ವಾಷಿಂಗ್ಟನ್, ನ. ೭: ವಿಶ್ವಸಂಸ್ಥೆಯ ಪ್ರಕಾರ, ಜಗತ್ತಿನಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಎರಡು ದೇಶಗಳಾದ ಚೀನಾ ಮತ್ತು ಭಾರತ ೨೦೨೩ರ ಹೊತ್ತಿಗೆ ತಮ್ಮ ತಮ್ಮ ಸ್ಥಾನಗಳನ್ನು ಬದಲಾಯಿಸಿಕೊಳ್ಳಲಿವೆ. ೧.೪ ಶತಕೋಟಿ ಜನಸಂಖ್ಯೆ ಹೊಂದಿರುವ ಚೀನಾ ಅಂತಿಮವಾಗಿ ೨೦೫೦ರ ವೇಳೆಗೆ ೧.೩ ಶತಕೋಟಿಗೆ ಕುಸಿಯಲು ಪ್ರಾರಂಭಿಸುತ್ತದೆ ಮತ್ತು ಶತಮಾನದ ಅಂತ್ಯದ ವೇಳೆಗೆ, ಚೀನಿ ಜನಸಂಖ್ಯೆಯು ಕೇವಲ ೮೦೦ ದಶಲಕ್ಷಕ್ಕೆ ಇಳಿಯಬಹುದು ಎಂದು ವಿಶ್ವಸಂಸ್ಥೆ ಅಂದಾಜಿಸಿದೆ. ಭಾರತದ ಜನಸಂಖ್ಯೆಯು ಪ್ರಸ್ತುತ ಚೀನಾಕ್ಕಿಂತ ಸ್ವಲ್ಪ ಕಡಿಮೆ ಇದ್ದು, ೨೦೨೩ರಲ್ಲಿ ಅದರ ಉತ್ತರದ ನೆರೆಯ ದೇಶವನ್ನು ಮೀರಿಸುತ್ತದೆ ಮತ್ತು ೨೦೫೦ರ ವೇಳೆಗೆ ೧.೭ ಶತಕೋಟಿ ತಲುಪುವ ನಿರೀಕ್ಷೆ ಇದೆ ಎಂದು ವಿಶ್ವಸಂಸ್ಥೆ ಹೇಳಿದೆ. ವಿಶ್ವಸಂಸ್ಥೆಯ ಪ್ರಕಾರ, ಅಮೆರಿಕ ೨೦೫೦ರ ವೇಳೆಗೆ ಜಗತ್ತಿನ ಮೂರನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಬೆಳೆಯಲಿದೆ.
ಅರುಣಾಚಲ ಪ್ರದೇಶದಲ್ಲಿ ಇಬ್ಬರು ಯುವಕರ ನಾಪತ್ತೆ : ಅಪಹರಣ ಶಂಕೆ
ಅರುಣಾಚಲ ಪ್ರದೇಶ, ನ. ೭: ಅರುಣಾಚಲ ಪ್ರದೇಶದಲ್ಲಿ ಇಬ್ಬರು ಯುವಕರು ಆ.೨೪ ರಿಂದ ಭಾರತ-ಚೀನಾ ಗಡಿಯ ಪ್ರದೇಶದಿಂದ ನಾಪತ್ತೆಯಾಗಿದ್ದು ಚೀನಾದಿಂದ ಅಪಹರಣಕ್ಕೆ ಒಳಗಾಗಿರುವ ಶಂಕೆ ವ್ಯಕ್ತವಾಗಿದೆ. ಎರಡು ತಿಂಗಳಾದರೂ ಇಬ್ಬರು ಯುವಕರ ಪತ್ತೆಯಾಗಿಲ್ಲ. ಬ್ಯಾಟಿಲಂ ಟಿಕ್ರೊ (೩೩) ವರ್ಷ ಹಾಗೂ ಬಾಯಿಂಗ್ಸೋ ಮನ್ಯು (೩೫) ಆ.೧೯ ರಂದು ಔಷಧೀಯ ಸಸ್ಯಗಳ ಶೋಧದಲ್ಲಿ ಮನೆಯಿಂದ ತೆರಳಿದ್ದರು. ಆ.೨೪ ರಂದು ಕೊನೆಯದಾಗಿ ಕೆಲವು ಗ್ರಾಮಸ್ಥರಿಗೆ ಕಾಣಿಸಿಕೊಂಡಿದ್ದರು. ಅರುಣಾಚಲ ಪ್ರದೇಶದಲ್ಲಿ ಸಾಮಾನ್ಯವಾಗಿ ಔಷಧೀಯ ಸಸ್ಯಗಳನ್ನು ಶೋಧಿಸುವವರು ೧೫-೨೦ ದಿನಗಳ ಕಾಲ ತಮಗೆ ಬೇಕಾಗುವ ಆಹಾರ ಪದಾರ್ಥಗಳನ್ನು ಹೊತ್ತು ಹೋಗಿರುತ್ತಾರೆ. ಕುಟುಂಬ ಸದಸ್ಯರು ಅ.೯ ರಂದು ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿದ್ದ ಬಗ್ಗೆ ದೂರು ದಾಖಲಿಸಿದ್ದರು. ನಾಪತ್ತೆಯಾಗಿರುವ ಯುವಕರ ಕುಟುಂಬ ಸದಸ್ಯರಿಗೆ ತಮ್ಮ ಯುವಕರು ಅಚಾನಕ್ ಆಗಿ ಚೀನಾ ಗಡಿ ದಾಟಿರಬಹುದು ತತ್ಪರಿಣಾಮ ಅವರು ಚೀನಾದಿಂದ ಅಪಹರಣಕ್ಕೆ ಒಳಗಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಮುರುಘಾಶ್ರೀ ವಿರುದ್ಧ ಚಾರ್ಜ್ ಶೀಟ್
ಚಿತ್ರದುರ್ಗ, ನ. ೭: ಮುರುಘಾ ಮಠ ಶ್ರೀಗಳ ವಿರುದ್ಧ ದಾಖಲಾಗಿರುವ ೨ನೇ ಪೋಕ್ಸೋ (PಔಅSಔ ಂಛಿಣ) ಪ್ರಕರಣಕ್ಕೆ ಸಂಬAಧಿಸಿದAತೆ ದಾಖಲಾಗಿದ್ದ ಒಟ್ಟು ೬೯೪ ಪುಟಗಳ ಚಾರ್ಜ್ ಶೀಟ್ ನಲ್ಲಿ ಮಠದಲ್ಲಿ ನಡೆಯುತ್ತಿದೆ ಎನ್ನಲಾದ ಹಲವು ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಪ್ರಕರಣದ ತನಿಖೆ ನಡೆಸಿರುವ ಡಿವೈಎಸ್ಪಿ ಅನಿಲ್ ನೇತೃತ್ವದ ತಂಡ ೨ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಒಟ್ಟು ೬೯೪ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಪೋಕ್ಸೋ, ಅಟ್ರಾಸಿಟಿ ಮತ್ತು ಧಾರ್ಮಿಕ ಕೇಂದ್ರ (ಖeಟigious ಛಿeಟಿಣಡಿe) ದುರುಪಯೋಗ ಕಾಯ್ದೆ ಅಡಿಯಲ್ಲೂ ಕೇಸ್ ದಾಖಲಾಗಿದ್ದು, ೩೪೨ ಪುಟಗಳ ೨ ಸೆಟ್ನಂತೆ ಒಟ್ಟು ೬೯೪ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಮುರುಘಾಶ್ರೀ, ಲೇಡಿ ವಾರ್ಡನ್ (ರಶ್ಮಿ), ಕಾರ್ಯದರ್ಶಿ ಪರಮಶಿವಯ್ಯ ಹಾಗೂ ಮಠದ ಉತ್ತರಾಧಿಕಾರಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಆದರೆ ವಕೀಲ ಗಂಗಾಧರಯ್ಯ ಅವರು ಪ್ರಕರಣದಲ್ಲಿ ಭಾಗಿಯಾಗಿರುವ ಮಾಹಿತಿ ಇಲ್ಲ, ಈ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮುರುಘಾಶ್ರೀಗಳು ಲೇಡಿ ವಾರ್ಡನ್ ಮೂಲಕ ಮಕ್ಕಳನ್ನು ಕರೆಸಿ, ನಿರಂತರ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು. ಮತ್ತು ಬರುವ ಔಷಧಿ ಬೆರೆಸಿದ ಸೇಬು, ಚಾಕಲೇಟ್ ನೀಡಿ ಮಕ್ಕಳನ್ನು ಲೈಂಗಿಕ ದೌರ್ಜನ್ಯಕ್ಕೆ ಬಳಸಿಕೊಂಡಿದ್ದಾರೆ. ಕಚೇರಿ, ಬೆಡ್ ರೂಂ, ಬಾತ್ ರೂಂಗೆ ಕರೆದೊಯ್ದು ಬಲಾತ್ಕಾರ ಮಾಡಿದ್ದಾರೆ. ವಿರೋಧಿಸಿದವರಿಗೆ ಜೀವ ಬೆದರಿಕೆ ಹಾಕುತ್ತಿದ್ದರು. ಇದೇ ರೀತಿ ಹತ್ತಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ ಎಂದು ಚಾರ್ಜ್ ಶೀಟ್ ನಲ್ಲಿ ಆರೋಪಿಸಲಾಗಿದೆ. ಶ್ರೀಗಳ ಆಣತಿಯಂತೆ ಮಠದ ವಾರ್ಡನ್ ಶ್ರೀಗಳ ಕೊಠಡಿಗೆ ವಿದ್ಯಾರ್ಥಿನಿಯರನ್ನು ಕಳುಹಿಸಿಕೊಡುತ್ತಿದ್ದರು. ಅಲ್ಲದೆ ಈ ವಿಚಾರ ಹೊರಗೆ ಬಾಯಿ ಬಿಡದಂತೆ ವಿದ್ಯಾರ್ಥಿನಿಯರಿಗೆ ಹೆದರಿಸುತ್ತಿದ್ದರು ಎನ್ನಲಾಗಿದೆ. ಅಲ್ಲದೇ ಕೆಲ ವರ್ಷದ ಹಿಂದೆ ಓರ್ವ ಬಾಲಕಿಯ ರೇಪ್ ಅಂಡ್ ಮರ್ಡರ್ ಸಹ ಆಗಿದೆ ಎಂದು ಹೇಳಲಾಗಿದ್ದು, ಈ ಬಗ್ಗೆ ಸಂತ್ರಸ್ತ ಬಾಲಕಿಯರಿಂದ ಹೇಳಿಕೆ ಪಡೆದು, ಆಂಧ್ರ ಪ್ರದೇಶಕ್ಕೆ ತೆರಳಿದ್ದ ಪೊಲೀಸ್ ತಂಡ ಹಲವು ಮಾಹಿತಿಗಳನ್ನ ಕಲೆ ಹಾಕಿದೆ. ಮಠದ ಹಾಸ್ಟೆಲ್ ನಲ್ಲಿದ್ದ ಮತ್ತಷ್ಟು ಮಕ್ಕಳ ವಿಚಾರಣೆ ನಡೆಸಲಾಗುತ್ತಿದ್ದು, ಶ್ರೀಗಳ ವಿರುದ್ಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.