ಶನಿವಾರಸಂತೆ, ನ. ೮: ಸಮೀಪದ ಒಡೆಯನಪುರ ಗ್ರಾಮದ ಕೂಲಿ ಕಾರ್ಮಿಕ ಮಂಜೇಗೌಡ (೫೦) ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಪ್ರೇಮಾ ಕೂಲಿ ಕೆಲಸಕ್ಕೆ ಹಾಗೂ ಮಗಳು ಶಾಲೆಗೆ ಹೋಗಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಅಡುಗೆ ಮನೆಯ ಕೌಕೋಲಿಗೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪ್ರೇಮಾ ಶನಿವಾರಸಂತೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಹೆಡ್‌ಕಾನ್ಸ್ಟೇಬಲ್ ಪಿ.ಬಿ. ನಿಶಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿದ್ದಾರೆ.