ಕೂಡಿಗೆ, ನ. ೮: ಮುಳ್ಳುಸೋಗೆ ಗ್ರಾ.ಪಂ. ವ್ಯಾಪ್ತಿಯ ರಸ್ತೆಗಳಲ್ಲಿ ಅಡ್ಡಾಡುತ್ತಿದ್ದ ದನಗಳನ್ನು ಹಿಡಿದು ಗೋಶಾಲೆಗೆ ಸ್ಥಳಾಂತರಿಸಲಾಯಿತು.

ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳುಸೋಗೆ, ಗುಮ್ಮನಕೊಲ್ಲಿ, ಗೊಂದಿಬಸವನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದAತೆ ದನಕರುಗಳನ್ನು ಸಾಕುವಂತೆ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಪ್ರಕಟಣೆ ಹೊರಡಿಸಿತ್ತು. ಮೇಲ್ವಿಚಾರಣೆ ಇಲ್ಲದೆ ರಾಜ್ಯ ಹೆದ್ದಾರಿ ಸೇರಿದಂತೆ ಸಾರ್ವಜನಿಕ ರಸ್ತೆಗಳಲ್ಲಿ ದನಗಳನ್ನು ಬಿಡದಂತೆ ಎಚ್ಚರಿಕೆ ನೀಡಿದ್ದರೂ ಕೂಡ ಸಾರ್ವಜನಿಕ ರಸ್ತೆಗಳಲ್ಲಿ ದನಗಳನ್ನು ಬಿಡುತ್ತಿರುವುದು ಕಂಡುಬAದ ಹಿನ್ನೆಲೆಯಲ್ಲಿ ಯಾವುದೇ ಮೇಲ್ವಿಚಾರಣೆ ಇಲ್ಲದೆ ಓಡಾಡುತ್ತಿರುವ ದನ ಕರುಗಳನ್ನು ಹಿಡಿದು ಗೋಶಾಲೆಗೆ ರವಾನಿಸುವ ಕಾರ್ಯ ಆರಂಭಿಸಲಾಗಿದೆ.

ಚಿಕ್ಕತ್ತೂರಿನಲ್ಲಿರುವ ಗೋಶಾಲೆಯೊಂದಿಗೆ ಗ್ರಾಮ ಪಂಚಾಯಿತಿಯು ಒಪ್ಪಂದ ಮಾಡಿಕೊಂಡಿದ್ದು, ಅಲ್ಲಿಗೆ ಗೋವುಗಳನ್ನು ರವಾನಿಸಲಾಗಿದೆ.

ಕಾರ್ಯಾಚರಣೆ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಚೆಲುವರಾಜು, ಪಿಡಿಓ ಸುಮೇಶ್, ಸದಸ್ಯರು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.