ವೀರಾಜಪೇಟೆ, ನ. ೮: ಜಿಲ್ಲಾ ಕಾಂಗ್ರೆಸ್‌ನ ಕಾರ್ಮಿಕ ವಿಭಾಗದ ಉಪಾಧ್ಯಕ್ಷರಾಗಿ ವೀರಾಜಪೇಟೆಯ ನಾಗೇಶ್ ಅವರನ್ನು ನೇಮಿಸಲಾಗಿದೆ. ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಗೋವಿಂದರಾಜ್‌ದಾಸ್ ಆಯ್ಕೆ ಪ್ರಕ್ರಿಯೆ ನಡೆಸಿದರು. ಇದೇ ಸಂದÀರ್ಭ ರಾಜ್ಯ ಕಾರ್ಮಿಕ ವಿಭಾಗದ ಅಧ್ಯಕ್ಷ ಕೆ. ಪುಟ್ಟಸ್ವಾಮಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಎಸ್. ಪೊನ್ನಣ್ಣ, ಡಾ. ಮಂಥರ್‌ಗೌಡ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಚಂದ್ರಕಲಾ, ಕುಶಾಲನಗರ ಬ್ಲಾಕ್ ಅಧ್ಯಕ್ಷ ವಿ.ಪಿ. ಶಶಿಧರ್, ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಉಪಸ್ಥಿತರಿದ್ದರು.