ನಾಪೋಕ್ಲು, ನ. ೮: ಸಮೀಪದ ಬಲ್ಲಮಾವಟಿ ರಾಟೆ ಶ್ರೀ ಭಗವತಿ ದೇವಸ್ಥಾನದ ಸಮೀಪ ಇರುವ ಅಂಗನವಾಡಿ ಕೇಂದ್ರದಲ್ಲಿ ೩೨ ವರ್ಷ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆ ಬಿ.ಸಿ ಲೀಲಾವತಿ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಸಂಘ ಸಂಸ್ಥೆ, ಗ್ರಾಮಸ್ಥರ ಪರವಾಗಿ ಹಿರಿಯರಾದ ಎಡಿಕೇರಿ ನಾಗರತ್ನ ಅವರು ಲೀಲಾವತಿ ಅವರನ್ನು ಶಾಲು ಹೊದಿಸಿ, ಫಲ ತಾಂಬೂಲ, ನೆನಪಿನ ಕಾಣಿಕೆ ನೀಡಿ ಗೌರವಿಸಿ, ಸನ್ಮಾನಿಸಿದರು. ಇವರ ಸೇವಾ ಅವಧಿಯಲ್ಲಿ ವಿವಿಧ ಸ್ತಿçà ಶಕ್ತಿ ಸಂಘಗಳ ರಚನೆ, ಕಟ್ಟಡ ಕಾಮಗಾರಿ ಸೇರಿದಂತೆ ಗ್ರಾಮದ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭ ಸ್ತ್ರೀ ಶಕ್ತಿ ಸಂಘದ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಸಂಘದ ಸದಸ್ಯರು, ಸಂಜೀವಿನಿ ಒಕ್ಕೂಟ ಸದಸ್ಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.