ಕೂಡಿಗೆ, ನ. ೮: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ಅಳುವಾರ ಗ್ರಾಮದಲ್ಲಿ ಕಳೆದ ೧೦ ವರ್ಷಗಳ ಹಿಂದೆ ಆರಂಭವಾದ ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿದ್ದ ಚಿಕ್ಕ ಅಳುವಾರದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರವು ಇಂದಿನಿAದ ಅಧಿಕೃತವಾಗಿ ರಾಜ್ಯ ಸರಕಾರದಿಂದ ಕೊಡಗು ವಿಶ್ವವಿದ್ಯಾನಿಲಯ ಅಗಿ ಘೋಷಣೆಗೊಂಡು ಅಧಿಕೃತ ಆದೇಶ ಪತ್ರ ಬಿಡುಗಡೆಗೊಂಡಿದೆ.
ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ವಿಧಾನ ಸಭೆಯಲ್ಲಿ ಕೊಡಗು ವಿಶ್ವವಿದ್ಯಾನಿಲಯವನ್ನು ಅರಂಭಿಸುವ ಬಗ್ಗೆ ಅನೇಕ ಬಾರಿ ಚರ್ಚೆ ಮಾಡಿದ್ದರು. ಅದರನ್ವಯ ಬಜೆಟ್ನಲ್ಲಿ ಚರ್ಚೆಗೊಂಡು ಕೊಡಗು ಜಿಲ್ಲೆಯ ವಿಶ್ವವಿದ್ಯಾನಿಲಯ ಸೇರಿದಂತೆ ರಾಜ್ಯದಲ್ಲಿ ಒಟ್ಟು ೭ ವಿಶ್ವವಿದ್ಯಾನಿಲಯಗಳನ್ನು ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಸರಕಾರ ಆದೇಶ ಹೊರಡಿಸಿದೆ.
ವಿಶ್ವವಿದ್ಯಾನಿಲಯ ಸಾಂಪ್ರದಾಯಿಕ ವಿಶ್ವವಿದ್ಯಾನಿಲಯ ಗಳಿಗಿಂತ ಭಿನ್ನವಾಗಿ ತಂತ್ರಜ್ಞಾನದ ಗರಿಷ್ಠ ಬಳಕೆಯೊಂದಿಗೆ ಹೆಚ್ಚುವರಿ ಮಾನವ ಸಂಪನ್ಮೂಲ ಉಪಯೋಗಿಸಿ ಕಾರ್ಯನಿರ್ವಹಿಸುವುದರಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಬಳಸುವ
(ಮೊದಲ ಪುಟದಿಂದ) ಮೂಲಕ ಈ ವಿಶ್ವವಿದ್ಯಾನಿಲಯಕ್ಕೆ ವಾರ್ಷಿಕ ರೂ. ೨ ಕೋಟಿ ಅನುದಾನವನ್ನು ಬಿಡುಗಡೆ ಮಾಡುವ ಆದೇಶ ಪ್ರಕಟವಾಗಿದೆ. ೨೦೨೨-೨೩ನೇ ಸಾಲಿನ ಆಯವ್ಯಯ ಘೋಷಣೆಯ ಅನುಗುಣವಾಗಿ ಕಾಲೇಜುಗಳ ಮೇಲ್ವಿಚಾರಣೆಯನ್ನು ಸುಧಾರಿಸಲು ರಾಜ್ಯದಲ್ಲಿ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶಗಳಲ್ಲಿ ವಿನೂತನ ಮಾದರಿಯ ೭ ವಿಶ್ವವಿದ್ಯಾನಿಲಯಗಳನ್ನು ಆರಂಭಿಸಲು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪೊ. ಡಾ ಜಿ. ಹೇಮಂತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಸರಕಾರ ರಚನೆ ಮಾಡಿ ಅದರ ಮೂಲಕ ವಿಶ್ವವಿದ್ಯಾನಿಲಯದ ಆರಂಭಕ್ಕೆ ಆದೇಶ ನೀಡಿದೆ. ಅದರನ್ವಯ ಕೊಡಗು, ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಪ್ಪಳ, ಬಾಗಲಕೋಟೆ ಜಿಲ್ಲೆಗಳಲ್ಲಿ ಆಯಾ ಜಿಲ್ಲೆಯ ಕೇಂದ್ರದಲ್ಲಿ ಸ್ನಾತಕೋತ್ತರ ಪದವಿ ವಿಶ್ವವಿದ್ಯಾನಿಲಯ ಶೈಕ್ಷಣಿಕ ವರ್ಷದಿಂದ ಆರಂಭಿಸಲು ಸರಕಾರ ಆದೇಶವನ್ನು ಹೊರಡಿಸಿದೆ.
ಕೊಡಗು ವಿಶ್ವವಿದ್ಯಾನಿಲಯವು ಕುಶಾಲನಗರ ತಾಲೂಕಿನ ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ಅಳುವಾರ ಗ್ರಾಮದಲ್ಲಿರುವ ೧೦೦ ಎಕರೆಗಳಷ್ಟು ಪ್ರದೇಶದಲ್ಲಿ ಪ್ರಸ್ತುತ ಕೇಂದ್ರದಲ್ಲಿ ನಡೆಯುತ್ತಿರುವ ಒಟ್ಟು ೧೫ ಕೋರ್ಸುಗಳ ಮುನ್ನಡೆಯೊಂದಿಗೆ ಕೊಡಗು ವಿಶ್ವ ವಿದ್ಯಾನಿಲಯದಲ್ಲಿ ಹೆಸರಿನ ಕೇಂದ್ರವು ಕೊಡಗು ಜ್ಞಾನ ಕಾವೇರಿ ವಿಶ್ವವಿದ್ಯಾನಿಲಯವಾಗಿ ಬೆಳಗಲಿದೆ. ಈಗಾಗಲೇ ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿ ಎಲ್ಲಾ ಕೋರ್ಸುಗಳು ಸೇರಿದಂತೆ ಎಲ್ಲಾ ಸೌಕರ್ಯ ಸೌಲಭ್ಯಗಳೊಂದಿಗೆ ಸ್ನಾತಕೋತ್ತರ ಪದವಿ ಕೇಂದ್ರ ಕಾರ್ಯನಿರ್ವಹಿಸಲಿದೆ. -ಕೆ.ಕೆ. ನಾಗರಾಜಶೆಟ್ಟ