ಸುಂಟಿಕೊಪ್ಪ, ನ. ೭: ಮಾದಾಪುರ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾಗಿ ಜ್ಯೋತಿ ಮಿಥುನ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿದ್ದ ಗೋಪಿ ಭೀಮಯ್ಯ ರಾಜೀನಾಮೆ ಸಲ್ಲಿಸಿದ್ದರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಿತು.
ಚುನಾವಣಾಧಿಕಾರಿಯಾಗಿ ಸೋಮವಾರಪೇಟೆ ಪಶುವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಬಾದಾಮಿ ಕಾರ್ಯನಿರ್ವಹಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಜ್ಯೋತಿ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯವರು ಜ್ಯೋತಿ ಉಪಾಧ್ಯಕ್ಷರೆಂದು ಘೋಷಿಸಿದರು. ಈ ಸಂದರ್ಭದಲ್ಲಿ ಮಾದಾಪುರ ಗ್ರಾ.ಪಂ. ಅಧ್ಯಕ್ಷೆ ನಿರೂಪ ಎಲ್ಲಾ ಸದಸ್ಯರುಗಳು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಟಿ.ಸಿ. ಪೂರ್ಣಕುಮಾರ್ ಹಾಜರಿದ್ದರು.