ಸಿದ್ದಾಪುರ, ನ. ೮: ಕಾಡಾನೆ ಹಾವಳಿ ಸಮಸ್ಯೆಯ ಬಗ್ಗೆ ಕರೆಯಲಾಗಿದ್ದ ಸಭೆಯನ್ನು ಬಹಿಷ್ಕರಿಸಿದ ರೈತ ಹಾಗೂ ಕಾರ್ಮಿಕ ಮುಖಂಡರು ಬಹಿಷ್ಕರಿಸಿ ಅಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟಿಸಿದ ಘಟನೆ ಕರಡಿಗೋಡುವಿನಲ್ಲಿ ನಡೆದಿದೆ.
ಸಿದ್ದಾಪುರದ ಕರಡಿಗೋಡು ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ರಾಜ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಆರ್.ಕೆ ಸಿಂಗ್ ನೇತೃತ್ವದಲ್ಲಿ ಕರೆಯಲಾಗಿದ್ದ ಕಾಡಾನೆ ಸಮಸ್ಯೆಯ ಬಗೆಗಿನ ಸಭೆಗೆ ಆಗಮಿಸಿದ ರೈತರು ಹಾಗೂ ಕಾರ್ಮಿಕ ಮುಖಂಡರು, ಸಭೆಯನ್ನು ಕಾಟಾಚಾರಕ್ಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿ, ಆಕ್ರೋಶ ವ್ಯಕ್ತಪಡಿಸಿ, ಸಭೆಯನ್ನು ಬಹಿಷ್ಕರಿಸಿದರು.
ರೈತ ಸಂಘದ ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ ಮಾತನಾಡಿ, ರೈತರು ಹಾಗೂ ಕಾರ್ಮಿಕರು ಕಾಡಾನೆ ದಾಳಿಯಿಂದ ಸಾವನ್ನಪ್ಪಿದ ಸಂದರ್ಭ ಅಧಿಕಾರಿಗಳಿಗೆ ಸಭೆ ನಡೆಸಲು ಸಾಧ್ಯವಾಗಿಲ್ಲ. ಅಧಿಕಾರಿಗಳಿಗೆ ಸಮಸ್ಯೆ ಬಹಿಷ್ಕರಿಸಿದರು.
ರೈತ ಸಂಘದ ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ ಮಾತನಾಡಿ, ರೈತರು ಹಾಗೂ ಕಾರ್ಮಿಕರು ಕಾಡಾನೆ ದಾಳಿಯಿಂದ ಸಾವನ್ನಪ್ಪಿದ ಸಂದರ್ಭ ಅಧಿಕಾರಿಗಳಿಗೆ ಸಭೆ ನಡೆಸಲು ಸಾಧ್ಯವಾಗಿಲ್ಲ. ಅಧಿಕಾರಿಗಳಿಗೆ ಸಮಸ್ಯೆ ಸುಜಯ್ ಬೋಪಯ್ಯ ಮಾತನಾಡಿ, ಕಳೆದ ಹಲವು ವರ್ಷದಿಂದ ಕಾಡಾನೆ ಸೇರಿದಂತೆ ವನ್ಯ ಪ್ರಾಣಿಗಳಿಂದ ನೂರಾರು ಮಂದಿ ಜೀವ ಕಳೆದುಕೊಂಡಿದ್ದಾರೆ. ರೈತ ಸಂಘದ ನೇತೃತ್ವದಲ್ಲಿ ಕಾರ್ಮಿಕರು, ಆದಿವಾಸಿಗಳು ಸೇರಿದಂತೆ ಜಿಲ್ಲೆಯ ವಿವಿಧ
(ಮೊದಲ ಪುಟದಿಂದ) ಸಂಘಟನೆಗಳ ನೇತೃತ್ವದಲ್ಲಿ ನ.೨೧ ರಂದು ಅರಣ್ಯ ಭವನ ಮುತ್ತಿಗೆ ಹಾಗೂ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಹೋರಾಟದ ತೀವ್ರತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕಾಟಾಚಾರಕ್ಕೆ ಸಭೆಯನ್ನು ಕರೆಯಲಾಗಿದೆ ಎಂದು ಆರೋಪಿಸಿದರು. ಹೋರಾಟವನ್ನು ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಕಾರ್ಮಿಕ ಮುಖಂಡ ಎನ್.ಡಿ. ಕುಟ್ಟಪ್ಪ ಮಾತನಾಡಿ, ಕಾಡಾನೆ ಮಾನವ ಸಂಘರ್ಷದ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿರ್ಲಕ್ಷö್ಯ ವಹಿಸುತ್ತಿದ್ದು, ಅಧಿಕಾರಿಗಳ ಬೇಜವಾಬ್ದಾರಿತನವೂ ಇದೆ. ತಾ. ೨೧ ರಂದು ನಡೆಯುವ ಬೃಹತ್ ಹೋರಾಟವನ್ನು ಬೆಂಬಲಿಸಿ, ಸರ್ಕಾರ ಹಾಗೂ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಬೇಕಿದೆ ಎಂದರು.
ಕಾರ್ಮಿಕ ಮುಖಂಡ ಪಿ.ಆರ್. ಭರತ್ ಮಾತನಾಡಿ, ಕಾಫಿ ತೋಟದಲ್ಲಿ ಕಾರ್ಮಿಕರು ಭಯದ ವಾತಾವರಣದಲ್ಲಿ ಕೆಲಸ ಮಾಡುವ ಸ್ಥಿತಿ ಇದೆ. ಅಧಿಕಾರಿಗಳು ಕಾಟಾಚಾರ ಸಭೆಗಳನ್ನು ನಡೆಸುವುದು ಬಿಟ್ಟು ಅರಣ್ಯದಲ್ಲಿ ಆನೆಗಳಿಗೆ ಬೇಕಾದ ಆಹಾರ ಇದೆಯೇ ಎಂಬುದನ್ನು ಪರಿಶೀಲಿಸಲಿ ಎಂದರು.
ರೈತ ಸಂಘದ ಜಿಲ್ಲಾ ಕಾನೂನು ಸಲಹೆಗಾರ ಕೆ.ಬಿ. ಹೇಮಚಂದ್ರ ಮಾತನಾಡಿ, ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾಡು ಪ್ರಾಣಿಗಳಿಂದ ಸಾವನ್ನಪ್ಪಿದರೆ, ಸರ್ಕಾರಿ ಉದ್ಯೋಗ ನೀಡುವ ಹಾಗೆ ಸಾರ್ವಜನಿಕರಿಗೂ ಸರ್ಕಾರಿ ಕೆಲಸ ನೀಡಬೇಕು. ೧೨೦ ವರ್ಷ ಬಾಳುವ ಕಾಫಿ ಗಿಡಕ್ಕೆ ಕೇವಲ ರೂ. ೨೦೦ ಪರಿಹಾರ ನೀಡುತ್ತಿರುವುದು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾಕ್ಷಿ ಎಂದರು.
ಈ ಸಂದರ್ಭ ಸಿದ್ದಾಪುರ ಶಾಖೆಯ ಅಧ್ಯಕ್ಷ ದೇವಣೀರ ಬೋಪಣ್ಣ, ಸಂಚಾಲಕ ಚೇನಂಡ ಪೂಣಚ್ಚ, ಕಾರ್ಯದರ್ಶಿ ಎಂ.ವಿ. ಸಜೀವನ್, ಕಾರ್ಮಿಕ ಮುಖಂಡ ಹೆಚ್.ಬಿ. ರಮೇಶ್, ಟಿ.ಟಿ. ಉದಯಕುಮಾರ್, ಕುಕ್ಕುನೂರು ಮೋಹನ್ ಸೇರಿದಂತೆ ಇನ್ನಿತರರು ಇದ್ದರು.
ಇದೇ ಸಂದರ್ಭ ಅರಣ್ಯ ಅಧಿಕಾರಿಗಳು ರೈತರು ಹಾಗೂ ಕಾರ್ಮಿಕ ಮುಖಂಡರ ಮನವೊಲಿಸಲು ಯತ್ನಿಸಿದರಾದರೂ ಅದನ್ನು ಲೆಕ್ಕಿಸದೆ ರೈತ ಹಾಗೂ ಕಾರ್ಮಿಕ ಮುಖಂಡರು ಸಭೆಯನ್ನು ಬಹಿಷ್ಕರಿಸಿ ಹೊರನಡೆದರು.
ಸರಕಾರಕ್ಕೆ ವರದಿ ಸಲ್ಲಿಕೆ
ರೈತ ಕಾರ್ಮಿಕ ಮುಖಂಡರು ಸಭೆ ಬಹಿಷ್ಕರಿಸಿದ ಬಳಿಕ ಸರ್ಕಾರಿ ಶಾಲಾ ಆವರಣದಲ್ಲಿ ಸಭೆ ನಡೆಸಲಾಯಿತು. ಈ ಸಂದರ್ಭ ಮಾತನಾಡಿದ ಬೆಳೆಗಾರ ಚೇರಂಡ ನಂದಾ ಸುಬ್ಬಯ್ಯ, ಜಿಲ್ಲೆಯಲ್ಲಿ ಅನಗತ್ಯವಾಗಿ ನಿರ್ಮಿಸುತ್ತಿರುವ ಸಫಾರಿ ಕೇಂದ್ರಗಳಿAದಾಗಿ ಕಾಡು ಪ್ರಾಣಿಗಳಿಗೆ ತೊಂದರೆಯಾಗುತ್ತದೆ. ಸಫಾರಿ ಯೋಜನೆಯನ್ನು ಕೈಬಿಡಬೇಕು. ಅರಣ್ಯದಲ್ಲಿರುವ ತೇಗದ ಮರಗಳನ್ನು ತೆರವುಗೊಳಿಸಬೇಕು ಎಂದರು.
ಪಿ.ವಿ ಜಾನ್ಸನ್ ಮಾತನಾಡಿ, ಕಾಡಾನೆ ಹಾವಳಿಯಿಂದ ಕಾಫಿ, ಭತ್ತ ಸೇರಿದಂತೆ ಕೃಷಿ ನಾಶವಾಗುತ್ತಿದೆ. ಭತ್ತದ ಗದ್ದೆಯನ್ನು ಪಾಳುಬಿಡುವಂತಾಗಿದೆ. ಕಾಡಾನೆ ದಾಳಿಯಿಂದ ಅಂಗವೈಫಲ್ಯ ಎದುರಿಸುತ್ತಿರುವವರಿಗೆ ಸರ್ಕಾರಿ ಸೂಕ್ತ ಪರಿಹಾರ ಒದಗಿಸಬೇಕು ಎಂದರು.
ಕAಬೀರAಡ ಗಣಪತಿ ಮಾತನಾಡಿ, ತೋಟಗಳಲ್ಲಿ ಮಂಗಗಳ ಹಾವಳಿ ಮಿತಿಮೀರಿದೆ. ಕಾಫಿ, ಕರಿಮೆಣಸು ಸೇರಿದಂತೆ ಕೃಷಿ ಫಸಲನ್ನು ನಾಶಮಾಡುತ್ತಿದೆ ಎಂದರು. ಮಂಗಗಳ ಹಾವಳಿ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದರು. ಗ್ರಾಮಸ್ಥರು ತಮ್ಮ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನ ಸೆಳೆದರು.
ಗ್ರಾಮಸ್ಥರ ಸಮಸ್ಯೆಯನ್ನು ಆಲಿಸಿದ ಬಳಿಕ ಮಾತನಾಡಿದ ಆರ್.ಕೆ ಸಿಂಗ್, ಕೊಡಗು ಜಿಲ್ಲೆಯ ಕಾಡಾನೆ ಹಾವಳಿಯ ಬಗ್ಗೆ ಈಗಾಗಲೇ ವರದಿಯನ್ನು ಪಡೆಯಲಾಗಿದೆ. ಸಾರ್ವಜನಿಕರು, ಸಂಘ ಸಂಸ್ಥೆಗಳ ಸಲಹೆಯನ್ನು ಪಡೆಯಲು ಸಭೆ ನಡೆಸಲಾಗಿದ್ದು, ಶೀಘ್ರದಲ್ಲಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಾಗುವುದು ಎಂದರು.
ಸಭೆಯಲ್ಲಿ ಎ.ಪಿ.ಸಿ.ಸಿ.ಎಫ್ ಮನೋಜ್, ರಂಗರಾವ್, ಎ.ಸಿ.ಸಿ.ಎಫ್ (ಆನೆ ಯೋಜನೆ) ಸರಸ್ವತಿ ಮಿಶ್ರಾ, ಸಿ.ಸಿ.ಎಫ್ ಎಸ್.ಎನ್ ಮೂರ್ತಿ, ಡಿ.ಸಿ.ಎಫ್ ಪೂವಯ್ಯ, ಎ.ಸಿ.ಎಫ್ ನೆಹರು,ವಲಯ ಅರಣ್ಯಾಧಿಕಾರಿಗಳಾದ ಕಳ್ಳೀರ ದೇವಯ್ಯ, ಅಶೋಕ ಹುನಗುಂದ, ಉಪ ವಲಯ ಅರಣ್ಯಾಧಿಕಾರಿ ಸಂಜೀತ್ ಸೋಮಯ್ಯ ಸೇರಿದಂತೆ ಇನ್ನಿತರರು ಇದ್ದರು. -ವರದಿ : ವಾಸು ಎ.ಎನ್.